ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯೋಗೇಶ್ ಗೌಡ ಹತ್ಯೆ; ಸಿಬಿಐ ತನಿಖೆಗಿದ್ದ ತಡೆಯಾಜ್ಞೆ ತೆರವು

|
Google Oneindia Kannada News

ಧಾರವಾಡ, ಫೆಬ್ರವರಿ 20 : ಧಾರವಾಡದ ಬಿಜೆಪಿ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದೆ. 2017ರ ಜೂನ್ 15ರಂದು ಯೋಗೇಶ್ ಗೌಡ ಹತ್ಯೆ ನಡೆದಿತ್ತು.

ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಈ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಡೆಯಾಜ್ಞೆ ತೆರವು ಮಾಡಿದೆ. ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್‌ಗೆ ಸಂಕಷ್ಟ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್‌ಗೆ ಸಂಕಷ್ಟ

ಕರ್ನಾಟಕ ಸರ್ಕಾರ 2019ರ ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಸಿಬಿಐ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು. ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಶಿವಪ್ಪ ಸಿಬಿಐ ತನಿಖೆ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಯೋಗೇಶ್ ಗೌಡ ಕೊಲೆ ಪ್ರಕರಣ: ಆರು ಜನರ ವಿರುದ್ಧ ಸಿಬಿಐ ಎಫ್‌ಐಆರ್‌ಯೋಗೇಶ್ ಗೌಡ ಕೊಲೆ ಪ್ರಕರಣ: ಆರು ಜನರ ವಿರುದ್ಧ ಸಿಬಿಐ ಎಫ್‌ಐಆರ್‌

Supreme Court Stay For Yogesh Gowda Murder Case CBI Probe

ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿತ್ತು. ಇದನ್ನು ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು.

ನೈಋತ್ಯ ರೈಲ್ವೆ ಇಂಜಿನಿಯರ್ ವಿರುದ್ಧ ಸಿಬಿಐ ಎಫ್‌ಐಆರ್ ನೈಋತ್ಯ ರೈಲ್ವೆ ಇಂಜಿನಿಯರ್ ವಿರುದ್ಧ ಸಿಬಿಐ ಎಫ್‌ಐಆರ್

2017ರ ಜೂನ್ 15ರಂದು ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಬೆಳಗ್ಗೆ ಜಿಮ್‌ಗೆ ಆಗಮಿಸಿದ್ದ ಯೋಗೇಶ್ ಗೌಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತವಲಯದಲ್ಲಿ ಗುರುತಿಸಿಕೊಂಡವರು ಹತ್ಯೆ ಮಾಡಿದ್ದಾರೆ ಎಂಬುದು ಚರ್ಚೆಗೆ ಕಾರಣವಾಗಿದೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ ಶಿವಪ್ಪ ಮುತ್ತಗಿ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ಬಂಧಿಸಲಾಗಿದೆ.

English summary
The Supreme Court lifted stay of Karnataka high court Dharwad bench order on CBI investigation into the Yogesh Gowda murder case. BJP leader and zilla panchayat member Yogesh Gowda murdered on 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X