• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ; 13 ಜನರು ಸಾವು

By ದಾವಣಗೆರೆ ಪ್ರತಿನಿಧಿ
|

ಧಾರವಾಡ, ಜನವರಿ 15: ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಘವಿಸಿದೆ. ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದು, 5 ಜನರು ಗಾಯಗೊಂಡಿದ್ದಾರೆ.

ಮುಂಜಾನೆ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಮಿನಿಬಸ್ ಧಾರವಾಡ ಸಮೀಪ ಬಂದಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ 13 ಜನರು ಮೃತಪಟ್ಟಿದ್ದು, ಮಿನಿ ಬಸ್ ಜಖಂಗೊಂಡಿದೆ.

ಶೀಘ್ರವೇ ಮುಗಿಯಲಿದೆ ಎನ್ ಹೆಚ್ 75 ರಸ್ತೆ ಕಾಮಗಾರಿ ಶೀಘ್ರವೇ ಮುಗಿಯಲಿದೆ ಎನ್ ಹೆಚ್ 75 ರಸ್ತೆ ಕಾಮಗಾರಿ

ಕ್ರೇನ್ ಸಹಾಯದಿಂದ ಮುಗುಚಿ ಬಿದ್ದಿದ್ದ ವಾಹನವನ್ನು ಎತ್ತಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಪಘಾತದಲ್ಲಿ 5 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗ; ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವುಚಿತ್ರದುರ್ಗ; ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವು

Road Accident 11 Killed Near Dharwad

ಮರಳು ಸಾಗಣೆ ಮಾಡುತ್ತಿದ್ದ ಲಾರಿ ಮತ್ತು ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಘಘಾತ ಸಂಭವಿಸಿದೆ. ದಾವಣಗೆರೆಗೆಯಿಂದ ಹೊರಟಿದ್ದ ಎಲ್ಲರೂ ಪಣಜಿ ಪ್ರವಾಸಕ್ಕಾಗಿ ಹೋಗುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಶಿರಸಿ-ಕುಮಟಾ ರಸ್ತೆ ಅಗಲೀಕರಣ; ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಶಿರಸಿ-ಕುಮಟಾ ರಸ್ತೆ ಅಗಲೀಕರಣ; ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

ಸಂತೋಷ ಕೂಟಕ್ಕೆ ಹೊರಟಿದ್ದರು; ಮೃತಪಟ್ಟವರನ್ನು ಪ್ರವೀಣ್, ಆಶಾ, ಮೀರಾಬಾಯಿ, ಪರಂಜ್ಯೋತಿ, ರಾಜೇಶ್ವರಿ, ಶಕುಂತಲಾ, ಉಷಾ, ವೇದಾ, ವೀಣಾ, ಮಂಜುಳ, ನಿರ್ಮಲ, ರಜನೀಶಿ, ಪ್ರೀತಿ ಎಂದು ಗುರುತಿಸಲಾಗಿದೆ. ಚಾಲಕನ ಹೆಸರು ತಿಳಿದು ಬಂದಿಲ್ಲ.

ಮೃತರೆಲ್ಲರೂ ದಾವಣಗೆರೆ ಮೂಲದವರಾಗಿದ್ದು, 16 ಮಹಿಳೆಯರು ಲೇಡಿಸ್ ಕ್ಲಬ್‌ನಿಂದ ಸಂತೋಷ ಕೂಟಕ್ಕಾಗಿ ಗೋವಾಕ್ಕೆ ಹೊರಟಿದ್ದರು ಎಂದು ಗಾಯಗೊಂಡವರ ಪೈಕಿ ಮಹಿಳೆಯೊಬ್ಬರು ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಿಂದ ನಸುಕಿನ ವೇಳೆ ಹೊರಟಿದ್ದ ಇವರು ಧಾರವಾಡದ ಪರಿಚಯಸ್ಥರ ಮನೆಗೆ ಉಪಹಾರಕ್ಕೆಂದು ತೆರಳುವವರಿದ್ದರು. ತೀವ್ರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

   BJP ಸರ್ಕಾರದ ಬಗ್ಗೆ Munirathna ಗೆ ನಂಬಿಕೆ ಇಲ್ವಾ ?? | Oneindia Kannada

   ಅಪಘಾತದ ಸುದ್ದಿ ತಿಳಿದ ಮೃತರ ಕುಟುಂಬಸ್ಥರು ದಿಗ್ಬ್ರಮೆಗೊಂಡಿದ್ದು, ಧಾರವಾಡಕ್ಕೆ ಆಗಮಿಸುತ್ತಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

   English summary
   13 people died in road accident near Ittigatti village in Dharwad district of Karnataka. 4 people injured in a accident.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X