ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು
ಧಾರವಾಡ, ಡಿಸೆಂಬರ್, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.
ಕೋರ್ಸ್ ವಿಷಯ ಅಲ್ಲದ ಅಂಕಗಳ ಸೇರ್ಪಡೆ
ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್ ವಿಷಯ ಅಲ್ಲದ ಅಂಕಗಳನ್ನು ಸೇರ್ಪಡೆ ಮಾಡಿದೆ. ಕಡ್ಡಾಯ ಕನ್ನಡ ವಿಷಯದ ಅಂಕಗಳನ್ನು ಸೇರ್ಪಡೆ ಮಾಡುವ ಮೂಲಕ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಈ ರೀತಿಯ ಸುಮಾರು 15 ಸಾವಿರ ಅಂಕಪಟ್ಟಿಗಳನ್ನು ಮುದ್ರಣ ಮಾಡಿತ್ತು. ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷಾ ವಿಭಾಗ, ಇದೀಗ ತನ್ನ ತಪ್ಪನ್ನು ತಿದ್ದಿಕೊಳ್ಳುವ ಕೆಲಸಕ್ಕೆ ಮುಂದಾಗಿದೆ.

ತಪ್ಪು ಮಾಡಿದವರಿಗೆ ದಂಡ
ಯುಜಿ ವಿಭಾಗದಲ್ಲಿ ಮೊದಲು ಕನ್ನಡ ಕಲಿ ಎಂಬ ವಿಷಯವಿತ್ತು. ಅದನ್ನು ಈಗ ಕಡ್ಡಾಯ ಕನ್ನಡ ಎಂದು ಮಾಡಲಾಗಿದೆ. ಆದರೆ ಕಡ್ಡಾಯ ಕನ್ನಡ ಒಂದು ವಿಷಯ ಅಲ್ಲ. ಆದರೂ ಅದರ ಅಂಕಗಳನ್ನು ವಿದ್ಯಾರ್ಥಿಗಳ ಒಟ್ಟಾರೆ ಫಲಿತಾಂಶಕ್ಕೆ ಸೇರ್ಪಡೆ ಮಾಡಲಾಗಿದೆ. ಈ ತಪ್ಪು ಮಾಡಿದವರಿಗೆ ದಂಡ ವಿಧಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಇನ್ನು ಅಂಕಪಟ್ಟಿ ವಿತರಣೆ ಮಾಡದೇ ಇರುವುದರಿಂದ ಎಲ್ಲವನ್ನೂ ಮತ್ತೊಮ್ಮೆ ಸರಿಪಡಿಸಿಕೊಳ್ಳಲಾಗುತ್ತಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ. ಸಿ. ಕೃಷ್ಣಮೂರ್ತಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ ಮಾಡುವ ಮೊದಲೇ ಈ ತಪ್ಪು ವಿಶ್ವ ವಿದ್ಯಾಲಯದ ಆಡಳಿತ ಮಂಡಳಿಯ ಗಮನಕ್ಕೆ ಬಂದಿದೆ. ಇದೀಗ ಅಂಕಪಟ್ಟಿಯಲ್ಲಿ ಆದ ಈ ಯಡವಟ್ಟಿನಿಂದ ಪಾಸಿಂಗ್ ಸರ್ಟಿಫಿಕೇಟ್‌ನಲ್ಲೂ ಶೇಕಡಾ 5ರಷ್ಟು ವ್ಯತ್ಯಾಸ ಆಗಲಿದೆ. ಅದನ್ನೂ ಸರಿಪಡಿಸುವ ಕೆಲಸ ನಡೆದಿದಿದ್ದು, ಒಟ್ಟಾರೆ ಈ ತಪ್ಪಿನಿಂದಾಗಿ ಸಮಯ, ಹಣ ಎಲ್ಲವೂ ವ್ಯರ್ಥವಾದಂತಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications