ಸಚಿವ ಸಿ.ಎಸ್.ಶಿವಳ್ಳಿ ನಿಧನಕ್ಕೆ ನರೇಂದ್ರ ಮೋದಿ ಸಂತಾಪ

ಧಾರವಾಡ, ಮಾರ್ಚ್ 22 : ಪ್ರಧಾನಿ ನರೇಂದ್ರ ಮೋದಿ ಅವರು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ಸಿ.ಎಸ್.ಶಿವಳ್ಳಿ ಅವರು ವಿಧಿವಶರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಿ.ಎಸ್.ಶಿವಳ್ಳಿ ಅವರು ಕರ್ನಾಟಕಕ್ಕೆ ಕೊಟ್ಟ ಕೊಡುಗೆಯನ್ನು ನೆನಪಿಸಿಕೊಳ್ಳಬೇಕು ಎಂದು ಮೋದಿ ಸಂತಾಪದಲ್ಲಿ ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಎಸ್.ಶಿವಳ್ಳಿ ಅವರು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿಧಿವಶರಾಗಿದ್ದರು.

PM Narendra Modi offers condolences for CS Shivalli death

ಕುರುಬ ಸಮುದಾಯಕ್ಕೆ ಸೇರಿದ ಪ್ರಭಾವಿ ನಾಯಕ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿ (ಸಿ.ಎಸ್.ಶಿವಳ್ಳಿ) ಅವರ ನಿಧನಕ್ಕೆ ಪಕ್ಷಾತೀತವಾಗಿ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮಾರ್ಚ್ 23ರ ಶನಿವಾರ ಮಧ್ಯಾಹ್ನ ಯುರಗುಪ್ಪಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಸಿ.ಎಸ್.ಶಿವಳ್ಳಿ ಅವರ ಕ್ಷೇತ್ರ ಕುಂದಗೋಳದಲ್ಲಿ ಸಂಜೆ 6.30ರಿಂದ 9 ಗಂಟೆಯ ತನಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಹುಟ್ಟೂರು ಯುರಗುಪ್ಪಿಗೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಾ.23ರ ಶನಿವಾರ ಮಧ್ಯಾಹ್ನ ಯುರಗುಪ್ಪಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಸಚಿವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಚಾರಚಣೆ ಘೋಷಣೆ ಮಾಡಿದೆ. ಧಾರವಾಡದ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+