• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ಲಸಿಕೆ ಪಡೆಯಿರಿ: 25 ಸಾವಿರ ಮಕ್ಕಳಿಂದ ಪೋಷಕರಿಗೆ ಪತ್ರ

|

ಧಾರವಾಡ, ಮಾರ್ಚ್ 17; ಕೋವಿಡ್ ನಿಯಂತ್ರಣಕ್ಕೆ ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆಯನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಧಾರವಾಡ ಜಿಲ್ಲೆಯ ಸುಮಾರು 400ಕ್ಕೂ ಹೆಚ್ಚು ಪ್ರೌಢಶಾಲೆಗಳ 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಲಸಿಕೆ ಪಡೆಯಿರಿ ಎಂದು ಪಾಲಕರಿಗೆ ಪತ್ರ ಬರೆದಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಪರಿಕಲ್ಪನೆಯಂತೆ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ್ ಹಂಚಾಟೆ ಈ ಕುರಿತು ಮಾಹಿತಿ ನೀಡಿದ್ದಾರೆ.

ವೈರಲ್ ವಿಡಿಯೋ; ಕೋವಿಡ್ ಲಸಿಕೆ ಪಡೆಯುವಂತೆ ಅಜ್ಜನ ಡಂಗುರ

ಜಿಲ್ಲೆಯ ಸರ್ಕಾರಿ,ಅನುದಾನಿತ ಹಾಗೂ ಅನುದಾನರಹಿತ ಸೇರಿ ಸುಮಾರು 400 ಪ್ರೌಢಶಾಲೆಗಳ 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮಂಗಳವಾರ ಪತ್ರವನ್ನು ಬರೆದಿದ್ದಾರೆ. ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಇದಕ್ಕೆ ಮಾರ್ಗದರ್ಶನ ಮಾಡಿದ್ದಾರೆ.

ಭಾರತದಲ್ಲಿ ಒಂದೇ ದಿನ 18.63 ಲಕ್ಷ ಜನರಿಗೆ ಕೊರೊನಾ ಲಸಿಕೆ

ಪತ್ರದಲ್ಲಿ ಏನಿದೆ?; ಲಸಿಕೆಯು ಕೋವಿಡ್ ವೈರಾಣುವಿನಿಂದ ರಕ್ಷಿಸಿಕೊಳ್ಳಲು ಸಹಕಾರಿ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಆಧಾರ್ ಕಾರ್ಡ್‌ನೊಂದಿಗೆ, ಅಧಿಕ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಪಾರ್ಶ್ವವಾಯು ಮತ್ತಿತರ ಕೊ-ಮಾರ್ಬಿಡಿಟಿಗಳಿಂದ ಬಳಲುತ್ತಿರುವ 45 ರಿಂದ 59 ವರ್ಷ ವಯೋಮಾನದ ವ್ಯಕ್ತಿಗಳು ವೈದ್ಯರ ಔಷಧ ಶಿಫಾರಸ್ಸು ಚೀಟಿ ಮತ್ತು ಆಧಾರ್ ಕಾರ್ಡ್‌ ಜೊತೆಗೆ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದರೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸಹಕಾರ ನೀಡುತ್ತಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಎಂ ಯಡಿಯೂರಪ್ಪ

ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ, ಅನಿವಾರ್ಯವಾಗಿ ಹೊರಗೆ ಬರುವ ಸಂದರ್ಭಗಳಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ , ಸುರಕ್ಷಿತ ದೈಹಿಕ ಅಂತರವನ್ನು ಕಾಪಾಡಿಕೊಳ್ಳಿ ಎಂದು ಮಕ್ಕಳು ಪತ್ರದಲ್ಲಿ ತಿಳಿಸಿದ್ದಾರೆ.

   ನಿಮ್ ಆಟಕ್ಕೆ ಫುಲ್ ಸ್ಟಾಪ್ ಇಡ್ತಾರೆ ಸುರೇಶ್ ಕುಮಾರ್ | Oneindia Kannada

   ಮಂಗಳವಾರದ ವರದಿಯಂತೆ ಧಾರವಾಡ ಜಿಲ್ಲೆಯಲ್ಲಿ 7 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 22,515. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 99.

   English summary
   Dharwad district around 400 school 25 thousand students wrote letter to parents and requested to take COVID vaccine.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X