• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

13 ಜನರನ್ನು ಬಲಿ ಪಡೆದ ಅಪಘಾತ; ಧಾರವಾಡ ಜಿಲ್ಲಾಡಳಿತ ಕ್ರಮವೇನು?

|
Google Oneindia Kannada News

ಧಾರವಾಡ, ಜನವರಿ 18: ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ಮುಂಜಾನೆ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾಗಿ 13 ಜನರು ಮೃತಪಟ್ಟಿದ್ದರು. ಮೃತಪಟ್ಟವರೆಲ್ಲರೂ ದಾವಣಗೆರೆ ಮೂಲದವರಾಗಿದ್ದು ಶಾಲಾ ದಿನಗಳಿಂದ ಸ್ನೇಹಿತರಾಗಿದ್ದರು.

ಈ ಭೀಕರ ರಸ್ತೆ ಅಪಘಾತದ ಬಳಿಕ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಪೋಸ್ಟ್‌ಗಳನ್ನು ಹಾಕಿದ್ದರು. ಧಾರವಾಡ ಜಿಲ್ಲಾಡಳಿತ ರಸ್ತೆ ಸುರಕ್ಷತೆಗಾಗಿ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿದ್ದರು.

ದಾವಣಗೆರೆ; 13 ಕುಟುಂಬಗಳಿಗೆ ಆಘಾತ ತಂದ ಧಾರವಾಡದ ಅಪಘಾತದಾವಣಗೆರೆ; 13 ಕುಟುಂಬಗಳಿಗೆ ಆಘಾತ ತಂದ ಧಾರವಾಡದ ಅಪಘಾತ

ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ನಿತೇಶ ಪಾಟೀಲ ಜಿಲ್ಲೆಯಲ್ಲಿನ ರಸ್ತೆ ಅಪಘಾತಗಳ ಬಗ್ಗೆ ಮಾತನಾಡಿದ್ದಾರೆ. "ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ 30 ಕಿ.ಮೀ. ರಸ್ತೆಯಲ್ಲಿನ ಅಪಘಾತಗಳನ್ನು ತಪ್ಪಿಸಲು ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು" ಎಂದು ಸೂಚಿಸಿದ್ದಾರೆ.

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ; 13 ಜನರು ಸಾವು ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ; 13 ಜನರು ಸಾವು

ಪ್ರತಿ ಕಿ. ಮೀ. ಗೆ 60 ವೇಗದ ಮಿತಿ ಇದ್ದರೂ ಬಸ್, ಟ್ರಕ್, ಮಿನಿಬಸ್, ಕಾರು ಮುಂತಾದ ವಾಹನಗಳ ಚಾಲಕರು ನಿಯಮ ಪಾಲಿಸದೇ ವೇಗವಾಗಿ ವಾಹನ ಚಾಲನೆ, ವಾಹನಗಳ ಓವರ್‌ ಟೇಕ್ ಮಾಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಅಪಘಾತ, ಸಾವು-ನೋವು ಆಗುತ್ತಿವೆ ಎಂದು ಹೇಳಿದರು.

ಶೀಘ್ರವೇ ಮುಗಿಯಲಿದೆ ಎನ್ ಹೆಚ್ 75 ರಸ್ತೆ ಕಾಮಗಾರಿ ಶೀಘ್ರವೇ ಮುಗಿಯಲಿದೆ ಎನ್ ಹೆಚ್ 75 ರಸ್ತೆ ಕಾಮಗಾರಿ

ರಸ್ತೆ ನಿರ್ವಾಹಕ ಗುತ್ತಿಗೆದಾರ, ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಬೈಪಾಸ್‍ನ 30 ಕಿ. ಮೀ. ರಸ್ತೆ ಪರಿಶೀಲಿಸಿ ಮುಂದಿನ 72 ಗಂಟೆಗಳಲ್ಲಿ ಅಪಾಯಕಾರಿ ಸ್ಥಳ, ಸೇತುವೆ ತಿರುವು ಗುರುತಿಸಿ ಅಲ್ಲಿ ಕನಿಷ್ಠ 20 ಎಚ್ಚರಿಕೆ ಫಲಕ, ವೇಗದ ಮೀತಿ ಸೂಚಿಸುವ ಮತ್ತು ಸುರಕ್ಷತಾ ನಿಯಮಗಳ ಫಲಕಗಳನ್ನು ಅಳವಡಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ರಸ್ತೆ ವಿಭಜಕ ನಿರ್ಮಿಸಲು ಸೂಚನೆ

