Get Updates
Get notified of breaking news, exclusive insights, and must-see stories!

ಧಾರವಾಡ ಜಿಲ್ಲಾ ರೈತರಿಗೆ ಸಿಹಿ ಸುದ್ದಿ: ಬೀಜ, ರಸಗೊಬ್ಬರದ ಚಿಂತೆ ಬಿಡಿ

ಧಾರವಾಡ, ಮೇ 27: ಸಂಕಷ್ಟದಲ್ಲಿರುವ ರೈತರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ 31 ಕೇಂದ್ರಗಳ ಮೂಲಕ ರೈತರಿಗೆ ಅಗತ್ಯ ಬೀಜಗಳನ್ನು ಮತ್ತು ಸೊಸೈಟಿ, ಖಾಸಗಿ ಮಾರಾಟಗಾರರು ಸುಮಾರು 500ಕ್ಕೂ ಹೆಚ್ಚು ಕೇಂದ್ರಗಳಲ್ಲಿ ರಸಗೊಬ್ಬರ ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿದೆ.

ಅದಾಗ್ಯೂ ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಬೀಜ, ಗೊಬ್ಬರ ನೀಡಲು ಅನಗತ್ಯ ಷರತ್ತು ವಿಧಿಸುವುದು, ಬೀಜ ಮತ್ತು ಗೊಬ್ಬರದ ಕೃತಕ ಅಭಾವ ಸೃಷ್ಟಿಸುವುದು ಕಂಡು ಬಂದಲ್ಲಿ ಅಂತಹ ಮಾರಾಟಗಾರರ ಲೈಸನ್ಸ್ ರದ್ದು ಪಡಿಸಿ, ಅವರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಎಚ್ಚರಿಕೆ ನೀಡಿದ್ದಾರೆ.

Seeds-Fertilizers Distribution to Farmers in Dharwad If Create Artificial Scarcity DC Legal action warn

ಧಾರವಾಡದಲ್ಲಿ ಅಗತ್ಯಕ್ಕಿಂತ ಹೆಚ್ಚು ಬೀಜ, ರಸಗೊಬ್ಬರ ದಾಸ್ತಾನಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ಮಾರಾಟಗಾರರು ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಸೂಕ್ತ ಕ್ರಮವಹಿಸಲಾಗುವುದು.

ಧಾರವಾಡ ಜಿಲ್ಲೆಯ ವಾಡಿಕೆ ಮಳೆ (ಏಪ್ರೀಲ್ ಮತ್ತು ಮೇ (25.05.2024) ಮಾಹೆಯ) 91.9 ಮಿ.ಮೀ. ಇದ್ದು 120.1 ಮಿ.ಮಿ. ನಷ್ಟು ಮಳೆಯಾಗಿದೆ. ಪ್ರಮುಖವಾಗಿ ಮೇ ಮಾಹೆಯಲ್ಲಿ (25.05.2024 ರವರೆಗೆ) 50.5 ಮಿ.ಮೀ ವಾಡಿಕೆ ಮಳೆಗೆ 71.1 ಮಿ.ಮೀ ಮಳೆಯಾಗಿರುತ್ತದೆ.

ಮೇ ಮಾಹೆಯಲ್ಲಿ ವಾಡಿಕೆ ಮಳೆಗಿಂತಲೂ ಶೇ 40.79 ರಷ್ಟು ಹೆಚ್ಚು ಮಳೆಯಾಗಿದ್ದು ರೈತರು ಬಿತ್ತನೇ ಪೂರ್ವ ಚಟುವಟಿಕೆಗಳನ್ನು ಹಾಗೂ ಬಿತ್ತನೆ ಕಾರ್ಯ ಕೈಗೊಳ್ಳುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಕಾಲಕ್ಕೆ ದೊರೆಯಬೇಕು ಎಂಬ ಸದುದ್ದೇಶದಿಂದ 14 ರೈತ ಸಂಪರ್ಕ ಕೇಂದ್ರಗಳ ಜೊತೆಗೆ 17 ಹೆಚ್ಚುವರಿಯಾಗಿ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ ಮತ್ತು ರಜಾ ದಿನಗಳಲ್ಲೂ ಸಹ ಬೀಜ ವಿತರಣಾ ಕೇಂದ್ರಗಳ ತೆರೆಯಲು ಸೂಚಿಸಲಾಗಿದೆ.

