ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಸರ್ವರ್ ಸಮಸ್ಯೆ, ರೋಚಿಗೆದ್ದ ಜನ ಮಾಡಿದ್ದೇನು ಗೊತ್ತಾ?, ಇಲ್ಲಿದೆ ವಿವರ

ಧಾರವಾಡ, ಜೂನ್‌, 28: ಸರ್ವರ್ ದೋಷದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಬರುವ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಜನರನ್ನು ನಿಯಂತ್ರಿಸಲು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ.

ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸರ್ವರ್ ದೋಷ ಉಂಟಾಗಿದ್ದು, ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಇದರಿಂದ ಸಾಲುಗಟ್ಟಿ ನಿಂತ ಜನರು ಬೇಸತ್ತು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಜೋತೆ ವಾಗ್ವಾದಕ್ಕಿಳಿದ ಘಟನೆ ಮಂಗಳವಾರ ನಡೆದಿದೆ.

Server problem in Dharwad district hospital

ಸರ್ವರ್ ದೋಷದಿಂದ ಸಮಸ್ಯೆ ಆಗುತ್ತಿದೆ ಎಂದು ಹೇಳಿದರೂ ಒಪ್ಪದ ಜನರು ಜಿಲ್ಲಾಸ್ಪತ್ರೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿದೆ. ಅಲ್ಲದೆ ಇದೇ ವೇಳೆ ಪದೇ ಪದೇ ಈ ರೀತಿ ಸರ್ವರ್ ದೋಷದಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಅಲ್ಲಿದ್ದ ಆಸ್ಪತ್ರೆ ಸಿಬ್ಬಂದಿ ಸಹ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.

ಕುಡಿಯುವ ನೀರಿಲ್ಲದೆ ಪರದಾಟ

ಮತ್ತೊಂದೆಡೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿದೆ. ಅಂತದರಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ.

ಕಲಘಟಗಿ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿಲ್ಲದೆ ಮಕ್ಕಳು ಪ್ರತಿನಿತ್ಯ ಪರದಾಡುವಂತಹ ಪರಿಸ್ಥಿನಿ ನಿರ್ಮಾಣ ಆಗಿದೆ. ಕಲಘಟಗಿ ಪಟ್ಣದಲ್ಲಿರುವ ಶಾಸಕರ ಮಾದರಿ ಶಾಲೆ, ಸರ್ಕಾರಿ ಪ್ರೌಢಶಾಲೆ, ಬಾಲಕೀಯರ ಸರ್ಕಾರಿ ಪ್ರೌಢಶಾಲೆ ಮತ್ತು ಸಕಾರ್ರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 1 ಸಾವಿರ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಕಳೆದ ನಾಲ್ಕೈದು ತಿಂಗಳುಗಳಿಂದಲೂ ಇಲ್ಲಿನ ಶಾಲಾ ಮಕ್ಕಳಿಗೆ ಸಮರ್ಪಕವಾಗಿ ಕುಡಿಯಲು ನೀರಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇನ್ನು ಈ ಶಾಲೆಗಳಲ್ಲಿ ಸುಮಾರು ಎರಡರಿಂದ ಮೂರು ನೀರಿನ ಟ್ಯಾಂಕರ್‌ಗಳಿದ್ದು, ಪಟ್ಟಣ ಪಂಚಾಯಿತಿ ನಳದಲ್ಲಿನ ನೀರನ್ನು ಸಂಗ್ರಹಿಸಿ ಇಡಲಾಗುತ್ತದೆ. ಆದರೆ ಶಾಲಾ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದ್ದು, ಒಂದೆರೆಡು ದಿನಗಳಲ್ಲಿ ನೀರು ಖಾಲಿಯಾಗಿದೆ. ಪರಿಣಾಮ ಊಟ ಮಾಡಿದ ಮಕ್ಕಳಿಗೆ ಕುಡಿಯಲು ಸಹ ನೀರಿಲ್ಲದೆ ಮನೆಯಿಂದಲೇ ನೀರು ತರುವಂತಹ ಸ್ಥಿತಿ ಬಂದೊದಗಿದೆ.

ಒಂದೊಂದು ದಿನ ನೀರು ಬರದೆ ಶೌಚಾಲಯಕ್ಕೂ ನೀರಿಲ್ಲದೆ ಮಕ್ಕಳು ಪರದಾಡುವಂತಾಗಿದೆ. ಇನ್ನು ಶಾಸಕರ ಮಾದರಿ ಶಾಲಾ ಆವರಣದಲ್ಲಿ ಕೊಳವೆ ಭಾವಿಯನ್ನು ಕೊರೆಸಿ 6 ತಿಂಗಳು ಕಳೆದರೂ ಅದಕ್ಕೆ ವಿದ್ಯುತ್ ಹಾಗೂ ಪೈಪ್‍ಲೈನ್ ಸಂಪರ್ಕವನ್ನೂ ಕಲ್ಪಿಸಿಲ್ಲ. ಈ ಕನೆಕ್ಷನ್ ಕೊಟ್ಟರೆ ತಕ್ಕ ಮಟ್ಟಿಗೆ ನೀರಿನ ಸಮಸ್ಯೆ ಬಗೆಹರಿಸಿದಂತಾಗುತ್ತದೆ ಎಂದು ಪೋಷಕರು ಹಾಗೂ ಶಾಲಾ ಮಕ್ಕಳು ಅಳಲು ತೋಡಿಕೊಂಡಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಮಕ್ಕಳಿಗೆ ನೀರಿನ ಭಾಗ್ಯ ಒದಗಿಸಿಬೇಕಾಗಿದೆ. ಅಷ್ಟೇ ಅಲ್ಲದೆ ಕಲಘಟಗಿ ಕ್ಷೇತ್ರದ ಸಚಿವರಾದ ಸಂತೋಷ್‌ ಲಾಡ್ ಅವರು ಈ ಮಕ್ಕಳ ಭವಿಷ್ಯವನ್ನು ಗಮನಿಸುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+