ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಸ್ಥಾಪನೆ ತಡೆಯುವ ಶಕ್ತಿ ಯಾರಿಗೂ ಇಲ್ಲ- ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ, ಆಗಸ್ಟ್ 17: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯ ಸ್ಥಾಪನೆಯನ್ನು ಈ ವರ್ಷವೂ ಮಾಡುತ್ತೇವೆ ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ ಮೈದಾನ ಪಾಕಿಸ್ತಾನ ಇಲ್ಲವೇ ಆಫ್ಘಾನಿಸ್ತಾನದಲ್ಲಿ ಇಲ್ಲ ಅದು ಭಾರತದಲ್ಲಿಯೇ ಇದೆ. ನಮ್ಮದೇ ನೆಲದಲ್ಲಿ ನಮ್ಮ ದೇವರ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲ ಎಂದರೆ ಸಹಿಸಿಕೊಳ್ಳುವುದಾದರೂ ಹೇಗೆ..? ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾಂಗ್ರೆಸ್ ಸರ್ಕಾರವಿರಲಿ, ಮುಸ್ಲಿಮರೇ ಆಗಲಿ ಯಾರು ಸಹ ವಿರೋಧ ಮಾಡದೆ ಸಹಕಾರ ನೀಡಬೇಕು. ಅದೇ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವರಿಗೆ ಅವಕಾಶ ನೀಡಿಲ್ಲವೇ, ಹಾಗಿದ್ದರೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ಯಾಕೆ ವಿರೋಧ ಎಂದು ಪ್ರಶ್ನಿಸಿದರು.

ಮಾತು ಮುಂದುವರಿಸಿದ ಅವರು, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 ಅಪ್ರಾಪ್ತರು ಗರ್ಭಿಣಿಯಾಗಿದ್ದಾರೆ. ಇದೊಂದು ಭಯಾನಕ ಸ್ಥಿತಿಯಾಗಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸೂಕ್ತ ತನಿಖೆ ತನಿಖೆ ನಡೆಸಬೇಕು. ಇಂತಹ ಕೃತ್ಯಗಳ ತಡೆಗೆ ವಿಶೇಷ ಪಡೆ ರಚಿಸಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಸುಮಾರು 25 ಸಾವಿರ ಮಕ್ಕಳ ಕಾಣೆಯಾಗಿದ್ದು, ಮಹಿಳೆಯರ ನಾಪತ್ತೆಯಿಂದ ಲವ್ ಜಿಹಾದ್ ಉದ್ದೇಶದ ಆತಂಕ ಇದ್ದು ಈ ಬಗ್ಗೆ ವಿಶೇಷ ಗಮನ ಹರಿಸಬೇಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಒಂದರಲ್ಲೇ ಕಳೆದ 11 ವರ್ಷಗಳಲ್ಲಿ 434 ಮಹಿಳೆಯರು ಕಾಣೆಯಾಗಿದ್ದು ಸುಮಾರು 452 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಲಘುವಾಗಿ ಪರಿಗಣಿಸುವುದು ಯಾವುದೇ ಪಕ್ಷದ ಸರ್ಕಾರಕ್ಕೂ ಒಳ್ಳೆಯದಲ್ಲ ಎಂದರು.

ದಕ್ಷಿಣ ಕನ್ನಡದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಸೌಜನ್ಯ ಕೊಲೆ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು, ತನಿಖೆಯಲ್ಲಿ ಲೋಪ, ಕೇಸನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನಗಳು ಸಾಕಷ್ಟು ನಡೆದಿವೆ ಎಂಬುದು ಗೋಚರಿಸುತ್ತಿದೆ. ಈ ಬಗ್ಗೆ ಸರಕಾರ ಸಮಗ್ರ ತನಿಖೆಗೆ ಮುಂದಾಗಬೇಕಾಗಿದೆ. ಸೌಜನ್ಯ ಪ್ರಕರಣದಲ್ಲಿ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ಮಾಸಾಂತ್ಯಕ್ಕೆ ಹುಬ್ಬಳ್ಳಿಯಿಂದ ಉತ್ತರ ಕರ್ನಾಟಕದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುತ್ತಿದ್ದು, ಸೌಜನ್ಯ ಅವರ ತಾಯಿ ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮಹಿಳೆಯರ ಮೇಲೆ ದೌರ್ಜನ್ಯ ಲವ್ ಜಿಹಾದ್, ಕಿಡ್ನಾಪ್, ನಾಪತ್ತೆಯಂತಹ ಪ್ರಕರಣಗಳ ಬಗ್ಗೆ ಸಂಘಟಿತ ಹೋರಾಟದ ಅಗತ್ಯವಿದ್ದು, ಈ ಬಗ್ಗೆ ನಾನೇ ಖುದ್ದಾಗಿ ಹಿಂದೂಪರ ಸಂಘಟನೆಗಳೆಲ್ಲವನ್ನು ಭೇಟಿಯಾಗಿ ಹೋರಾಟಕ್ಕೆ ಕೈ ಜೋಡಿಸುವಂತೆ ಮನವಿ ಮಾಡುತ್ತೇನೆ. ಧರ್ಮ, ಜಾತಿ ರಹಿತ ಹೋರಾಟ ಆಗಬೇಕಾಗಿದೆ ಎಂದು ಹೇಳಿದರು.
ಲವ್ ಜಿಹಾದ್ ಕೇವಲ ಒಂದು ರಾಜ್ಯ ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ. ರಾಷ್ಟ್ರಾದ್ಯಂತ ಆವರಿಸಿದ್ದು, ಇದನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕಾನೂನು ರಚನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಹೊರತುಪಡಿಸಿ ಉಳಿದೆಲ್ಲ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದರು. ಈ ವೇಳೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಪಾಟೀಲ್ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications