ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತರಿಂದ ನಮೋ ಜಪ!

ಧಾರವಾಡ, ಫೆ.25 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹುಬ್ಬಳ್ಳಿಯ ಭಾರತ ಗೆಲ್ಲಿಸಿ ಸಮಾವೇಶಕ್ಕೆ ಬಿಜೆಪಿ ಭರದ ಸಿದ್ಧತೆ ಆರಂಭಿಸಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸೋಮವಾರ ಸಮಾವೇಶ ನಡೆಯುವ ಸ್ಥಳದಲ್ಲಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

ಫೆ.28ರ ಶುಕ್ರವಾರ ನರೇಂದ್ರ ಮೋದಿ ಗುಲ್ಬರ್ಗ ಮತ್ತು ಹುಬ್ಬಳ್ಳಿಯಲ್ಲಿ ಭಾರತ ಗೆಲ್ಲಿಸಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಸಮಾವೇಶದ ಸಿದ್ಧತೆ ಭರದಿಂದ ನಡೆಯುತ್ತಿದೆ. ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಆಕ್ಸಫರ್ಡ್ ಕಾಲೇಜು ಹಿಂಭಾಗದ ಮೈದಾನದಲ್ಲಿ ಭಾರತ ಗೆಲ್ಲಿಸಿ ಸಮಾವೇಶ ನಡೆಯಲಿದೆ. [ಹುಬ್ಬಳ್ಳಿಯಲ್ಲಿ ಫೆ.28ರಂದು ಭಾರತ ಗೆಲ್ಲಿಸಿ ಸಮಾವೇಶ]

ಕುಸುಗಲ್ ರಸ್ತಯಲ್ಲಿರುವ 60 ಎಕರೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸುಮಾರು 3 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಸೋಮವಾರ ಸಮಾವೇಶದ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. ಸಮಾವೇಶಕ್ಕೆ ಜನರನ್ನು ಸೆಳೆಯಲು ಬಿಜೆಪಿ ಹುಬ್ಬಳ್ಳಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. [ಭಾರತ ಗೆಲ್ಲಿಸಿ ಸಮಾವೇಶದ ಚಿತ್ರಗಳು]

ಸಮಾವೇಶದ ಸ್ಥಳ ಪರಿಶೀಲನೆ

ಸಮಾವೇಶದ ಸ್ಥಳ ಪರಿಶೀಲನೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸೋಮವಾರ ಸಮಾವೇಶ ನಡೆಯುವ ಮೈದಾನದಲ್ಲಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. 60 ಎಕರೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, 3 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ. [ದೇಶಕ್ಕಾಗಿ ನಮೋ ನಂಬರ್]

ಮೂರು ವೇದಿಕೆಗಳು

ಮೂರು ವೇದಿಕೆಗಳು

ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶಕ್ಕಾಗಿ ಮೂರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರಧಾನ ವೇದಿಕೆಯಲ್ಲಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಮತ್ತೊಂದು ವೇದಿಕೆಯಲ್ಲಿ ರಾಜ್ಯ ನಾಯಕರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಮಾವೇಶಕ್ಕೂ ಮೊದಲು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಪ್ರತ್ಯೇಕ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ.

ಸಮಾವೇಶಕ್ಕಾಗಿ ಭರದ ಸಿದ್ಧತೆ

ಸಮಾವೇಶಕ್ಕಾಗಿ ಭರದ ಸಿದ್ಧತೆ

ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಆಕ್ಸಫರ್ಡ್ ಕಾಲೇಜು ಹಿಂಭಾಗದ ಮೈದಾನದಲ್ಲಿ ನರೇಂದ್ರ ಮೋದಿ ಫೆ.28ರ ಶುಕ್ರವಾರ ಮಧ್ಯಾಹ್ನ ಭಾರತ ಗೆಲ್ಲಿಸಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗ್ಗೆ ಗುಲ್ಬರ್ಗದಲ್ಲಿ ಮೋದಿ ಸಮಾವೇಶ ನಡೆಯಲಿದೆ. ಎರಡೂ ಜಿಲ್ಲೆಗಳಲ್ಲಿ ಸಮಾವೇಶದ ಸಿದ್ಧತೆ ನಡೆಯುತ್ತಿದೆ.

ಆಟೋಗಳ ಜಾಥಾ

ಆಟೋಗಳ ಜಾಥಾ

ಹುಬ್ಬಳ್ಳಿಯಲ್ಲಿ ನಡೆಯಲಿರುವ ನರೇಂದ್ರ ಮೋದಿ ಸಮಾವೇಶದ ಕುರಿತು ಜನರಿಗೆ ಮಾಹಿತಿ ನೀಡಲು ಆಟೋ ಜಾಥಾ ಏರ್ಪಡಿಸಲಾಗಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸುವ ಮೂಲಕ ಮೋದಿ ಸಮಾವೇಶದಲ್ಲಿ ಭಾಗವಹಿಸುವಂತೆ ಜನರಿಗೆ ಆಹ್ವಾನ ನೀಡಲಾಯಿತು.

ಮಹಿಳೆಯರಿಂದ ಬೈಕ್ ಜಾಥಾ

ಮಹಿಳೆಯರಿಂದ ಬೈಕ್ ಜಾಥಾ

ಸೋಮವಾರ ಬಿಜೆಪಿ ಮಹಿಳಾ ಘಟಕದ ಪ್ರತಿನಿಧಿಗಳು ಹುಬ್ಬಳ್ಳಿ ನಗರದಲ್ಲಿ ಬೈಕ್ ಜಾಥಾ ನಡೆಸುವ ಮೂಲಕ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಭಾಗಹಿಸಿ ಎಂದು ಜನರಿಗೆ ಆಹ್ವಾನ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+