• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಾ. ಚೆನ್ನವೀರ ಕಣವಿ ಆರೋಗ್ಯ ಸ್ಥಿರ, ಚಿಕಿತ್ಸೆ ಮುಂದುವರಿಕೆ

|
Google Oneindia Kannada News

ಧಾರವಾಡ, ಜನವರಿ 17; ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಧಾರವಾಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಾ. ಚೆನ್ನವೀರ ಕಣವಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

93 ವರ್ಷದ ಡಾ. ಚೆನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಧಾರವವಾಡದ ಎಸ್. ಡಿ. ಎಮ್. ಆಸ್ಪತ್ರೆಗೆ ಜನವರಿ 14ರಂದು ಅವರು ದಾಖಲಾಗಿದ್ದಾರೆ.

ಸಾವಿನ ರಸ್ತೆ ಕುಖ್ಯಾತಿಯ ಹುಬ್ಬಳ್ಳಿ-ಧಾರವಾಡ ಬೈಪಸ್ ಅಗಲೀಕರಣ ಸಾವಿನ ರಸ್ತೆ ಕುಖ್ಯಾತಿಯ ಹುಬ್ಬಳ್ಳಿ-ಧಾರವಾಡ ಬೈಪಸ್ ಅಗಲೀಕರಣ

ಧಾರವಾಡ ಜಿಲ್ಲಾಡಳಿತ ಭಾನುವಾರ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಪ್ರಕಟಣೆಯಲ್ಲಿ ತಿಳಿಸಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಅಧೀಕ್ಷಕರು ಜಿಲ್ಲಾಧಿಕಾರಿಗಳ ಸಂಪರ್ಕದಲ್ಲಿದ್ದಾರೆ.

ಆಡಳಿತ ಸಹಾಯಕ ಹುದ್ದೆಗೆ ಅರ್ಜಿ ಕರೆದ ಧಾರವಾಡ ಜಿಲ್ಲಾ ಪಂಚಾಯಿತಿ ಆಡಳಿತ ಸಹಾಯಕ ಹುದ್ದೆಗೆ ಅರ್ಜಿ ಕರೆದ ಧಾರವಾಡ ಜಿಲ್ಲಾ ಪಂಚಾಯಿತಿ

ಪ್ರತಿದಿನ ಜಿಲ್ಲಾಧಿಕಾರಿಗಳೆ ಖುದ್ದು ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ. ಡಾ. ಚೆನ್ನವೀರ ಕಣವಿ ಅವರ ಉತ್ತಮ ಚಿಕಿತ್ಸೆಗೆ ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಧಾರವಾಡ-ಬೆಳಗಾವಿ ನೇರ ರೈಲು ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ಧಾರವಾಡ-ಬೆಳಗಾವಿ ನೇರ ರೈಲು ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ

ಮುಖ್ಯಮಂತ್ರಿಗಳ ಟ್ವೀಟ್; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, "ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ" ಎಂದು ಹೇಳಿದ್ದಾರೆ.

   Virat Kohli ಕ್ಯಾಪ್ಟೆನ್ಸಿ ನಿರ್ಗಮನದ ಹಿಂದೆಯೇ ಟೀಮ್ ಇಂಡಿಯಾಗೆ ಬಿಗ್ ಶಾಕ್ ಕೊಟ್ಟ ICC | Oneindia Kannada

   ಸಂಕ್ಷಿಪ್ತ ಪರಿಚಯ; ಡಾ. ಚೆನ್ನವೀರ ಕಣವಿ ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಜನಿಸಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು.

   ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಭಾವಜಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದಾರೆ.

   ಡಾ. ಚೆನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ 1949ರಲ್ಲಿ ಬಿಡುಗಡೆಗೊಂಡಿತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ರಚಿಸಿದ್ದಾರೆ.

   ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹಾಸನದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಂಪಿ ವಿಶ್ವವಿದ್ಯಾಲಯ ನಾಡೋಜ ಪಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

   ಭಾನುವಾರದ ಹೆಲ್ತ್ ಬುಲೆಟಿನ್‌ ಪ್ರಕಾರ ಕರ್ನಾಟಕದಲ್ಲಿ 34047 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 197982. ಧಾರವಾಡ ಜಿಲ್ಲೆಯಲ್ಲಿ 634 ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 2476.

   English summary
   Kannada poet Chennaveera Kanavi health stable. He admitted to the hospital on January 14 after tested positive for Coronavirus.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X