Priyanka Gandhi Vadra: ಏಪ್ರಿಲ್ 29ಕ್ಕೆ ಕುಂದಗೋಳದಲ್ಲಿ ಪ್ರೀಯಾಂಕ ಗಾಂಧಿ ರೋಡ್ ಶೋ, ವಿವರ ಇಲ್ಲಿದೆ
ಕುಂದಗೋಳ, ಏಪ್ರಿಲ್, 28: ವಿಧಾನಸಭೆ ಚುನಾವಣೆ ಹಿನ್ನೆಲೆ ಏಪ್ರೀಲ್ 29ರಂದು ಶಾಸಕಿ ಕುಸುಮಾವತಿ ಪರ ಮತಯಾಚನೆ ಮಾಡಲು ಕುಂದಗೋಳ ಪಟ್ಟಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೀಯಾಂಕ್ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ಅಲ್ಲದೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಲ್ಲಿನ ಜನರ ಬಳಿ ಚರ್ಚೆ ನಡೆಸಲಿದ್ದಾರೆ ಎಂದು ಕುಂದಗೋಳ ಚುನಾವಣೆ ಉಸ್ತುವಾರಿ ಪಿ.ವಿ.ಮೋಹನ್ ಮಾಹಿತಿ ನೀಡಿದ್ದಾರೆ.
ಕುಂದಗೋಳ ಪಟ್ಟಣದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಿ.ವಿ.ಮೋಹನ್, ಏಪ್ರೀಲ್ 29ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಜೆ.ಎಸ್.ಎಸ್.ವಿದ್ಯಾಪೀಠದಿಂದ ಮಾರ್ಕೇಟ್‌ವರೆಗೆ 2 ಕಿಲೋ ಮೀಟರ್ ರೋಡ್ ಶೋ ನಡೆಯಲಿದ್ದು, ಈ ವೇಳೆ 15 ಸಾವಿರಕ್ಕೂ ಅಧಿಕ ಜನ ಸೇರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಮ್.ಎಸ್.ಅಕ್ಕಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮೇಶ್ ಹೆಬಸೂರು, ಗೌಡಪ್ಪಗೌಡ ಪಾಟೀಲ್, ಷಣ್ಮುಖಪ್ಪ ಶಿವಳ್ಳಿ, ಅರವಿಂದಪ್ಪ ಕಟಗಿ, ಜಿ.ಡಿ.ಘೋರ್ಪಡೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಮತ್ತತರರು ಉಪಸ್ಥಿತರಿದ್ದರು.
ನನ್ನ ಅಜ್ಜಿಯ ಸಂಕಷ್ಟದ ಕಾಲದಲ್ಲಿ ಚಿಕ್ಕಮಗಳೂರು ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು, ಈಗ ರಾಜ್ಯದ ಜನ ಕಾಂಗ್ರೆಸ್ ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಕೈ ಹಿಡಿಯಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಚಿಕ್ಕಮಗಳೂರು ಜನತೆಯಲ್ಲಿ ಇತ್ತೀಚೆಗಷ್ಟೇ ಮನವಿ ಮಾಡಿದ್ದರು.
ಚಿಕ್ಕಮಗಳೂರನ್ನು ನಾನು ಯಾವತ್ತೂ ಮರೆಯಲ್ಲ
ಚಿಕ್ಕಮಗಳೂರಿನಲ್ಲಿ ಬಾಳೆಹೊನ್ನೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಬಹಿರಂಗ ಸಮಾವೇಶದಲ್ಲಿ ಟಿ.ಡಿ.ರಾಜೇಗೌಡ ಪರ ಮತಯಾಚನೆ ಮಾತನಾಡಿದ ಅವರು, ಅಂದು ಸಂಕಷ್ಟದಲ್ಲಿದ್ದಾಗ ಚಿಕ್ಕಮಗಳೂರು ಜನರು ನನ್ನ ಅಜ್ಜಿಯ ಕೈ ಹಿಡಿದಿದರು. ಈಗಲೂ ನಮ್ಮ ಕುಟುಂಬ ಸಂಕಷ್ಟದ ಸಮಯವನ್ನು ಅನುಭವಿಸುತ್ತಿದೆ. ಚಿಕ್ಕಮಗಳೂರನ್ನು ನಾನು ಯಾವತ್ತಿಗೂ ಮರೆಯಲ್ಲ ಎಂದಿದ್ದರು.
