ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಮತ್ತೆ ಅಣಿ: ಸಂಕಲ್ಪ ಸಭೆ, 18 ಜಿಲ್ಲೆಗಳಲ್ಲಿ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ
ಧಾರವಾಡ, ಮೇ 22: ಪಂಚಮಸಾಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಳೆದ ಮೂರು ವರ್ಷದಿಂದ ಹೋರಾಟ ನಡೆದಿದೆ. ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೂ ಹೋರಾಟ ಮುಂದುವರೆಸಲಾಗುವುದು ಕೂಡಲ ಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಧಾರವಾಡದಲ್ಲಿ ಪಂಚಮಸಾಲಿ ಹೋರಾಟ ಮುಂದುವರೆಸುವ ಕುರಿತು ಮಾಹಿತಿ ನೀಡಲು ಬುಧವಾರ ಸುದ್ದಿಗೋಷ್ಠಿ ನಡೆಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಮೀಸಲಾತಿಗಾಗಿ ರಾಜ್ಯದ 12 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಿದ್ದೇವೆ. ಇಷ್ಟಲಿಂಗ ಪೂಜೆಯೊಂದಿಗೆ ಹೋರಾಟ ಮಾಡಿದ್ದೇವೆ. ಅದೊಂದು ವಿಭಿನ್ನ ಬಗೆಯ ಹೋರಾಟ.

ಅಲ್ಲದೇ ಕಲಬುರ್ಗಿಯಲ್ಲಿ ಹೋರಾಟ ಮಾಡಿದ್ದೆವು. ನೀತಿ ಸಂಹಿತೆ ಜಾರಿಯಾಯಿತು. ಹೀಗಾಗಿ ಹೋರಾಟವನ್ನು ಸ್ಥಗಿತಗೊಳಿಸಲಾಯಿತು. ಈಗ ಮತ್ತೆ 18 ಜಿಲ್ಲೆಗಳಲ್ಲಿ ಹೋಗಾಟ ಶುರು ಮಾಡುತ್ತೇವೆ. ಉಕ್ಕಡ ಜಿಲ್ಲೆಯ ಉಳವಿಯಲ್ಲಿ ಮತ್ತೆ ಹೋರಾಟದ ಸಭೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
ಉಳವಿಯಲ್ಲಿ ನಾಳೆ ಸಂಕಲ್ಪ ಸಭೆ
ಹೋರಾಟ ಆಯೋಜನೆ ಕುರಿತು ಪಂಚಮಸಾಲಿನ ಮುಖಂಡರೆಲ್ಲರೂ ಸೇರಿದಂತೆ ನಾಳೆ ಗುರುವಾರ ಮೇ 23 ರಂದು ಉಳವಿಯಲ್ಲಿ 'ಸಂಕಲ್ಪ ಸಭೆ' ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಮರುದಿನ ಬೆಳಿಗ್ಗೆ ಸಾಮೂಹಿಕ ಇಷ್ಟಲಿಂಗ ಪೂಜೆ ಕೂಡ ಏರ್ಪಡಿಸಲಾಗಿದೆ. ಎರಡು ದಿನಗಳ ಈ ಮಹತ್ವದ ಸಭೆಗೆ ಸಮುದಾಯದ ಎಲ್ಲರೂ ಸಭೆಗೆ ಬರರುವಂತೆ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಮಲೆಮಹಾದೇಶ್ವರ ಬೆಟ್ಟದಲ್ಲೂ ಸಭೆ
ಈ ಸಭೆಯಲ್ಲಿನ ಚರ್ಚೆಸಿ, ಹೋರಾಟ ರೂಪುರೇಷೆ ಕುರಿತು ಸಲಹೆ ಕೇಳಲಾಗುವುದು. ಸದ್ಯ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿದ್ದು, ಅದು ಮುಗಿದ ನಂತರ ಮತ್ತೊಂದು ಸುತ್ತಿನ ಸಭೆ ಮಾಡಲಾಗುವುದು. ಜೂನ್ ತಿಂಗಳ ಕೊನೆಯ ವಾರದಲ್ಲಿ ಮಲೆಮಹದೇಶ್ವರ ಬೆಟ್ಟದಲ್ಲಿ ಸಭೆ ಮಾಡಲಾಗುವುದು ಈ ಸಭೆಯಲ್ಲಿ ಸಮಾಜದ ಶಾಸಕರು, ಸಂಸದರು ಭಾಗವಹಿಸಲಿದ್ದಾರೆ ಎಂದರು.
ರಾಜಕಾರಣಿಗಳು ನಮ್ಮ ಪಂಚಮಸಾಲಿ ಸಮಾಜದ ಜನರನ್ನು ಚುನಾವಣೆಯಲ್ಲಿ ಗೆಲ್ಲಲು ಮಾತ್ರವೇ ಬಳಸಿಕೊಳ್ಳಬೇಡಿ. ಸಮಾಜದ ಉದ್ಧಾರಕ್ಕೂ ನೀವು ಪ್ರಮಾಣಕಕವಾಗಿ ಪ್ರಯತ್ನಿಸಬೇಕು. ನಮ್ಮ ಸಮಾಜದ ಎಲ್ಲ ಜನಪ್ರತಿನಿಧಿಗಳು ಮಾತನಾಡಬೇಕು. ಜೂನ್ ತಿಂಗಳಲ್ಲಿ ಮಳೆಗಾಲದ ಅಧಿವೇಶನ ನಡೆಯಬಹುದು ಎಂದು ಅವರು ತಿಳಿ ಹೇಳಿದರು.
ಸಿಎಂ ಬದಲಾದರೂ, ನಮ್ಮ ಗುರಿ ಬದಲಾಗಬಾರದು
ಆಗ ನಮ್ಮ ಸಮಾಜದ ಎಲ್ಲ ಶಾಸಕರು ಮಾತನಾಡಬೇಕಿದೆ. ಈಗಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ಮೀಸಲಾತಿ ಪರ ಧ್ವನಿ ಎತ್ತಿದ್ದಾರೆ. ಅದೇ ರೀತಿ ಉಳಿದ ಶಾಸಕರೂ ಧ್ವನಿ ಎತ್ತಬೇಕಿದೆ. ಪಕ್ಷ ಬೇಧ ಮರೆತು ಎಲ್ಲರೂ ದನಿ ಎತ್ತಬೇಕು. ಗುರಿ ಮುಟ್ಟುವರೆಗೆ ಹೋರಾಟ ಮುಂದುವರೆಸಬೇಕು ಎಂದು ಅವರು ಕರೆ ನೀಡಿದರು.
ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬಹುದು. ಆದರೆ ನಮ್ಮ ಗುರಿ ಮಾತ್ರ ಬದಲಾಗೋದಿಲ್ಲ. ಇದುವರೆಗೂ ನಾವು ಶಾಂತ ರೀತಿಯಲ್ಲಿ ಹೋರಾಟ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಅನ್ನೋದನ್ನು ಸಭೆಯಲ್ಲಿ ನಿರ್ಧರಿಸುತ್ತೇವೆ ಎಂದು ಅವರು ಹೇಳಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications