ಖಾಸಗಿ ರಂಗದಲ್ಲಿ ಮೀಸಲಾತಿಗೆ ಬದ್ಧ : ಸಿದ್ಧರಾಮಯ್ಯ

By: ಧಾರವಾಡ ಪ್ರತಿನಿಧಿ
Subscribe to Oneindia Kannada

ಧಾರವಾಡ, ಡಿಸೆಂಬರ್. 24 : ಖಾಸಗಿ ರಂಗದಲ್ಲಿನ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಹಾಗೂ ಇತರರಿಗೆ ಮೀಸಲಾತಿ ನೀಡುವುದಕ್ಕೆ ಸರಕಾರದ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಶನಿವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ಕನ್ನಡದ ಬದಲು ಇಂಗ್ಲೀಷ್ ನಲ್ಲಿ ಆಯೋಜಿಸಲು ಕರ್ನಾಟಕ ಸರಕಾರ ಸಮ್ಮತಿ ಸೂಚಿಸಿರಲಿಲ್ಲ.

ಈ ವಿಚಾರವಾಗಿ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಕನ್ನಡದಲ್ಲಿ ಪರೀಕ್ಷೆ ಆಯೋಜಿಸುವಂತೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.

Reservation in private sector says cm siddaramaiah

ಮಹಾದಾಯಿ ವಿಷಯದ ಬಗ್ಗೆ ಪ್ರಧಾನಿ ಮೋದಿ ನಮಗೆ ಸಹಕಾರ ನೀಡುತ್ತಿಲ್ಲ. ಈ ಬಗ್ಗೆ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ರಾಜ್ಯ ಬಿಜೆಪಿ ಈ ಬಗ್ಗೆ ಯಾವುದೇ ಬೆಂಬಲ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆ ಜಿಲ್ಲಾ ಬೀಳಗಿ ಶಾಸಕ ಜೆ.ಟಿ. ಪಾಟೀಲರು ಸಿಡಿ ಬಿಡುಗಡೆ ಮಾಡಬಾರದೆಂದು ಕೋರ್ಟ್ ಗೆ ಮನವಿ ಸಲ್ಲಿಸಿರುವುದು ಅವರ ರಕ್ಷಣೆಗೆ ಅದಕ್ಕೆ ನಾನೇನು ಮಾಡುವುದಕ್ಕೆ ಆಗುತ್ತೇ ಎಂದು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಿದರು.

ಹಾಲಿನ ಪುಡಿ ಉತ್ಪಾದನಾ ಘಟಕ ಉದ್ಘಾಟನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ ಶನಿವಾರ ಧಾರವಾಡ ಬಳಿಯ ದಮುಲ್ ನಲ್ಲಿ ಹಾಲಿನ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಪ್ರತಿ ದಿನ 30 ಮೆಟ್ರಿಕ್ ಟನ್ ಹಾಲಿನ ಪುಡಿ ಇಲ್ಲಿ ಉತ್ಪಾದಿಸಲಾಗುವುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Reservation in private sector says cm siddaramaiah on Saturday, December 24 at dharwad.
Please Wait while comments are loading...