ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರಿಗೆ ಐಐಟಿ : ಇಂದು ಹುಬ್ಬಳ್ಳಿ-ಧಾರವಾಡ ಬಂದ್

|
Google Oneindia Kannada News

ಧಾರವಾಡ, ಸೆಪ್ಟೆಂಬರ್ 23 : ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಯನ್ನು ರಾಯಚೂರಿಗೆ ಸ್ಥಳಾಂತರ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದು ಹುಬ್ಬಳ್ಳಿ-ಧಾರವಾಡ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ವಿವಿಧ ಸಂಘಟನೆಗಳು ಇಂದು ಅವಳಿ ನಗರ ಬಂದ್‌ಗೆ ಕರೆ ನೀಡಿವೆ.

ಸೆ.23ರ ಬುಧವಾರ ಕರೆ ನೀಡಿರುವ ಹುಬ್ಬಳ್ಳಿ ಧಾರವಾಡ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬೆಳಗ್ಗೆಯೇ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. [ಸೆ.23ರಂದು ಅವಳಿ ನಗರ ಬಂದ್]

dharwad

ವಿವಿಧ ಸಂಘಟನೆಗಳ ಕಾರ್ಯಕರ್ತರು ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಗಡಿಗಳನ್ನು ಬಂದ್ ಮಾಡಿಸಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಅವಳಿ ನಗರದಲ್ಲಿ ಹೋಟೆಲ್‌ಗಳು ಬಂದ್ ಆಗಿವೆ. [ಸಿಎಂ ಬರೆದ ಪತ್ರದಲ್ಲೇನಿದೆ?]

ಸಿಎಂ ಪತ್ರದ ಬಗ್ಗೆ ಆಕ್ರೋಶ : ಕರ್ನಾಟಕ ಸರ್ಕಾರ ಹುಬ್ಬಳ್ಳಿ-ಧಾರವಾಡ, ರಾಯಚೂರು, ಮೈಸೂರು ಜಿಲ್ಲೆಗಳಲ್ಲಿ ಐಐಟಿ ಸ್ಥಾಪನೆ ಮಾಡಬಹುದು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿ ಆರ್‌. ಸುಬ್ರಮಣ್ಯಂ ನೇತೃತ್ವದ ಸಮಿತಿ ಧಾರವಾಡದಲ್ಲಿ ಐಐಟಿ ಸ್ಥಾಪಿಸುವಂತೆ ಶಿಫಾರಸು ಮಾಡಿತ್ತು. ಇದಕ್ಕೆ ಕೆಲವು ದಿನಗಳ ಹಿಂದೆ ಒಪ್ಪಿಗೆ ಸಿಕ್ಕಿತ್ತು.

ಆದರೆ, ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರ ಬರೆದಿದ್ದು, ಧಾರವಾಡದಲ್ಲಿ ಐಐಟಿ ಸ್ಥಾಪನೆ ಮಾಡುವ ನಿರ್ಧಾರದ ಕುರೊತು ಪುನರ್ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ. ರಾಯಚೂರಿನಲ್ಲಿ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಚಿಂತನೆ ನಡೆಸಿ ಎಂದು ಕೋರಿದ್ದಾರೆ.

English summary
Karnataka Chief Minister Siddaramaiah has appealed the central government to reconsider the decision on locate the proposed Indian Institute of Technology (IIT) at Raichur. IIT announced for Dharwad. So, Various organizations called for Hubli-Dharwad bandh today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X