KMF: ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಶಂಕರ ಮುಗದ ಆಯ್ಕೆ
ಹುಬ್ಬಳ್ಳಿ, ಜುಲೈ 12: ಉತ್ತರ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆ ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಬೆಂಬಲಿತ ಶಂಕರ ಮುಗದ ಅವರು 8 ಮತ ಪಡೆದುಕೊಂಡು ಅಧ್ಯಕ್ಷರಾಗಿ ಪುನರ್ ಆಯ್ಕೆ ಆಗಿದ್ದಾರೆ.
ನಾಮನಿರ್ದೇಶಿತ ಸದಸ್ಯರಾಗಿ ಕಾಂಗ್ರೆಸ್ ಬೆಂಬಲಿತ ಶಿವಲೀಲಾ ಕುಲಕರ್ಣಿ ಕೊನೆ ಕ್ಷಣದಲ್ಲಿ ಸ್ಪರ್ಧಿಸಿ ಕುತೂಹಲ ಕೆರಳಿಸಿದ್ದರಾದರು 6 ಮತ ಪಡೆದು ಪರಾಭವಗೊಳ್ಳಬೇಕಾಯಿತು.

ಧಾರವಾಡ ಕೆಎಂಎಫ್ ಅಧ್ಯಕ್ಷರ ಚುನಾವಣೆ ನಿರ್ದೇಶಕರಾದ ಶಂಕರ ಮುಗದ, ಗೀತಾ ಮರಲಿಂಗಣ್ಣವರ ಹಾಗೂ ಸರ್ಕಾರದಿಂದ ನಾಮ ನಿರ್ದೇಶಿತರಾದ ಶಿವಲೀಲಾ ಕುಲಕರ್ಣಿ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶ್‌ಚಂದ್ರ ಹೆಗಡೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಂಕರ ಮುಗದ ನಾಮಪತ್ರ ಸಲ್ಲಿಸುವ ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಅಮೃತ ದೇಸಾಯಿ, ಮುಖಂಡರಾದ ಮಹೇಶ ಯಲಿಗಾರ, ಸುರೇಶಗೌಡ ಪಾಟೀಲ, ಶಕ್ತಿ ಹಿರೇಮಠ, ರುದ್ರಪ್ಪ ಅರಿವಾಳ, ಶಿವು ಬೆಳಾರದ ಇತರರು ಜೊತೆಗಿದ್ದರು. ಶಿವಲೀಲಾ ಕುಲಕರ್ಣಿ ಜೊತೆಗೆ ಈಶ್ವರ ಶಿವಳ್ಳಿ, ಅರವಿಂದ ಏಗನಗೌಡರ, ಚನಬಸಪ್ಪ ಮಟ್ಟಿ, ಹನಮಂತಪ್ಪ ಕೊರವರ ಉಪಸ್ಥಿತರಿದ್ದರು.
ಬಣ್ಣ ಹಚ್ಚಿ, ಪಟಾಕಿ ಸಿಡಿಸಿ ಸಂಭ್ರಮ
ಚುನಾವಣಾ ಅಧಿಕಾರಿಯಾಗಿ ಹುಡಾ ಆಯುಕ್ತ ಡಾ.ಸಂತೋಷ್ ಬಿರಾದಾರ ಕಾರ್ಯ ನಿರ್ವಹಿಸಿದರು. ವ್ಯವಸ್ಥಾಪಕ ನಿರ್ದೇಶಕ ಡಾ.ವೀರೇಂದ್ರ ತರಲಿ ಇತರರು ಉಪಸ್ಥಿತರಿದ್ದರು. ಫಲಿತಾಂಶ ಘೋಷಣೆ ಆಗುತ್ತಿದ್ದಂತೆಯೇ ಬೆಂಬಲಿಗರು ಬಣ್ಣ ಎರಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಶಿವಲೀಲಾ ಕುಲಕರ್ಣಿ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ನಿರ್ದೇಶಕ ಶಂಕರ ಮುಗದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶಿವಲೀಲಾ ಕುಲಕರ್ಣಿ ಅವರು ಸ್ವತಃ ಡೇರಿ ಹೊಂದಿದ್ದು, ದೊಡ್ಡ ಪ್ರಮಾಣದ ಹೈನುಗಾರಿಕೆ ನಡೆಸುತ್ತಿದ್ದಾರೆ. ಕೆಎಂಎಫ್ ಗೆ ನಾಮನಿರ್ದೇಶನ ಆಗುವುದರ ಹಿಂದೆ ಸ್ವಹಿತಾಸಕ್ತಿ ಅಡಗಿದೆ. ಹೀಗಾಗಿ ನಾಮನಿರ್ದೇಶನದಲ್ಲಿ ಕೆಎಂಎಫ್ ನಿಯಮಾವಳಿಯ ಉಲ್ಲಂಘನೆ ಆಗಲಿದೆ. ಆದ್ದರಿಂದ ಅವರ ನಾಮನಿರ್ದೇಶನ ಸರಿಯಲ್ಲ ಎಂದು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು.
ಕಾಂಗ್ರೆಸ್ ಯತ್ನ ವಿಫಲ
ಈ ಕಾರಣದಿಂದ ಕೆಎಂಎಫ್ ಅಧ್ಯಕ್ಷ ಗಾದಿಗಾಗಿ ನಡೆದ ಚುನಾವಣೆ ಮತ್ತಷ್ಟು ಕೌತುಕ ಮೂಡಿಸಿತು. ಮಾಜಿ ಶಾಸಕ ಅಮೃತ ದೇಸಾಯಿ ಅವರ ಆಪ್ತ ಶಂಕರ ಮುಗದ ಅವರಿಗೆ ಅಧ್ಯಕ್ಷ ಗಾದಿ ಸಿಗದಂತೆ ಸರ್ವ ಪ್ರಯತ್ನವನ್ನು ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದವರು ನಡೆಸಿದ್ದು ವಿಫಲವಾಯಿತು.
ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಕೆಎಂಎಫ್ ನಿರ್ದೇಶಕರ ಸ್ಥಾನಕ್ಕೆ ಕಳೆದ ಜೂ.30 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಮೇಲುಗೈ ಸಾಧಿಸಿದ್ದರು.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕ
9 ಸ್ಥಾನದ ಪೈಕಿ ಸುಮಾರು ಏಳು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿದ್ದರೆ, ಇಬ್ಬರು ಕಾಂಗ್ರೆಸ್ ಬೆಂಬಲಿತರಿದ್ದಾರೆ (ನೀಲಕಂಠ ಅಸೂಟಿ, ಹನಮಂತಗೌಡ ಹಿರೇಗೌಡರ). ಆದರೆ, ಕಳೆದ ಎರಡು ದಿನಗಳ ಹಿಂದೆ ಮಾಜಿ ಸಚಿವ, ಪ್ರಭಾವಿ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಸರಕಾರದಿಂದ ನಾಮನಿ ರ್ದೇಶನಗೊಳಿಸಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣಾಗಿತ್ತು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications