ಭಾನುವಾರ ಧಾರವಾಡದಲ್ಲಿ ಚಿತ್ರ ತಾರೆಯರ ಕಲರವ
ಧಾರವಾಡ, ಫೆ. 9 : ಸಿನಿಮಾ ತಾರೆಯರ ಸಂಗಮಕ್ಕೆ ಧಾರವಾಡದ ಕರ್ನಾಟಕ ಕಾಲೇಜು ಮೈದಾನ ಸಿದ್ಧವಾಗಿ ನಿಂತಿದೆ. ಫೆ.9ರ ಭಾನುವಾರ ಸಂಜೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 2010-11, 2011-12ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕ್ಷಣಗಣನೆ ಆರಂಭವಾಗಿದೆ ಎಂದು ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಹೇಳಿದ್ದಾರೆ. ಫೆ.9ರ ಸಂಜೆ 6 ಗಂಟೆಗೆ ಸಮಾರಂಭ ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.

ಕೆಸಿಡಿ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2010-11, 2011-12ನೇ ಸಾಲಿನ 80 ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ವಿಶುಕುಮಾರ್ ಹೇಳಿದರು. ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಉಮಾಶ್ರೀ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ. ಗಂಗರಾಜು ಮುಂತಾದವರು ಪಾಲ್ಗೊಳ್ಳಲಿದ್ದಾರೆ. [ಪ್ರಶಸ್ತಿ ಪಟ್ಟಿ]
ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ ಕರ್ನಾಟಕ ಕಾಲೇಜಿನ ಪ್ರಧಾನ ಕಟ್ಟಡ ಮಾದರಿಯ 120x60 ಅಡಿ ವಿಸ್ತೀರ್ಣದ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಪ್ರಶಸ್ತಿ ಪ್ರದಾನ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಉತ್ತರ ಕರ್ನಾಟಕದ ಭಾಗದ ಸಂಸ್ಕೃತಿ ಬಿಂಬಿಸುವ ಹಾಡುಗಳು, ವರಕವಿ ದ.ರಾ.ಬೇಂದ್ರೆ ಹಾಡುಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. 20 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಎಲ್ಸಿಡಿ ಪರದೆಗಳನ್ನು ಅಳವಡಿಸಲಾಗಿದೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications