ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಗೂಸಾ
ಧಾರವಾಡ, ಅಕ್ಟೋಬರ್ 24: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಸಾರ್ವಜನಿಕರು ಥಳಿಸಿದ ಘಟನೆ ಧಾರವಾಡ ನಗರದ ಕೆ.ಇ.ಬೋರ್ಡ್ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ನಗರದ ಗೋಪಾಳಪುರ ಬಡಾವಣೆಯಲ್ಲಿರುವ ಶಾಲೆಯ ಶಿಕ್ಷಕ ಬಸನಗೌಡ ಪಾಟೀಲ್ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹಲವು ದಿನಗಳಿಂದ ಕಿರುಕುಳ ಅನುಭವಿಸುತ್ತಿದ್ದ ವಿದ್ಯಾರ್ಥಿಗಳು ಪೋಷಕರಿಗೆ ಈ ಸಂಬಂಧ ಮಾಹಿತಿ ನೀಡಿದ್ದರು.

ಮಕ್ಕಳ ದೂರಿನ ಮೇರೆಗೆ ಇಂದು ಶಾಲೆಗೆ ಆಗಮಿಸಿದ ಪೋಷಕರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂದರ್ಭ ತಪ್ಪೊಪ್ಪಿಕೊಂಡ ಶಿಕ್ಷಕನನ್ನು ಸರಿಯಾಗಿ ಥಳಿಸಿದ್ದಾರೆ.

ಘಟನೆ ಬೆನ್ನಿಗೆ ಶಿಕ್ಷಕ ಹುದ್ದೆಗೆ ಬಸನಗೌಡ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯನ್ನು ಶಾಲಾ ಆಡಳಿತ ಮಂಡಳಿ ಅಂಗೀಕರಿಸಿದೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.












Click it and Unblock the Notifications