ಏನಿದು ಕಳಸಾ-ಬಂಡೂರಿ ಯೋಜನೆ?
ಕರ್ನಾಟಕದಲ್ಲಿ ನೀರಿನ ಕುರಿತಾದ ಹೋರಾಟ ಎಂದರೆ ನೆನಪಾಗುವುದು ಕಾವೇರಿ ವಿವಾದ. ಅದು ಮೈಸೂರು ಭಾಗಕ್ಕೆ ಸೀಮಿತವಾಗಿದ್ದು. ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಕಳಸಾ-ಬಂಡೂರಿ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಮಹಾದಾಯಿ ನದಿಯನ್ನು ಗೋವಾದ ಜೀವನದಿ ಎಂದು ಕರೆಯುತ್ತಾರೆ. ಆದರೆ, ಈ ನದಿ ಹುಟ್ಟುವುದು ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ. ಬೆಳಗಾವಿಯಲ್ಲಿ ಹುಟ್ಟುವ ನದಿ ಗೋವಾ ಮೂಲಕ ಹರಿದು ಸಮುದ್ರ ಸೇರುತ್ತದೆ.
ಕರ್ನಾಟಕದ ಮೂಲಕ ಹರಿದು ಹೋಗುವ ನೀರನ್ನು ಬಳಸಿಕೊಂಡು, ನೀರನ್ನು ಮಲಪ್ರಭಾ ಡ್ಯಾಂನಲ್ಲಿ ಸಂಗ್ರಹಿಸಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಮಹಾದಾಯಿ ಅಥವ ಕಳಸಾ-ಬಂಡೂರಿ ಯೋಜನೆ. [ನೀರು ಹಂಚಿಕೆ ವಿವಾದಕ್ಕೆ ರಿಯಲ್ ಸ್ಟಾರ್ ರಿಂದ ಪರಿಹಾರ]

ಕಳಸಾ-ಬಂಡೂರಿ ಹೆಸರೇಕೆ? : ಈ ಹೋರಾಟಕ್ಕೆ ಕಳಸಾ-ಬಂಡೂರಿ ಮತ್ತು ಮಹಾದಾಯಿ ಹೋರಾಟ ಎಂಬ ಹೆಸರಿದೆ. ನೀರನ್ನು ಕಳಸಾ-ಬಂಡೂರಿ ಎಂಬ ಎರಡು ನಾಲೆಗಳ ಮೂಲಕ ಜಲಾಶಯಕ್ಕೆ ಹರಿಸಲು ಯೋಜನೆ ರೂಪಿಸಲಾಗಿದೆ. ಆದ್ದರಿಂದ, ಕಳಸಾ-ಬಂಡೂರಿ ಎಂಬ ಹೆಸರೂ ಇದೆ. [ನಿಮಗಿದು ತಿಳಿದಿರಲಿ: ಕಳಸಾ ಬಂಡೂರಿ ಕುಡಿಯುವ ನೀರು ಹೋರಾಟ]
1978ರಲ್ಲಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳುವ ಚಿಂತನೆ ಆರಂಭವಾಯಿತು. ಆಗ ಮುಖ್ಯಮಂತ್ರಿಯಾಗಿದ್ದ ಆರ್.ಗುಂಡೂರಾವ್ ಅವರು ಎಸ್.ಆರ್.ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದರು.[ರೈತರಿಗೆ ಚಿತ್ರರಂಗದ ಬೆಂಬಲ, ಭಾಷಣಕ್ಕೆ ಟ್ವೀಟ್ ಪ್ರತಿಕ್ರಿಯೆ]
1980ರಲ್ಲಿ ವರದಿ ನೀಡಿದ ಸಮಿತಿ ಯೋಜನೆಯನ್ನು ಜಾರಿಗೊಳಿಸಬಹುದು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿತು. ಕರ್ನಾಟಕ ಸರ್ಕಾರ 1988ರಲ್ಲಿ ಯೋಜನೆಗೆ ಒಪ್ಪಿಗೆ ನೀಡಿತು. ಆದರೆ, ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸಿತು.
