Pralhad Joshi: ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ ಯಾವಾಗ? ಅಪ್ಡೇಟ್ ಮಾಹಿತಿ
ಹುಬ್ಬಳ್ಳಿ, ಏಪ್ರಿಲ್ 10: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮೇ 07ರಂದು ಜರುಗಲಿದೆ. ಇದೇ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸತತ 5ನೇ ಬಾರಿ ಕಣಕ್ಕಿಳಿದಿರುವ ಪ್ರಹ್ಲಾದ್ ಜೋಶಿ ಅವರು ಇದೇ ಏಪ್ರಿಲ್ 15ರಂದು ಅದ್ದೂರಿ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಭಾರೀ ಬಹುಮತಗಳ ಅಂತರದಿಂದ ಸ್ವಕ್ಷೇತ್ರ ಧಾರವಾಡದಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಲೇ ಬಂದಿರುವ ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು, ಗಣಿ ಸಚಿವರೂ ಆಗಿರುವ ಪ್ರಹ್ಲಾದ್ ಜೋಶಿ ಅವರು ಈಗ 5ನೇ ಬಾರಿಯೂ ವಿಜಯ ಪತಾಕೆ ಹಾರಿಸಲು ಭರ್ಜರಿ ತಯಾರಿ ನಡೆಸಿದ್ದಾರೆ.

2014 ಮತ್ತು 2019ರ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 1 ಲಕ್ಷ, 2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಜೋಶಿ ಅವರು ಈಗ 2024ರ ಅಖಾಡದಲ್ಲಿ ಹಿಂದಿಗಿಂತ ಹೆಚ್ಚು ಅಂತರದಲ್ಲಿ ಗೆಲುವು ದಾಖಲಿಸುವ ಗುರಿಯತ್ತ ಹೆಜ್ಜೆ ಹಾಕುತ್ತಿದ್ದಾರೆ.
ಮೊದಲ ಹಂತದಲ್ಲಿ ಪ್ರಚಾರ ಪೂರ್ಣ
ಕೆಲವು ಸಣ್ಣ ಪುಟ್ಟ ಅಡೆತಡೆಗಳು ಎದುರಾದರೂ ಸಹಿತ ಅವರು ಪ್ರಹ್ಲಾದ್ ಜೋಶಿ ಅವರು ಕ್ಷೇತ್ರದಲ್ಲಿ ಈ ಬಾರಿ ಐತಿಹಾಸಿಕ ಗೆಲುವು ಸಾಧಿಸಲು ಸಿದ್ಧತೆ ನಡೆಸಿದ್ದಾರೆ. ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಮೊದಲ ಹಂತದಲ್ಲಿ ಸಚಿವರು ಪಕ್ಷದ ಶಾಸಕರು, ಪ್ರಮುಖ ಮುಖಂಡರು, ಕಾರ್ಯಕರ್ತರ ಜತೆಯಾಗಿ ಕ್ಷೇತ್ರದಾದ್ಯಂತ ಸುತ್ತಾಡಿ ಮತಯಾಚನೆ ಮಾಡಿದ್ದಾರೆ. ಹಳ್ಳಿ ಹಳ್ಳಿಗಳಿಗೂ ಹೋಗಿ ಜನರನ್ನು ಭೇಟಿ ಮಾಡಿ ಆಶೀರ್ವಾದ ಕೋರಿದ್ದಾರೆ.
ಕ್ಷೇತ್ರದಲ್ಲಿನ ಹುಬ್ಬಳ್ಳಿ-ಧಾರವಾಡ, ನವಲಗುಂದ, ಕಲಘಟಗಿ, ಶಿಗ್ಗಾವಿ-ಸವಣೂರು ಸೇರಿದಂತೆ ಪ್ರತಿಯೊಂದು ಕಡೆಯೂ ಪ್ರತಿ ಸಮುದಾಯದ ಮುಖಂಡರ ಜೊತೆ ಸಭೆ ಸಮಾವೇಶ ನಡೆಸಿ ಬೆಂಬಲ ಕೋರಿದ್ದಾರೆ. ಸರ್ವ ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಚುನಾವಣಾ ತಯಾರಿ ಕೈಗೊಂಡಿದ್ದಾರೆ. ನಾಮಪತ್ರ ಸಲ್ಲಿಕೆಯು ಆರಂಭವಾಗಲಿದ್ದು, ಅವರು ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

ಮಠಗಳಿಗೆ ಭೇಟಿ: ಆಶೀರ್ವಾ ಪಡೆದ ಜೋಶಿ
ಬುಧವಾರ ನಗರದ ಕಾಳಿಕಾ ದೇವಿ ದೇವಸ್ಥಾನ, ನಗರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಳೆದ ಕೆಲ ದಿನಗಳಿಂದ ಕ್ಷೇತ್ರದಲ್ಲಿನ ಪ್ರಮುಖ ಮಠ- ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸುವ ಜತೆಗೆ ವಿವಿಧ ಸಮುದಾಯಗಳ ಧರ್ಮ ಗುರುಗಳಿಂದ ಆಶೀರ್ವಾದ ಪಡೆದಿದ್ದಾರೆ.
ಯುಗಾದಿ ಹಬ್ಬದ ದಿನವೇ ಸಚಿವರು ಪಂಚ ಪೀಠಗಳ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವಿರಸೋಮೇಶ್ವರ ಶಿವಾಚಾರ್ಯ ಶ್ರೀಗಳು ಕಾಶಿ ಜಗದ್ಗುರು ಚಂದ್ರಶೇಖರ್ ಶಿವಾಚಾರ್ಯ ಶ್ರೀಗಳು ಸೇರಿದಂತೆ ವೀರಶೈವ ಸಮುದಾಯದ ಪ್ರಮುಖ ಸ್ವಾಮೀಜಿಗಳನ್ನು ಹಾಗೂ ಕಾಗಿನೆಲೆ ಗುರುಪೀಠ, ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಹೀಗೆ ವಿವಿಧ ಸಮುದಾಯಗಳ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಏ.15ಕ್ಕೆ ಬೃಹತ್ ಮೆರವಣಿಗೆ
ಏಪ್ರಿಲ್ 15ರಂದು ಪ್ರಹ್ಲಾದ್ ಜೋಶಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ ಹುಬ್ಬಳ್ಳೀಯ ಚನ್ನಮ್ಮ ವೃತ್ತ ಸೇರಿದಂತೆ ಪ್ರಮುಖ ವೃತ್ತ, ರಸ್ತೆಗಳಲ್ಲಿ ಹೆಚ್ಚಿನ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಪ್ರಚಾರ ಕಾರ್ಯದಲ್ಲಿ ಪ್ರಧಾನಿ ಮೋದಿ ಭಾಗಿ?
ಹುಬ್ಬಳ್ಳಿ- ಧಾರವಾಡದಲ್ಲಿ ಪ್ರಹ್ಲಾದ್ ಜೋಶಿಯವರ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಸಚಿವರ ಮೂಲಗಳು ತಿಳಿಸಿವೆ. ಆದರೆ ಪ್ರಧಾನಿ ಮೋದಿ ಆಗಮನ ಬಗ್ಗೆ ನಿರ್ದಿಷ್ಟ ದಿನಾಂಕ ಗೊತ್ತುಪಡಿಸಿಲ್ಲ. ಪ್ರಧಾನಿ ಮಾತ್ರವಲ್ಲದೇ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಮಾಜಿ ಸಿಎಂ ಬಿಎಸ್ ವೈ ಜೋಶಿ ಅವರ ಪರ ಸದ್ಯದಲ್ಲೇ ಪ್ರಚಾರ ನಡೆಸಲಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications