Power cut in Kalghatgi-Dharwad: ನ.29 ರಂದು ಹೆಸ್ಕಾಂ ವ್ಯಾಪ್ತಿಯ ಈ ಸ್ಥಳಗಳಲ್ಲಿ ವಿದ್ಯುತ್ ಕಡಿತ, ಮಾಹಿತಿ
ಧಾರವಾಡ, ನವೆಂಬರ್ 27: ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕೆಲವು ಪ್ರದೇಶಗಳಲ್ಲಿ ಇದೇ ನವೆಂಬರ್ 29ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (HECOM) ತಿಳಿಸಿದೆ.
ಧಾರವಾಡ ಜಿಲ್ಲಾ ವ್ಯಾಪಿಯಲ್ಲಿ ಬರುವ 110/11 ಕೆ.ವಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಸಿಬ್ಬಂದಿ 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದ್ದಾರೆ.

ಹೀಗಾಗಿ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನವೆಂಬರ್ 29 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತಗೊಳ್ಳಲಿವೆ. ಹಾಗಾದರೆ ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳ ವಿವರ ಇಲ್ಲಿದೆ.
ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ, ಆಸ್ತಕಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ, ಹುಣಸಿಕಟ್ಟಿ, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಭಾಗದಲ್ಲೂ ಇಡಿ ದಿನ ವಿದ್ಯುತ್ ಕಡಿತ
ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ 110/11 ಕೆ.ವಿ ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.
ಹೀಗಾಗಿ ಇಲ್ಲಿ ಸಹ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯ ಗರಗ, ಹಂಗರಕಿ, ದುಬ್ಬದಮರಡಿ, ಅಗಸನಹಳ್ಳಿ, ಶೇಡಬಾಳ ಖಾನಾಪುರ, ತಡಕೊಡ, ಮಾದನಭಾವಿ, ಮುಗಳಿ, ಹೋಸಟ್ಟಿ, ಬೋಗೂರು, ಜಿರಗಿವಾಡ ಮತ್ತು ಕೊಟಬಾಗಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications