ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಶೀಘ್ರ ಪ್ರೀ ಪೇಯ್ಡ್ ಆಟೋ ಕೌಂಟರ್

ಹುಬ್ಬಳ್ಳಿ, ಏ. 8 : ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಆಟೋ ಕೌಂಟರ್ ಆರಂಭಿಸುವ ಕುರಿತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ನಿಲ್ದಾಣದಲ್ಲಿ ಆಟೋ ಕೌಂಟರ್ ಬೇಕು ಎನ್ನುವುದು ಪ್ರಯಾಣಿಕರ ಬಹುದಿನದ ಬೇಡಿಕೆಯಾಗಿದೆ. ಪ್ರೀ ಪೇಯ್ಡ್ ಆಟೋ ಕೌಂಟರ್ ಆರಂಭಿಸುವ ಕುರಿತು ಶೀಘ್ರದಲ್ಲೇ ಮಾತುಕತೆ ನಡೆಸುವುದಾಗಿ ಹೇಳಿದರು. [ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ]

Pralhad Joshi

ಹಳೆ ರೈಲ್ವೆ ನಿಲ್ದಾಣದಲ್ಲಿ ಪ್ರೀ ಪೇಯ್ಡ್ ಆಟೋ ಕೌಂಟರ್ ಆರಂಭಿಸಲಾಗಿತ್ತು. ಆದರೆ, ಆಟೋ ಚಾಲಕರ ನಿರ್ಲಕ್ಷ್ಯದಿಂದಾಗಿ ಅದನ್ನು ಸ್ಥಗಿತಗೊಳಿಸಲಾಗಿದೆ. ಹೊಸ ನಿಲ್ದಾಣದಲ್ಲಿ ಕೌಂಟರ್ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜೋಶಿ ತಿಳಿಸಿದರು. [ಹುಬ್ಬಳ್ಳಿ-ಚೆನ್ನೈ ನಡುವೆ ವಿಶೇಷ ರೈಲು ಸೇವೆ]

auto counter

ಬ್ಯಾಟರಿ ಕಾರಿಗೆ ಅನುದಾನ : ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೈಲ್ವೆ ನಿಲ್ದಾಣದಲ್ಲಿ ಬ್ಯಾಟರಿ ಕಾರು ಖರೀರಿಗೆ ಅನುದಾನ ನೀಡಲಾಗುತ್ತದೆ. ಆದರೆ, ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗಲು ಮತ್ತು ಮೇಲ್ವಿಚಾರಣೆ ನೋಡಿಕೊಳ್ಳಲು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯ ಅಗತ್ಯವಿದೆ ಎಂದು ಹೇಳಿದರು.

Hubballi Railway station

ಬಸ್ ನಿಲ್ದಾಣ ನಿರ್ಮಾಣ : ಹುಬ್ಬಳ್ಳಿ ರೈಲು ನಿಲ್ದಾಣದ ಪಕ್ಕದಲ್ಲಿ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗುತ್ತದೆ. ರೈಲ್ವೆ ಇಲಾಖೆ ನಿಲ್ದಾಣ ನಿರ್ಮಿಸಲು ಅಗತ್ಯವಾದ ಭೂಮಿ ನೀಡಲಿದೆ ಎಂದು ಜೋಶಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+