ಮಹಾದಾಯಿ ಯೋಜನೆಯ ವರದಿ ನೀಡಿದ್ದ ಸಮಿತಿಯಲ್ಲಿದ್ದ ಎಸ್.ಆರ್.ಬೊಮ್ಮಾಯಿ ಅವರು 1989ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಂದಿನ ಗೋವಾ ಸಿಎಂ ಪ್ರತಾಪ್ ಸಿಂಗ್ ರಾಣಾ ಜೊತೆ ಮಾತುಕತೆ ನಡೆಸಿದರು. ಆಗ ಯೋಜನೆಗೆ ಗೋವಾ ಒಪ್ಪಿಗೆ ನೀಡಿತು.[ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ]
2000ದಲ್ಲಿ ಕಳಸಾ-ಬಂಡೂರಿ ನಾಲೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ನೀಡಿತು. ಬಂಡೂರಿ ನಾಲಾ ಯೋಜನೆಗೆ 49.20 ಕೋಟಿ ರೂ., ಕಳಸಾ ನಾಲಾ ಯೋಜನೆಗೆ 44.78 ಕೋಟಿ ರೂ. ವೆಚ್ಚ ಮಾಡಲು ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿತು.
ಕೇಂದ್ರ ಸರ್ಕಾರ 2002ರಲ್ಲಿ ಯೋಜನೆಗೆ ಒಪ್ಪಿಗೆ ಕೊಟ್ಟಿತು. 2002ರ ಏ.30ರಂದು ಕಳಸಾ ಬಂಡೂರಿ ಕಾಲುವೆ ಮೂಲಕ ನೀರನ್ನು ಹರಿಸಲು ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವಾಲಯವೂ ಒಪ್ಪಿಗೆ ನೀಡಿತು. ಆದರೆ, 2002ರ ಮೇನಲ್ಲಿ ಗೋವಾ ಸರ್ಕಾರ ಯೋಜನೆ ಬಗ್ಗೆ ತಕರಾರು ಎತ್ತಿತು.
ಈ ನದಿ ವಿವಾದದ ಬಗ್ಗೆ ನ್ಯಾಯಾಧೀಕರಣ ರಚಿಸುವಂತೆ ಗೋವಾ ಸರ್ಕಾರ 2002ರಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆಯಿತು. 2002ರ ಸೆಪ್ಟೆಂಬರ್‌ನಲ್ಲಿ ಯೋಜನೆಗೆ ಕೇಂದ್ರ ಜಲ ಆಯೋಗ ತಡೆ ನೀಡಿತು. ನಂತರ ದೆಹಲಿಯಲ್ಲಿ ಕರ್ನಾಟಕ-ಗೋವಾ ಸಚಿವರ ಸಭೆ ನಡೆಯಿತು.[ಕಳಸಾ-ಬಂಡೂರಿಗೆ ಸ್ಯಾಂಡಲ್ ವುಡ್ ಕಿಚ್ಚು ; ಯಾರು ಏನು ಹೇಳಿದರು?]
ಬೆಳಗಾವಿಯ ಜಿಲ್ಲೆಯ ಕಣಕುಂಬಿಯಲ್ಲಿ ಜಲಾಶಯ ನಿರ್ಮಿಸಲು 2006ರ ಸೆಪ್ಟೆಂಬರ್‌ನಲ್ಲಿ ಭೂಮಿ ಪೂಜೆ ಮಾಡಲಾಯಿತು. 2006ರ ನವೆಂಬರ್‌ನಲ್ಲಿ ಗೋವಾ ಸರ್ಕಾರ ಈ ಯೋಜನೆಗೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತು.
ಕಾಮಗಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. 2010ರಲ್ಲಿ ಮಹದಾಯಿ ಜಲ ವಿವಾದ ನ್ಯಾಯಾಧೀಕರಣವನ್ನು ನೇಮಕ ಮಾಡಲಾಯಿತು. 2014ರಲ್ಲಿ ನ್ಯಾಯಾಧೀಕರಣದ ತಂಡ ಉತ್ತರ ಕರ್ನಾಟಕ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. 2015ರ ಜೂನ್ನಿಂದ ಯೋಜನೆ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಆರಂಭವಾಗಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications