ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ : ಎಸ್ಎಸ್‌ಎಲ್‌ಸಿಯಲ್ಲಿ ಮೂವರು ವಿದ್ಯಾರ್ಥಿನಿಯರ ಸಾಧನೆ

|
Google Oneindia Kannada News

ಧಾರವಾಡ, ಏಪ್ರಿಲ್ 30 : 2019ನೇ ಸಾಲಿನ ಎಸ್‌ಎಸ್ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಧಾರವಾಡ ಜಿಲ್ಲೆಯು ಶೇ 75.41ರಷ್ಟು ಫಲಿತಾಂಶವನ್ನು ಪಡೆದಿದೆ.

ಧಾರವಾಡದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಜಾನನ ಮನ್ನಿಕೇರಿ ಅವರು ಹೂಗುಚ್ಛ ನೀಡಿ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.

SSLC ಫಲಿತಾಂಶ:ದಕ್ಷಿಣ ಕನ್ನಡದ ನಾಲ್ವರು ವಿದ್ಯಾರ್ಥಿನಿಯರಿಗೆ 624 ಅಂಕ SSLC ಫಲಿತಾಂಶ:ದಕ್ಷಿಣ ಕನ್ನಡದ ನಾಲ್ವರು ವಿದ್ಯಾರ್ಥಿನಿಯರಿಗೆ 624 ಅಂಕ

ಜೆ.ಎಸ್.ಎಸ್. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪರಿಣಿತಾ ಹಿರೇಮಠ 623 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.

SSLC result 75 percent result for Dharwad district

ಪ್ರೆಜೆಂಟೇಶನ್ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭವ್ಯಾ ಶಿವಾನಂದ 622 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾರೆ.

ಅಂಕಿ-ಅಂಶಗಳ ಸಮೇತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಂಪೂರ್ಣ ಮಾಹಿತಿ ಅಂಕಿ-ಅಂಶಗಳ ಸಮೇತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಂಪೂರ್ಣ ಮಾಹಿತಿ

ಬಾಸೆಲ್ ಮಿಶನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶ್ರಾವಣಿ ಹಿರೇಮಠ 621 ಅಂಕಗಳನ್ನು ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದು ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದಾರೆ.

English summary
The Karnataka Secondary Education Examination Board announced SSLC result 2019 on April 30, 2019. Dharwad district gets 75.41 percent.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X