ಧಾರವಾಡದ ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ

ಧಾರವಾಡ, ಜನವರಿ 15: ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ಬೆಳಿಗ್ಗೆ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಈ ದುರ್ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧಾರವಾಡ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪಿಎಂಒ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸಂದೇಶ ಕಳುಹಿಸಿದ್ದಾರೆ.

ಪ್ರಧಾನಮಮಂತ್ರಿ ಕಚೇರಿಯ ಟ್ವೀಟ್ ಸಂದೇಶದಲ್ಲಿ "ಕರ್ನಾಟಕದ ಧಾರವಾಡ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಜೀವ ಹಾನಿಯಾಗಿರುವುದು ದುಃಖಕರ ವಿಚಾರ. ಈ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.'' ಎಂದು ಹೇಳಿದ್ದಾರೆ.

Prime Minister Narendra Modi Deeply Condolence The Horrific Accident In Dharawad

ಶುಕ್ರವಾರ ಬೆಳಿಗ್ಗೆ ಧಾರವಾಡ ತಾಲ್ಲೂಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 10 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತವಾಗಿ ಎಲ್ಲರೂ ಗೋವಾಕ್ಕೆ ಹೋಗುತ್ತಿದ್ದರು. ಮೃತರೆಲ್ಲರೂ ದಾವಣಗೆರೆ ನಿವಾಸಿಗಳಾಗಿದ್ದಾರೆ.

Recommended Video

      BJP ಸರ್ಕಾರದ ಬಗ್ಗೆ Munirathna ಗೆ ನಂಬಿಕೆ ಇಲ್ವಾ ?? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+