ಧಾರವಾಡದಲ್ಲಿ ರಸ್ತೆ ಅಪಘಾತ; ಸ್ವಾಮೀಜಿ ಸಾವು

ಧಾರವಾಡ, ಜನವರಿ 26 : ಧಾರವಾಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸಾಮೀಜಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಭಾನುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇಂಡಿಕಾ ಕಾರಿನಲ್ಲಿದ್ದ ಶಿವಾನಂದ ಮಠದ ಬಸವೇಶ್ವರ ಸಾಮೀಜಿ ಮತ್ತು ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸಾಮೀಜಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದರು. ಕಾರು ಚಾಲಕನನ್ನು ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಕಾರಿನ ಹಿಂಬದಿ ಕುಳಿತಿದ್ದ ಬಸಪ್ಪ ಪೂಜಾರ, ಸಿದ್ದಪ್ಪ ಇಂಗಳಳ್ಳಿ ಗಾಯಗೊಂಡಿದ್ದಾರೆ.

Road Accident Basaveshwara Swamiji Killed

ಅಪಘಾತದ ರಭಸಕ್ಕೆ ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ ಎಂದು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದ ರಭಸಕ್ಕೆ ಕಾರುಗಳು ಜಖಂಗೊಂಡಿವೆ. ಕ್ರೇನ್ ಸಹಾಯದಿಂದ ಕಾರುಗಳನ್ನು ಪಕ್ಕಕ್ಕೆ ಸರಿಸಿ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+