ಧಾರವಾಡ; ಟಾಟಾ ಮಾರ್ಕೊಪೋಲೋ ಘಟಕ ಒಂದು ವಾರ ಬಂದ್

ಧಾರವಾಡ, ಜುಲೈ 26 : ಧಾರವಾಡ ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಇರುವ ಟಾಟಾ ಮಾರ್ಕೊಪೊಲೊ ಘಟಕ ಒಂದು ವಾರ ಬಂದ್ ಆಗಲಿದೆ. ಜುಲೈ 26ರಿಂದ ಆಗಸ್ಟ್ 3ರ ತನಕ ಕಾರ್ಖಾನೆ ಮುಚ್ಚಿರಲಿದೆ ಎಂದು ಆಡಳಿತ ಮಂಡಳಿ ಹೇಳಿದೆ.

ಕಂಪನಿಯನ್ನು ಆಗಸ್ಟ್ 3ರ ತನಕ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಶನಿವಾರ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರೊಂದಿಗೆ ಕಂಪನಿಯ ಸಿಇಓ ಸಭೆ ನಡೆಸಿ, ತೀರ್ಮಾನ ಕೈಗೊಂಡಿದ್ದಾರೆ.

ಘಟಕದ ಸಿಬ್ಬಂದಿಗೆ ಕೋವಿಡ್ - 19 ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್, ತಪಾಸಣೆ ನಿರಂತರವಾಗಿ ನಡೆಸಲಾಗುತ್ತಿದೆ. ಕಾರ್ಮಿಕರು, ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ 8 ದಿನಗಳ ಕಾಲ ಘಟಕ ಬಂದ್ ಆಗಿರಲಿದೆ.

Tata Marcopolo Unit In Dharwad To Close for One Week

ಘಟಕ ಬಂದ್ ಆಗಿರುವ ಅವಧಿಯಲ್ಲಿ ಕೈಗಾರಿಕಾ ಘಟಕದ ಚಟುವಟಿಕೆಗಳನ್ನು ಸಂಪೂರ್ಣವಾಗಿವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಕಾರ್ಖಾನೆ ಆಡಳಿತ ಮಂಡಳಿಯು ಸ್ವಯಂ ಪ್ರೇರಿತವಾಗಿ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಲಾಗಿದೆ.

ಶನಿವಾರ ಧಾರವಾಡ ಜಿಲ್ಲೆಯಲ್ಲಿ 183 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3025. ಒಟ್ಟು ಮೃತಪಟ್ಟವರ ಸಂಖ್ಯೆ 89.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+