ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ದಂಡ

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ ಜನವರಿ 19: ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಧಾರವಾಡದ ಹೆಡ್‍ಪೋಸ್ಟ್ ಕಚೇರಿಯಲ್ಲಿ 15 ವರ್ಷಗಳ ಅವಧಿಯ ಎಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು.

ಸದರಿ ಯೋಜನೆಯು 31/03/2015 ರಂದು ಮುಕ್ತಾಯವಾಗಿತ್ತು. ತದನಂತರ ದೂರುದಾರ ಸದರಿ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01/04/2015 ರಿಂದ 31/03/2020ರವರೆಗೆ ಮುಂದುವರೆಸಿದ್ದರು.

ಜ. 18ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನೇರ ಸಂದರ್ಶನ ಜ. 18ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನೇರ ಸಂದರ್ಶನ

ಆ ಯೋಜನೆ 31/03/2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ ಮೇಲಿನ ಬಡ್ಡಿ ಲೆಕ್ಕ ಹಾಕಿ ಅಂಚೆ ಇಲಾಖೆಯವರು ತನಗೆ ಹಣವನ್ನು ಹಿಂದಿರುಗಿಸದೇ ಸತಾಯಿಸಿ ತೊಂದರೆ ನೀಡಿ, ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

Penalty For Postal Department For Not Returning Deposit Money

ಅಂಚೆ ಇಲಾಖೆಯವರು ಸದರಿ ದೂರಿಗೆ ಆಕ್ಷೇಪಣೆ ಎತ್ತಿ ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಹೆಚ್.ಯು.ಎಫ್, ಪಿ.ಪಿ.ಎಫ್‍ ಯೋಜನೆಯನ್ನು ಮುಂದುವರೆಸಲು ಅವಕಾಶ ಇರುವುದಿಲ್ಲ. ಕಾರಣ 2015ರ ನಂತರ ಅವಧಿ ಮುಕ್ತಾಯವಾಗಿರುವುದರಿಂದ ಆ ನಂತರದ ಅವಧಿಗೆ ಬಡ್ಡಿ ಕೊಡಲು ಬರುವುದಿಲ್ಲ ಎಂದಿದ್ದರು.

ದೂರುದಾರನಿಗೆ 2015ರವರೆಗಿನ ಹಣ ಮತ್ತು ನಂತರದ ಅವಧಿಯ ಅವರ ವಂತಿಗೆ ಹಣವನ್ನು ಮಾತ್ರ ಅವರಿಗೆ ವಾಪಸ್ಸು ಕೊಡಬಹುದು ಅಂತಾ ಅಂಚೆ ಇಲಾಖೆಯವರು ಆಕ್ಷೇಪಿಸಿದ್ದರು. ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ, ಸದಸ್ಯರಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಹಾಗೂ ಪ್ರಭು. ಸಿ ಹಿರೇಮಠ ಅಂಚೆ ಇಲಾಖೆಯ ಎಲ್ಲ ಆಕ್ಷೇಪಣೆಗಳನ್ನು ತಳ್ಳಿಹಾಕಿ, 2015ರ ನಂತರ ದೂರುದಾರರ ಹಣವನ್ನು ಜನರಲ್ ಪಿಪಿಎಫ್ ಯೋಜನೆಯಡಿ ಅಂಚೆ ಇಲಾಖೆಯವರು ಮುಂದುವರೆಸಿ ಆ ಹಣವನ್ನು ಬೇರೆ ಕಡೆ ವಿನಿಯೋಗಿಸಿ ಲಾಭ ಪಡೆದು ಈಗ ದೂರುದಾರನಿಗೆ ಬಡ್ಡಿಕೊಡಲು ನಿರಾಕರಿಸುತ್ತಿರುವುದು ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

28/03/2000 ರಿಂದ ಇಲ್ಲಿಯವರೆಗೆ ದೂರುದಾರನ ವಂತಿಗೆ ಮೇಲೆ ಬಡ್ಡಿ ಲೆಕ್ಕ ಹಾಕಿ ಅಂಚೆ ಇಲಾಖೆಯವರು ಅವರಿಗೆ ಒಟ್ಟು 28,34,686 ರೂಪಾಯಿಯನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಆದೇಶಿಸಿದೆ. ಸೇವಾ ನ್ಯೂನ್ಯತೆಯಿಂದ ದೂರುದಾರನಿಗೆ ಆಗಿರುವ ತೊಂದರೆ ಮತ್ತು ಹಿಂಸೆಗಾಗಿ 50,000 ರೂಪಾಯಿಗಳ ಪರಿಹಾರ ಹಾಗೂ 10,000 ರೂಪಾಯಿಗಳನ್ನು ಪ್ರಕರಣದ ಖರ್ಚು ವೆಚ್ಚ ಅಂತಾ ಕೊಡಲು ಅಂಚೆ ಇಲಾಖೆಗೆ ನಿರ್ದೇಶನ ನೀಡಿದೆ.

English summary
Dharwad: Penalty for postal department for not returning deposit money.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X