ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾರ್ಚ್ 3ರಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 17 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾರ್ಚ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಹಾವೇರಿ-ಧಾರವಾಡ ಲೋಕಸಭಾ ಕ್ಷೇತ್ರದ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಲೋಕಸಭಾ ಚುನಾವಣೆ, ಪಕ್ಷ ಸಂಘಟನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕ ಕಾಂಗ್ರೆಸ್ ಸಮಾವೇವಶನ್ನು ಆಯೋಜನೆ ಮಾಡಿದೆ. ಪ್ರಿಯಾಂಕಾ ವಾದ್ರಾ ಅವರನ್ನು ರಾಜ್ಯಕ್ಕೆ ಪ್ರಚಾರಕ್ಕೆ ಕರೆಸಲು ಚಿಂತಿಸಲಾಗುತ್ತಿದೆ.

ರಾಜೀನಾಮೆ ಬಗ್ಗೆ ಒಂದು ವಾರದಲ್ಲಿ ನಿರ್ಧಾರ: ಉಮೇಶ್ ಜಾಧವ್ರಾಜೀನಾಮೆ ಬಗ್ಗೆ ಒಂದು ವಾರದಲ್ಲಿ ನಿರ್ಧಾರ: ಉಮೇಶ್ ಜಾಧವ್

Rahul Gandhi to visit Karnataka on March 3

'ಹಾವೇರಿ ಅಥವ ಧಾರವಾಡ ಎಲ್ಲಿ ಸಮಾವೇಶ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ' ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಕುಮಾರಸ್ವಾಮಿ ವರ್ಕೌಟ್ ಮಾಡಿರುವ ಸೂಪರ್ ಡೂಪರ್ ಪ್ಲಾನ್! ಏನಿದು?ಕುಮಾರಸ್ವಾಮಿ ವರ್ಕೌಟ್ ಮಾಡಿರುವ ಸೂಪರ್ ಡೂಪರ್ ಪ್ಲಾನ್! ಏನಿದು?

ಬಿಜೆಪಿ ಕರ್ನಾಟಕದಲ್ಲಿ ಈಗಾಗಲೇ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ. ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಪ್ರಚಾರ ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೊಂದು ರಾಜಕೀಯ ಪಕ್ಷ ಸ್ಥಾಪನೆಕರ್ನಾಟಕದಲ್ಲಿ ಮತ್ತೊಂದು ರಾಜಕೀಯ ಪಕ್ಷ ಸ್ಥಾಪನೆ

ಮತ್ತೊಂದು ಕಡೆ ಕಾಂಗ್ರೆಸ್ ಸಹ ಉತ್ತರ ಕರ್ನಾಟಕದಿಂದಲೇ ಚುನಾವಣಾ ಪ್ರಚಾರ ಆರಂಭಿಸಲಿದೆ. ಧಾರವಾಡ ಅಥವ ಹಾವೇರಿಯಲ್ಲಿ ಸಮಾವೇಶ ಆಯೋಜನೆ ಮಾಡಲಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲಿವೆ. ಎರಡೂ ಪಕ್ಷಗಳು ಸೀಟು ಹಂಚಿಕೆಯ ಬಗ್ಗೆ ಇನ್ನೂ ಅಧಿಕೃತವಾಗಿ ತೀರ್ಮಾನವನ್ನು ಕೈಗೊಂಡಿಲ್ಲ.

English summary
AICC president Rahul Gandhi to visit Karnataka on March 3, 2019. He will address rally of Haveri and Dharwad Lok Sabha seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X