ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಿತ್ತೂರು ಪಟ್ಟಣ ಅಭಿವೃದ್ಧಿಗೆ ನೂರು ಕೋಟಿ ರೂಪಾಯಿ ಬಿಡುಗಡೆ: ಬಸವರಾಜ ಬೊಮ್ಮಾಯಿ ಭರವಸೆ

By ಧಾರವಡ ಪ್ರತಿನಿಧಿ
|
Google Oneindia Kannada News

ಧಾರವಾಡ, ಡಿಸೆಂಬರ್‌, 25: ಕಿತ್ತೂರು ನಾಡಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕಿತ್ತೂರು ಕೋಟೆಯ ಪುನರ್ ನಿರ್ಮಾಣ, ದಾಖಲೆ ಸಂರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ವಹಿಸಿದೆ. ಅಲ್ಲದೆ ಧಾರವಾಡ ರಂಗಾಯಣ ವೀರರಾಣಿ ಕಿತ್ತೂರು ಚೆನ್ನಮ್ಮ ಮೆಗಾ ನಾಟಕದ ಮೂಲಕ ಇತಿಹಾಸವನ್ನು ಮರು ಸೃಷ್ಟಿಸಿ, ಅಭಿಮಾನ ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧಾರವಾಡದಲ್ಲಿ ಹೇಳಿದರು. ಹಾಗೂ ಸರ್ಕಾರ ಕಿತ್ತೂರು ಅಭಿವೃದ್ಧಿಗೆ 100 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ತಿಳಿಸಿದರು.

ನಗರದ ಕೆಸಿಡಿ ಆವರಣದಲ್ಲಿ ಧಾರವಾಡ ರಂಗಾಯಣ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮೆಗಾ ನಾಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೀರರಾಣಿ ಕಿತ್ತೂರು ಚೆನ್ನಮ್ಮವರನ್ನು ನೆನೆಪಿಸಿದರೆ ರೋಮಾಂಚನವಾಗುತ್ತದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿಗಿಂತ ಮೊದಲು ಸ್ವಾತಂತ್ರ್ಯದ ಕಹಳೆ ಮೊಳಗಿಸಿ, ಬ್ರಿಟೀಷರ ವಿರುದ್ದ ಹೋರಾಡಿದವರು ಚೆನ್ನಮ್ಮ ಆಗಿದ್ದಾರೆ. ಅಲ್ಲದೇ ಚೆನ್ನಮ್ಮ ಸಣ್ಣ ಸೈನ್ಯ ಕಟ್ಟಿಕೊಂಡು ಕೆಚ್ಚೆದೆಯಿಂದ ಪರಕೀಯರ ವಿರುದ್ಧ ಯುದ್ದವನ್ನು ಸಾರಿದ್ದಳು. ಇಂತಹ ನಾಟಕವನ್ನು ಪರವಿನಾಯ್ಕರ್ ಅವರು ಶ್ರದ್ಧೆಯಿಂದ ರೂಪಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ರಮೇಶ ಪರವಿನಾಯ್ಕರ ಅವರ ಬೆನ್ನುತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಭೈರಿದೇವರಕೊಪ್ಪ ದರ್ಗಾ ತೆರವು ಮಾಡಿದ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಭೈರಿದೇವರಕೊಪ್ಪ ದರ್ಗಾ ತೆರವು ಮಾಡಿದ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಚೆನ್ನಮ್ಮನವರ ಇತಿಹಾಸವನ್ನ ಪಸರಿಸಬೇಕು