ಸದ್ಯ ಬೀಜ ವಿತರಣೆ ಮಾಡಲಾಗುತ್ತಿದೆ. ಮತ್ತು ಜಿಲ್ಲೆಯಲ್ಲಿ ಮಳೆ ಬಿಡಿಬಿಡಿಯಾಗಿ ಆಗುತ್ತಿದ್ದು, ಸಂಬಂದಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರ ದಟ್ಟಣೆ ಉಂಟಾದರೆ ತಕ್ಷಣ ಹೆಚ್ಚುವರಿ ಕೌಂಟರ್ ತೆರೆದು ಬೀಜ ವಿತರಿಸಲು ಕೃಷಿ ಇಲಾಖೆ ಮೂಲಕ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅನಗತ್ಯವಾಗಿ ರೈತರು ಬೀಜ ಮತ್ತು ಗೊಬ್ಬರ ವಿಷಯದಲ್ಲಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ, ರಸಗೊಬ್ಬರ ಖರೀದಿ ಮಾಡುವದರಿಂದ ಉಳಿದ ರೈತರಿಗೂ ಅನುಕೂಲವಾಗುತ್ತದೆ. ಸಮರ್ಪಕ ವಿತರಣೆಗೂ ಸಹಾಯವಾಗುತ್ತದೆ. ಒಂದೇ ರೈತ ಸಂಪರ್ಕ ಕೇಂದ್ರಕ್ಕೆ ಎಲ್ಲರೂ ಒಮ್ಮೆಲೇ ಬಂದಾಗ ಸ್ವಲ್ಪ ಮಟ್ಟಿನ ಗೊಂದಲ, ಹೆಚ್ಚಿನ ಸರತಿ ಸಾಲು ಉಂಟಾಗುತ್ತದೆ. ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಅಗತ್ಯ ದಾಸ್ತಾನು ಇದ್ದು ರೈತರು ಮಳೆ, ಹವಾಮಾನ ನೋಡಿಕೊಂಡು, ಕೃಷಿ ಇಲಾಖೆ, ಕೃಷಿ ವಿಜ್ಞಾನಿಗಳ ಸಲಹೆ ಪಡೆದು ಬಿತ್ತನೆ ಮಾಡಬೇಕೆಂದು ಅವರು ಹೇಳಿದ್ದಾರೆ.

ಬೀಜ, ಗೊಬ್ಬರದ ಅಭಾವ ಸೃಷ್ಟಿಸಿದರೆ ಲೈಸನ್ಸ್ ರದ್ದು

ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಬಿತ್ತನೆ ಬೀಜ, ರಸಗೊಬ್ಬರಗಳ ದಾಸ್ತಾನು ಇದೆ. ಆದರೂ ಕೆಲವು ಕೃಷಿ ಪರಿಕರ ಮಾರಾಟಗಾರರು, ಸೊಸೈಟಿಗಳ ಸಿಬ್ಬಂದಿಗಳು ಬೀಜ ಖರೀದಿಗೆ ಬರುವ ರೈತರಿಗೆ ಅನಗತ್ಯ ಷರತ್ತು ವಿಧಿಸುವುದು, ಬೀಜ, ಗೊಬ್ಬರದ ಕೊರತೆ ಇದೆ ಎಂದು ಬಿಂಬಿಸಿ, ಬೀಜ ಮತ್ತು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ.

ಅಂತಹ ಮಾರಾಟಗಾರರ ಲೈಸನ್ಸ್ ತಕ್ಷಣ ರದ್ದುಪಡಿಸಿ, ಅವರ ಮೇಲೆ ಕಾನೂನು ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕ್ರಮಕೈಗೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಅವರು ಎಚ್ಚರಿಸಿದರು.

ಜಿಲ್ಲಾ ಮಟ್ಟದಲ್ಲಿ ಕೃಷಿ ಜಾಗೃತ ಕೋಶದ ಅಧಿಕಾರಿಗಳು ನಿಯಮಿತವಾಗಿ ಎಲ್ಲಾ ಮಾರಾಟ ಮಳಿಗೆಗಳನ್ನು ಭೇಟಿ ನೀಡಿ ಪರಿಶೀಲನೆ ಕೈಗೊಂಡು ಜಿಲ್ಲೆಯಾದ್ಯಂತ ಯಾವುದೇ ನಕಲಿ ಕೃಷಿ ಪರಿಕರಗಳ ವಿತರಣೆ ಆಗದಂತೆ ನಿಗಾ ವಹಿಸುತ್ತಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ 650 ಕ್ಕೂ ಹೆಚ್ಚು ಬಿತ್ತನೆ ಬೀಜದ ಮಾದರಿಗಳನ್ನು ಹಾಗೂ ರಸಗೊಬ್ಬರದ 120 ಮಾದರಿಗಳನ್ನು ತೆಗೆದು ಗುಣಮಟ್ಟದ ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಕೊಡಲಾಗಿದೆ.

