ಎಂ.ಎಂ.ಕಲಬುರ್ಗಿ ಹತ್ಯೆ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

ಧಾರವಾಡ, ಫೆಬ್ರವರಿ 26 : ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸಬೇಕು. ಧಾರವಾಡದಲ್ಲಿರುವ ಕರ್ನಾಟಕ ಹೈಕೋರ್ಟ್ ಸಂಚಾರಿ ಪೀಠ ಅವರ ಮೇಲ್ವಿಚಾರಣೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಮಂಗಳವಾರ ನ್ಯಾಯಮೂರ್ತಿ ರೋಹಿಂಗ್ಟನ್ ನಾರಿಮನ್ ನೇತೃತ್ವದ ಪೀಠ ಈ ಕುರಿತು ಆದೇಶ ನೀಡಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನೂ ನಡಸಬೇಕು ಎಂದು ಹೇಳಿದೆ.

ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಮಾದರಿಯಲ್ಲಿಯೇ ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ನಡೆದಿದೆ. ಆದ್ದರಿಂದ, ಎಸ್‌ಐಟಿ ಎರಡೂ ಹತ್ಯೆಯ ತನಿಖೆಯನ್ನು ನಡೆಸಲಿ, ಹೈಕೋರ್ಟ್ ಮೇಲ್ವಿಚಾರಣೆ ನಡೆಸಲಿ ಎಂದು ಸುಪ್ರೀಂಕೋರ್ಟ್ ಹೇಳಿತು.

MM Kalburgi

ಕರ್ನಾಟಕ ರಾಜ್ಯ ಸರ್ಕಾರ ಪರವಾಗಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ದೇವದತ್ತ ಕಾಮತ್ ಅವರು ಎಸ್‌ಐಟಿಯೇ ತನಿಖೆ ನಡೆಸಲಿ ಎಂದು ಮನವಿ ಸಲ್ಲಿಸಿದರು. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಆದೇಶವನ್ನು ನೀಡಿದೆ.

ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ಪ್ರಗತಿ ಕಂಡಿಲ್ಲ ಎಂದು ಎಂ.ಎಂ.ಕಲಬುರ್ಗಿ ಅವರ ಪತ್ನಿ ಉಮಾ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.

2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ನಾಲ್ಕು ವರ್ಷಗಳು ಕಳೆಯುತ್ತಾ ಬಂದರೂ ಹತ್ಯೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+