ಧಾರವಾಡ ರಂಗಾಯಣದಿಂದ ಈ ನಾಟಕವನ್ನು ರಾಜ್ಯದಾದ್ಯಂತ ಪ್ರದರ್ಶನ ಆಯೋಜಿಸಿ, ವೀರರಾಣಿ ಕಿತ್ತೂರು ಚೆನ್ನಮ್ಮಳ ಇತಿಹಾಸವನ್ನು ಪಸರಿಸುವಂತೆ ತಿಳಿಸಿದರು. ಕಿತ್ತೂರು ಕೋಟೆ ಪೂರ್ಣ ನಿರ್ಮಾಣ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಕಿತ್ತೂರು ಅಭಿವೃದ್ಧಿಗೆ 100 ಕೋಟಿ ಖರ್ಚು ಮಾಡುತ್ತಿದೆ. ವೀರರಾಣಿ ಕಿತ್ತೂರು ಚೆನ್ನಮ್ಮ ಮೆಗಾ ನಾಟಕಕ್ಕೆ ಈಗ ಸರ್ಕಾರ ನೀಡಿರುವ ಅನುದಾನವನ್ನು ದ್ವಿಗುಣಗೊಳಿಸಿ, ಎರಡು ಪಟ್ಟು ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಮೆಗಾ ನಾಟಕ ಪ್ರದರ್ಶನವನ್ನು ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.

One hundred crore rupees released for development of Kittur town: Basavaraj Bommai

ನಿರ್ದೇಶಕರ ಸಾಹಸ ಸ್ಮರಿಸಿದ ಜೋಶಿ

ನಂತರ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿ, ನಾಟಕದ ತಯಾರಿ, ಶ್ರಮ ಮತ್ತು ನಿರ್ದೇಶಕ ರಮೇಶ್‌ ಅವರ ಸಾಹಸ ಸ್ಮರಿಸಿ ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅರವಿಂದ ಬೆಲ್ಲದ್‌ ಮಾತನಾಡಿ, ಮರಾಠಿಯಲ್ಲಿ ಪ್ರದರ್ಶನವಾದ ಜಾನತಾ ರಾಜಾ ನಾಟಕದ ಮೂಲಕ ಶಿವಾಜಿ ಮಹಾರಾಜರ ಸಾಹಸ ಗಾಥೆಯನ್ನು ತೆರೆಗೆ ತರಲಾಗಿತ್ತು. ಅದಕ್ಕೆ ಪೂರಕವಾಗಿ ಕನ್ನಡ ನಾಡಿನ ಹೆಮ್ಮೆಯ ನಾಯಕಿ, ಭಾರತ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಕುರಿತು ಮೆಗಾ ನಾಟಕ ಧಾರವಾಡ ರಂಗಾಯಣದಿಂದ ರೂಪುಗೊಂಡಿದೆ ಎಂದರು.

One hundred crore rupees released for development of Kittur town: Basavaraj Bommai

ಸಮಾರಂಭದಲ್ಲಿ ಧಾರವಾಡ ರಂಗಾಯಣ ನಿರ್ದೇಶಕ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮ ನಾಟಕದ ಪ್ರಧಾನ ನಿರ್ದೇಶಕ ರಮೇಶ ಪರವಿನಾಯ್ಕರ ಅವರಿಗೆ ರಂಗ ಜ್ಯೋತಿ ಅಭಿದಾನ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗದಗ-ಡಂಬಳ ತೋಂಟದಾರ್ಯ ಮಠದ ಡಾ. ಸಿದ್ದರಾಮ ಮಹಾಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರ ಮಹಾಸ್ವಾಮೀಜಿ, ಕಿತ್ತೂರು ಚೆನ್ನಮ್ಮ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮೀಜಿ, ಮುರಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಶಾಸಕ ಅಮೃತ ದೇಸಾಯಿ, ಸೇಡಂ ಶಾಸಕ ರಾಜಕುಮಾರ ಪಾಟೀಲ್‌, ಮೇಯರ್ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕೆವಿವಿ ಕುಲಪತಿ ಡಾ. ಕೆ.ಬಿ.ಗುಡಸಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

English summary
Chief Minister Basavaraj Bommai said in Dharwad, One hundred crore rupees released for development of Kittur town. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X