• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಹಶೀಲ್ದಾರ್ ಕಚೇರಿಗೆ ಇ-ಮೇಲ್, ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಿ

|

ಧಾರವಾಡ, ಜುಲೈ 10 : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಲೇ ಇದೆ. ಜನರು ಮತ್ತು ಕಚೇರಿ ಸಿಬ್ಬಂದಿಗಳ ಆರೋಗ್ಯ ಕಾಪಾಡಲು ಕಂದಾಯ ಇಲಾಖೆ ಹಲವು ಸೇವೆಗಳನ್ನು ಇ-ಮೇಲ್ ಮತ್ತು ವಾಟ್ಸಪ್ ಮೂಲಕ ನೀಡಲಿದೆ.

ವಿವಿಧ ಸೇವೆಗಳನ್ನು ಪಡೆಯಲು ಜನರು ಪದೇ-ಪದೇ ಕಛೇರಿಗೆ ಅರ್ಜಿ ಸಲ್ಲಿಸಲು ಆಗಮಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು ಮತ್ತು ಸಿಬ್ಬಂದಿಗಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗಬಹುದು. ಆದ್ದರಿಂದ, ವಾಟ್ಸಪ್, ಇ-ಮೇಲ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಧಾರವಾಡ: ಖಾಸಗಿ ಶಾಲೆಯ 8 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು

ಧಾರವಾಡದ ತಹಶೀಲ್ದಾರ್ ಕಛೇರಿಗೆ ವಿವಿಧ ಕೆಲಸಗಳಿಗಾಗಿ ಅರ್ಜಿ ಸಲ್ಲಿಸುವವರು tahasildardwd@gmail.com ವಿಳಾಸಕ್ಕೆ ಕಳಿಸಬಹುದು. ವಾಟ್ಸ್‌ ಅಪ್ ಮೂಲಕ ಅರ್ಜಿ ಸಲ್ಲಿಸುವವರು 7619471093 ನಂಬರ್‌ಗೆ ಅರ್ಜಿಯ ಫೋಟೋ ತೆಗೆದು ಕಳಿಸಬೇಕು.

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಬಗ್ಗೆ ಮಹತ್ವ ನಿರ್ಣಯಗಳು

ಕಚೇರಿಯಿಂದ ಸಿಗುವ ಸಾಮಾಜಿಕ ಭದ್ರತೆ ಯೋಜನೆ ಹಾಗೂ ವಿವಿಧ ಪ್ರಮಾಣ ಪತ್ರಗಳಿಗಾಗಿ ಗ್ರಾಮ ಪಂಚಾಯತಿಯಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಆನ್‍ಲೈನ್ ಕೇಂದ್ರದಲ್ಲಿ ಪಹಣಿ ಪತ್ರಿಕೆಗಳನ್ನು ಪಡೆಯಬಹುದು ಎಂದು ತಿಳಿಸಲಾಗಿದೆ. ಈ ಕಛೇರಿಯ ದೂರವಾಣಿ ಸಂಖ್ಯೆ 0836-2233822ಗೆ ಜನರು ಕರೆ ಮಾಡಿ ತಮಗೆ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಜೂನ್ ತಿಂಗಳ ಕೊರೊನಾ ಪ್ರಕರಣ: ಈ ಪಂಚರಾಜ್ಯಗಳದ್ದೇ ಸಿಂಹಪಾಲು

ಧಾರವಾಡ ಜಿಲ್ಲೆಯಲ್ಲಿ ಗುರುವಾರ 75 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 832 ಆಗಿದೆ.

English summary
Submit application to tahsildar office from e mail and whatsapp. In the time of COVID - 19 people can submit application for various service without visiting office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X