ರಸ್ತೆ ವಿಭಜಕ ನಿರ್ಮಿಸಲು ಸೂಚನೆ

ಹುಬ್ಬಳ್ಳಿ-ಧಾರವಾಡದ 30 ಕಿ.ಮೀ. ಬೈಪಾಸ್ ರಸ್ತೆಯ ಮಧ್ಯದಲ್ಲಿ ರಬ್ಬರ್ ಮತ್ತು ಫೈಬರ್ ಸಾಧನ ಬಳಸಿ ರಸ್ತೆ ವಿಭಜಕಗಳನ್ನು ನಿರ್ಮಿಸಲು ಸೂಚನೆ ನೀಡಲಾಗಿದೆ. ರಸ್ತೆ ಅಗಲೀಕರಣ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದು, ಅನುಮತಿ ಬಂದ ತಕ್ಷಣ ಈ ಕುರಿತು ತುರ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಅನಧಿಕೃತ ಅಂಗಡಿಗಳು

ಅನಧಿಕೃತ ಅಂಗಡಿಗಳು

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಫುಟ್‍ಪಾತ್ ಅತಿಕ್ರಮಿಸಿ ಅಂಗಡಿ, ವ್ಯಾಪಾರಗಳನ್ನು ಅನಧಿಕೃತವಾಗಿ ಮಾಡಲಾಗುತ್ತಿದೆ. ಟೋಲ್ ಪಕ್ಕದಲ್ಲಿಯೇ ಗುತ್ತಿಗೆದಾರರಿಗೆ ನೀಡಿರುವ ಜಾಗದಲ್ಲಿ ನಿಯಮ ಉಲ್ಲಂಘಿಸಿ ಅಂಗಡಿ ನಿರ್ಮಾಣ, ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಲಾಗಿದೆ. ಈ ಕುರಿತು ರಸ್ತೆ ನಿರ್ವಾಹಕ ಗುತ್ತಿಗೆದಾರ ಸಂಸ್ಥೆಗೆ ನೋಟೀಸ್ ನೀಡಿ ಮತ್ತು ಸೂಕ್ತ ಬಂದೋಬಸ್ತ್‌ನಲ್ಲಿ ಎಲ್ಲಾ ಅತಿಕ್ರಮಣಗಳನ್ನು ಶೀಘ್ರದಲ್ಲಿ ತೆರವುಗೊಳಿಸಲಾಗುತ್ತದೆ.

ಸರ್ಕಾರಕ್ಕೆ ವರದಿ ಸಲ್ಲಿಕೆ

ಸರ್ಕಾರಕ್ಕೆ ವರದಿ ಸಲ್ಲಿಕೆ

ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಮತ್ತು ಟಿಪ್ಪರ್ ವಾಹನದ ಚಾಲಕನ ಮೇಲೆ ಅಜಾಗರೂಕತೆಯ ವಾಹನ ಚಾಲನೆ ಸೇರಿದಂತೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

  karkala , nippani , ಬೆಳಗಾವಿ ಮಹಾರಾಷ್ಟ್ರ ಗೆ ಸೇರಬೇಕಂತೆ !! | Oneindia Kannada
  ಪೊಲೀಸ್ ಗಸ್ತು ಹೆಚ್ಚಳ

  ಪೊಲೀಸ್ ಗಸ್ತು ಹೆಚ್ಚಳ

  ರಾಜ್ಯ ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರಿ ವಿಭಾಗದ ಅಪರ ಪೊಲೀಸ್ ಮಹಾನಿರ್ದೇಶಕ ಪ್ರತಾಪ ರೆಡ್ಡಿ ಮಾತನಾಡಿ, "ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ವಾಹನ ಹಾಗೂ ವಾಹನ ಚಾಲಕರಿಂದ ಕಾನೂನು ಹಾಗೂ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ರಸ್ತೆ, ತಿರುವು, ಸೇತುವೆಗಳ ಸಮೀಪದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಎಚ್ಚರಿಕೆ ಸಂದೇಶಗಳನ್ನು ಚಾಲಕರಿಗೆ ಎದ್ದು ಕಾಣುವಂತೆ ಅಳವಡಿಸಬೇಕು" ಎಂದು ಹೇಳಿದರು.

  English summary
  13 people of Davanagere killed in road accident near Ittigatti village in Dharwad district of Karnataka. Here are the measures taken by Dharwad district administration.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X