ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಬಿರುಸಿನ ಪ್ರಚಾರ

|
Google Oneindia Kannada News

ಧಾರವಾಡ, ಮಾ. 18 : ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಲು ವಿಳಂಬ ಧೋರಣೆ ಅನುಸರಿಸುತ್ತಿದ್ದು, ಜೋಶಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರಚಾರದಲ್ಲಿ ತೊಡಗಿದ್ದಾರೆ.

ತಮ್ಮ ಕ್ಷೇತ್ರದ ಜೊತೆಗೆ ರಾಜ್ಯದಲ್ಲಿಯೂ ಪಕ್ಷದ ಪರವಾಗಿ ಪ್ರಚಾರ ಮಾಡುವ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಮೇಲಿದೆ. ಆದ್ದರಿಂದ ಮೊದಲ ಹಂತದಲ್ಲಿ ತಮ್ಮ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಅವರು, ನಂತರ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರಿಗೆ ತವರೂರು. ಆದ್ದರಿಂದ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಕೈಗೊಂಡಿರುವ ಜೋಶಿ ಗೆಲುವಿಗಾಗಿ ಅಗತ್ಯ ಕಾರ್ಯತಂತ್ರ ರೂಪಿಸಿದ್ದಾರೆ. ಚಿತ್ರಗಳಲ್ಲಿ ಜೋಶಿ ಪ್ರಚಾರ. (ಚಿತ್ರಕೃಪೆ : ಪ್ರಹ್ಲಾದ್ ಜೋಶಿ ಫೇಸ್ ಬುಕ್)

ಜೋಶಿ ಅಬ್ಬರದ ಪ್ರಚಾರ

ಜೋಶಿ ಅಬ್ಬರದ ಪ್ರಚಾರ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಹುಬ್ಬಳ್ಳಿಯ ಲಕ್ಷ್ಮೀನಗರ ಮತ್ತು ಗೋಕುಲ್ ರಸ್ತೆಗಳಲ್ಲಿ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಅಭ್ಯರ್ಥಿ ಘೋಷಿಸಿಲ್ಲ

ಅಭ್ಯರ್ಥಿ ಘೋಷಿಸಿಲ್ಲ

ಧಾರವಾಡ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಆದರೆ, ಜೋಶಿ ಮಾತ್ರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಪಾದಯಾತ್ರೆಯ ಮೂಲಕ ಮತಯಾಚನೆ

ಪಾದಯಾತ್ರೆಯ ಮೂಲಕ ಮತಯಾಚನೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ವಾರ್ಡ ನಂ. 44 ರಲ್ಲಿ ಪಾದಯಾತ್ರೆ ಕೈಗೊಳ್ಳುವ ಮೂಲಕ ಮತಯಾಚಿಸಿದರು. ಯುಪಿಎ ಸರ್ಕಾರದ ಭ್ರಷ್ಟಾಚಾರಗಳನ್ನು ಜನರಿಗೆ ತಿಳಿಸುವ ಮೂಲಕ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.

ಮೋದಿ ಮೋಡಿ ಮಾಡಿದ್ದಾರೆ

ಮೋದಿ ಮೋಡಿ ಮಾಡಿದ್ದಾರೆ

ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಮಾವೇಶ ನಡೆಸುವ ಮೂಲಕ ಜಿಲ್ಲೆಯ ಕಾರ್ಯಕರ್ತರಲ್ಲಿ ಬಿಜೆಪಿ ಈಗಾಗಲೇ ಉತ್ಸಾಹ ತುಂಬಿದೆ. ಸದ್ಯ ನಾಯಕರು ಪ್ರಚಾರ ಕೈಗೊಳ್ಳುವ ಮೂಲಕ ಚುನಾವಣೆ ಕಾವು ಹೆಚ್ಚಿಸಿದ್ದಾರೆ. [ಹುಬ್ಬಳ್ಳಿ ಸಮಾವೇಶದಲ್ಲಿ ಮೋದಿ ಹೇಳಿದ್ದೇನು?]

ಜೋಶಿಗೆ ಜವಾಬ್ದಾರಿ ಹೆಚ್ಚು

ಜೋಶಿಗೆ ಜವಾಬ್ದಾರಿ ಹೆಚ್ಚು

ಪ್ರಹ್ಲಾದ್ ಜೋಶಿ ಬಿಜೆಪಿ ರಾಜ್ಯಾಧ್ಯಕ್ಷರು ಆಗಿರುವುದರಿಂದ ಅವರು ಜಿಲ್ಲೆಯ ಜೊತೆಗೆ ರಾಜ್ಯದ ಇತರ ಭಾಗಗಳಲ್ಲಿಯೂ ಪ್ರಚಾರ ಮಾಡಬೇಕು ಜೊತೆಗೆ ಚುನಾವಣೆ ಕಾರ್ಯತಂತ್ರದ ಬಗ್ಗೆ ಸರಣಿ ಸಭೆಗಳನ್ನು ನಡೆಸಬೇಕು. ಆದ್ದರಿಂದ ಮೊದಲ ಹಂತದಲ್ಲಿ ಕ್ಷೇತ್ರದಲ್ಲಿ ಅವರು ಪ್ರಚಾರ ಕೈಗೊಂಡಿದ್ದಾರೆ. ನಂತರ ರಾಜ್ಯ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.

English summary
Dharwad constituency BJP candidate and party state president Pralhad Joshi launched election campaign in district. Pralhad Joshi will file his nomination on March 24, Monday. Congress and JDS yet to announce party candidates for constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X