ಧಾರವಾಡದ ಹುತಾತ್ಮ ಯೋಧ ಮಂಜುನಾಥ ಕುಟುಂಬಕ್ಕೆ 25 ಲಕ್ಷ ರು

ಧಾರವಾಡ, ನವೆಂಬರ್ 28: ಮಹಾರಾಷ್ಟ್ರದಲ್ಲಿ ನಕ್ಸಲರ ಗುಂಡಿನ ದಾಳಿಗೆ ಹುತಾತ್ಮರಾಗಿದ್ದ ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಯೋಧ ಮಂಜುನಾಥ ಜಕ್ಕಣ್ಣವರ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.

ಮೃತ ಯೋಧನ ಕುಟುಂಬಕ್ಕೆ ರಾಜ್ಯ ಸರ್ಕಾರರಿಂದ 25 ಲಕ್ಷ ರು. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವಿಟ್ಟರ್ ನಲ್ಲಿ ಘೋಷಿಸಿದ್ದಾರೆ.

Siddaramaiah announces compensation to Dharwada jawan Manjunath's family

ನವೆಂಬರ್ 27ರಂದು ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧಾನೊರಾ ಹಳ್ಳಿಯಲ್ಲಿ ನಕ್ಸಲರು ನಡೆಸಿದ ಫೈರಿಂಗ್ ನಲ್ಲಿ ಮಂಜುನಾಥ ಜಕ್ಕಣ್ಣವರ್ (31) ಹುತಾತ್ಮರಾಗಿದ್ದರು. ಇಂದು ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮವಾದ ಮನಗುಂಡಿಗೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮನಗುಂಡಿ ಗ್ರಾಮದಲ್ಲಿ ಹುತಾತ್ಮ ಯೋಧ ಮಂಜುನಾಥ ಜಕ್ಕಣ್ಣವರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅಂತಿಮ ದರ್ಶನ ಪಡೆದುಕೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+