ಪ್ರತಿ ವಿತರಣಾ ಕೇಂದ್ರದಿಂದ ವಿತರಿಸಲಾಗುವ ಬಿತ್ತನೆ ಬೀಜಗಳ ಮೊಳಕೆ ಪ್ರಮಾಣವನ್ನು ಅಲ್ಲಿಯೇ ಪರೀಕ್ಷಿಸಿ ಗುಣಮಟ್ಟವನ್ನು ಖಾತ್ರಿಪಡಿಸಿಕೊಂಡು ವಿತರಿಸಲಾಗುತ್ತಿದೆ.

ಜಿಲ್ಲೆಯ ಎಲ್ಲ ತಹಶೀಲ್ದಾರರಿಗೆ ಮತ್ತು ಸಹಾಯಕ ಕೃಷಿ ನಿರ್ದೇಶಕರಿಗೆ ನಿಯಮಿತವಾಗಿ ಖುದ್ದು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಬೀಜ, ಗೊಬ್ಬರ ವಿತರಣೆ ಕಾರ್ಯವನ್ನು ಪರಿಶೀಲಿಸಿ, ರೈತರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Seeds-Fertilizers Distribution to Farmers in Dharwad If Create Artificial Scarcity DC Legal action warn

ಯಾವುದೇ ಕೃಷಿ ಪರಿಕರ ಮಾರಾಟ ಅಂಗಡಿಯವರು ಬೀಜ ಅಥವಾ ಗೊಬ್ಬರ ನೀಡಲು ಬೇರೆ ಕೃಷಿ ಪರಿಕರ ಖರೀದಿ ಮಾಡುಂತೆ ಕಂಡೀಷನ್ ಹಾಕಿದರೆ, ರೈತರು ನೇರವಾಗಿ ಕೃಷಿ ಇಲಾಖೆ ಹಾಗೂ ಜಾಗೃತದಳದ ಅಧಿಕಾರಿಗಳಿಗೆ ಅಥವಾ ತಹಶಿಲ್ದಾರ ಕಚೇರಿ ಸಹಾಯವಾಣಿಗೆ ಕರೆ ಮಾಡಿ, ಮಾಹಿತಿ ನೀಡಬಹುದು. ಕಾನೂನುಬಾಹಿರವಾಗಿ ವರ್ತಿಸುವ ಅಂಗಡಿಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮುಂಗಾರಿನ ಬಿತ್ತನೆ ಗುರಿ

ಮುಂಗಾರು ಹಂಗಾಮಿನಲ್ಲಿ 2,70,840 ಹೆಕ್ಟೇರ್ ಬಿತ್ತನೆ ಕ್ಷೇತ್ರದ ಗುರಿ ಇದ್ದು ಪ್ರಮುಖ ಬೆಳೆಗಳಾದ ಹೆಸರು (67,150 ಹೆಕ್ಟೇರ್), ಹತ್ತಿ (59,000 ಹೆಕ್ಟೇರ್), ಮುಸುಕಿನಜೋಳ (57,175 ಹೆ), ಸೋಯಾ, ಅವರೆ (33,100 ಹೆ), ಶೇಂಗಾ (25,000 ಹೆ), ಉದ್ದು (7,350 ಹೆ) ಹಾಗೂ ಭತ್ತ (11,522 ಹೆ) ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿದೆ. ಉತ್ತಮ ಮಳೆಯ ಹಿನ್ನೆಲೆಯಲ್ಲಿ ಪ್ರಮುಖ ಬೆಳೆಗಳಾದ ಹೆಸರು, ಮುಸುಕಿನ ಜೋಳ, ಸೋಯಾ ಅವರೆ ಜಿಲ್ಲೆಯಾದ್ಯಂತ ಬಿತ್ತನೆ ಆಗಿದೆ.

ಬಿತ್ತನೆ ಬೀಜ ವಿತರಣೆ

ಮುಂಗಾರು ಹಂಗಾಮಿನಲ್ಲಿ ಸಹಾಯಧನದಲ್ಲಿ 20,681 ಕ್ವಿಂಟಲ್ ಗಳಷ್ಟು ವಿವಿಧ ಬೆಳೆಗಳ ಬಿತ್ತನೆ ಬೀಜ ವಿತರಣೆ ಬೇಡಿಕೆ ಇದ್ದು, ಈಗಾಗಲೇ ಒಟ್ಟು 23,779 ಕ್ವಿಂ ನಷ್ಟು ಬಿತ್ತನೆ ಬೀಜ ಲಭ್ಯವಿದೆ. ಜಿಲ್ಲೆಯಲ್ಲಿ ಒಟ್ಟಾರೆ 8086 ಕ್ವಿಂಟಲ್ ಅಂದರೆ, ಪ್ರಮುಖ ಬೆಳೆಗಳಾದ ಸೋಯಾಅವರೆ -5,230 ಕ್ವಿಂಟಲ್, ಮೆಕ್ಕೆಜೋಳ- 1050 ಕ್ವಿಂಟಲ್, ಶೇಂಗಾ- 732 ಕ್ವಿಂಟಲ್, ಹೆಸರು- 662 ಕ್ವಿಂಟಲ್, ಉದ್ದು- 246 ಕ್ವಿಂಟಲ್ ಹಾಗೂ ಭತ್ತ- 140 ಕ್ವಿಂಟಲ್ ಬಿತ್ತನೆ ಬೀಜಗಳನ್ನು ಈಗಾಗಲೇ ದಾಸ್ತಾನು ಮಾಡಲಾಗಿದೆ. ವಿತರಣೆ ಸಹ ಆರಂಭಿಸಲಾಗಿದ ಎಂದು ಅವರು ವಿವರಿಸಿದರು.

ರಸಗೊಬ್ಬರ ವಿತರಣೆ, ಹೆಚ್ಚಾದ ಬೇಡಿಕೆ

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 56,243 ಮೆಟ್ರಿಕ್ ಟನ್‌ಗಳಷ್ಟು ವಿವಿಧ ಗ್ರೇಡಗಳ ರಸಗೊಬ್ಬರಗಳ ಅವಶ್ಯಕತೆ ಇದ್ದು, ಮೇ-2024 ರ ಅಂತ್ಯದವರೆಗೆ 16,749 ಮೆಟ್ರಕ್ ಟನ್ ಅಂದರೆ, ಯೂರಿಯಾ-6478.66, ಡಿಎಪಿ-6570.42, ಎಂಓಪಿ-567.18, ಕಾಂಪ್ಲೇಕ್ಸ್-2767.17, ಎಸ್‌ಎಸ್‌ಪಿ-366.12 ರಸಗೊಬ್ಬರದ ಬೇಡಿಕೆಯಿದೆ.

ಅದರಲ್ಲಿ ಈಗಾಗಲೇ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಅಂದರೆ ನಿನ್ನೆಯ (ಮೇ 24)ವರೆಗೆ ಯೂರಿಯಾ-7588, ಡಿಎಪಿ-4752, ಎಂಓಪಿ-207, ಕಾಂಪ್ಲೇಕ್ಸ್-1632, ಎಸ್‌ಎಸ್‌ಪಿ-142 ಮೆ.ಟನ್ ಸೇರಿದಂತೆ ಒಟ್ಟು 14,321 ಮೆಟ್ರಿಕ ಟನ್ ರಸಗೊಬ್ಬರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ರೈತರ ಸಂಪರ್ಕಕ್ಕಾಗಿ ದೂರವಾಣಿ ಸಂಖ್ಯೆಗಳು

ಸಣ್ಣ, ಅತೀ ಸಣ್ಣ ರೈತರಿಗೆ ಅವರ ಹಿಡುವಳಿ ಅನ್ವಯ ಹಾಗೂ ದೊಡ್ಡ ರೈತರಿಗೆ ಗರಿಷ್ಠ 5 ಎಕರೆಗೆ ಸೀಮಿತವಾಗಿ ರಿಯಾಯತಿ ದರದಲ್ಲಿ ಪ್ರಮುಖ ಬೆಳೆಗಳ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ. ಬೀಜ ವಿತರಣೆ ಮಾಡಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗೆ ರೈತರು ರೈತ ಸಂಪರ್ಕ ಕೇಂದ್ರ ಧಾರವಾಡ (8277931302), ಗರಗ (8277931302), ಅಮ್ಮಿನಭಾವಿ (8277931310), ಅಳ್ಳಾವರ (8277931301), ಹುಬ್ಬಳ್ಳಿ (8277931324), ಛಬ್ಬಿ (8277931327), ಶಿರಗುಪ್ಪಿ (9380275695), ಕಲಘಟಗಿ (8660062215), ತಬದಕಹೊನ್ನಳ್ಳಿ (8660062215), ದುಮ್ಮವಾಡ (8277931341), ಕುಂದಗೋಳ (6277931357), ಸಂಶಿ (9902534595), ಮೊರಬ (6277931370), ಅಣ್ಣಿಗೇರಿ (8277931361) ಇಲ್ಲಿಗೆ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ತಿಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+