ಅಜ್ಜಿ ಬಂದಾಗ ಹೇಗಿತ್ತೋ, ಅದೇ ರೀತಿ ಸೌಂದರ್ಯ ಈಗಲೂ ಇದೆ. ಚಿಕ್ಕಮಗಳೂರನ್ನು ಜೀವಮಾನದಲ್ಲಿ ನಾನು ಯಾವತ್ತು ಮರೆಯಲ್ಲ ಎಂದು ಹೇಳಿದ್ದರು. ಪ್ರಿಯಾಂಕಾ ಗಾಂಧಿ ಭಾಷಣದ ವೇಳೆ ಮಳೆ ಬಂದಿದ್ದು, ಜನರು ಮಳೆ ಲೆಕ್ಕಿಸದೇ ಭಾಷಣ ಕೇಳಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ನನ್ನ ಸಹೋದರಿಯರು ಮಳೆಯಲ್ಲಿ ನೆನೆದರೂ ಇಲ್ಲೇ ಇದ್ದೀರಾ. ನಿಮಗೆ ತುಂಬಾ ಧನ್ಯವಾದಗಳು ತಿಳಿಸುತ್ತೇನೆ ಎಂದಿದ್ದರು.
ರಾಹುಲ್ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿ ಲೋಕಸಭೆಯಿಂದ ಹೊರಹಾಕಿದ್ದಾರೆ ಎಂದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಮತ್ತೆ ಲೋಕಸಭಾ ಸದಸ್ಯರಾಗಿ ಬರುತ್ತಾರಡ ಎನ್ನುವ ವಿಶ್ವಾಸ ನಮಗೆ ಇದೆ. ಪರಶಿವನ ಆಶೀರ್ವಾದ ಇದೆ. ಸತ್ಯಕ್ಕೆ ಜಯ ಸಿಕ್ಕೆ ಸಿಗುತ್ತದೆ. ಕರ್ನಾಟಕದ ಚುನಾವಣೆ ಸತ್ಯ ಮತ್ತು ಜಯದ ಹೋರಾಟ. ಒಂದು ಮಾತು ಹೇಳ್ತೇನೆ, ನಮಗೆ ಎಲ್ಲ ಕಡೆ ಮೋಸ ಆಗ್ತಿದೆ. ನಿಮ್ಮ ಮತವನ್ನು ನೀಡಿ ವಿಶ್ವಾಸ ತುಂಬಿ. ಕರ್ನಾಟಕದಲ್ಲಿ ಹೇಳುವವರು ಕೇಳುವವರು ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಜನರಲ್ಲಿ ಮನವಿ ಮಾಡಿದ್ದರು.
ಇದು ಕರ್ನಾಟಕ ಸ್ವಾಭಿಮಾನ ಪರಿಚಯ ಮಾಡುವಂತಹ ಸಮಯ ಎಂದ ಪ್ರಿಯಾಂಕಾ ಗಾಂಧಿ, ಕರ್ನಾಟಕ ಸ್ವಾಭಿಮಾನದ ರಾಜ್ಯ. ಈ ರಾಜ್ಯದ ಪರಿಸ್ಥಿತಿ ಏನು ಅಂತಾ ಪ್ರತಿಯೊಬ್ಬರಿಗೂ ಗೊತ್ತಿದೆ. ನಾವು ಈ ಪರಿಸ್ಥಿತಿಯನ್ನು ಬದಲಾಯಿಸುತ್ತೇವೆ. ನಾವು ನಿಮ್ಮಿಂದ ಲೂಟಿ ಮಾಡುವುದಿಲ್ಲ, ನಾವು ನಿಮ್ಮ ಹಣವನ್ನ ನಿಮಗೆ ವಾಪಸ್ ನೀಡುತ್ತೇವೆ. ಬೆಲೆ ಏರಿಕೆ ಕಡಿಮೆ ಮಾಡುತ್ತೇವೆ. ಕರ್ನಾಟಕವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಬೇಕು ಎಂದು ಹೇಳಿದ್ದರು.
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದ ಪ್ರಿಯಾಂಕಾ ಗಾಂಧಿ ಬಾಳೆಹೊನ್ನೂರು ಮಠಕ್ಕೆ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮಠಕ್ಕೆ ಭೇಟಿ ನೀಡಿದ ಅವರು ಮಠದ ಆವರಣದಲ್ಲಿರುವ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವೀರಭದ್ರೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ. ಗುರುಗಳು ಮಠದಲ್ಲಿ ಇರದ ಕಾರಣ ಆಶೀರ್ವಾದ ಪಡೆಯಲು ಸಾಧ್ಯವಾಗಲಿಲ್ಲ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications