ಕೊಂದವರು ಯಾರು?, ಕಲಬುರ್ಗಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ
ಧಾರವಾಡ, ಆ.30 : ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಕಲಬುರ್ಗಿ ಅವರ ಮನೆಗೆ ಇಬ್ಬರು ದುಷ್ಕರ್ಮಿಗಳು ಬಂದಿದ್ದರು. ಅದರಲ್ಲಿ ಒಬ್ಬ ಮಾತ್ರ ಗುಂಡು ಹಾರಿಸಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಧಾರವಾಡದ ಕಲ್ಯಾಣ ನಗರದಲ್ಲಿರುವ ಎಂ.ಎಂ.ಕಲಬುರ್ಗಿ ಅವರ ನಿವಾಸಕ್ಕೆ ಭಾನುವಾರ ಬೆಳಗ್ಗೆ 8.40ರ ಸುಮಾರಿಗೆ ಇಬ್ಬರು ಯುವಕರು ಬೈಕ್ನಲ್ಲಿ ಆಗಮಿಸಿದ್ದರು. ಅದರಲ್ಲಿ ಒಬ್ಬ ಮನೆಯ ಕಾಲಿಂಗ್ ಬೆಲ್ ಒತ್ತಿದ್ದಾನೆ ಮತ್ತು ಆತನೇ ಗುಂಡು ಹಾರಿಸಿದ್ದಾನೆ. ಮತ್ತೊಬ್ಬ ಮನೆಯ ಮುಂದೆ ಬೈಕ್ನಲ್ಲಿ ಕಾಯುತ್ತಿದ್ದ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ. [ಎಂಎಂ ಕಲಬುರ್ಗಿ ಅವರ ಪರಿಚಯ]

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ತಕ್ಷಣವೇ ದುಷ್ಕರ್ಮಿಗಳಿಗಾಗಿ ಶೋಧ ಆರಂಭಿಸಿದ್ದಾರೆ. ಎಸಿಪಿ ಅವರ ನೇತೃತ್ವದಲ್ಲಿ ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮಾಹಿತಿ ನೀಡಿದ್ದಾರೆ. [ಗುಂಡಿನ ದಾಳಿಗೆ ಕಲಬುರ್ಗಿ ಬಲಿ]
ಎಂ.ಎಂ.ಕಲಬುರ್ಗಿ ಅವರ ನಿವಾಸಕ್ಕೆ ಐಜಿಪಿ ಉಮೇಶ್ ಕುಮಾರ್ ಭೇಟಿ ನೀಡಿದ್ದಾರೆ. ಇಂದು ಸಂಜೆ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ. ಸೋಮವಾರ ಬೆಳಗ್ಗೆ ಧಾರವಾಡದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications