Santosh Lad: ಸಚಿವ ಬೆಂಕಿ ಕುಂಡ ಹೊತ್ತು ನೃತ್ಯ, ಕಳೆಗಟ್ಟಿದ ಶಿಕ್ಷಕರ ದಿನಾಚರಣೆ
ಧಾರವಾಡ, ಸೆಪ್ಟಂಬರ್ 06: ಸದಾ ತಮ್ಮ ಮಾತುಗಾರಿಕೆಯಿಂದ ವಿಭಿನ್ನವಾಗಿ ಗುರತಿಸಿಕೊಳ್ಳುವ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಶುಕ್ರವಾರ ಸಂಜೆ ಧಾರವಾಡದಲ್ಲಿ ಜರುಗಿದ ಜಿಲ್ಲಾಮಟ್ಟದ 'ಶಿಕ್ಷಕ ದಿನಾಚರಣೆ'ಯಲ್ಲಿ ಶಿಕ್ಷಕರು ಪ್ರಸ್ತುತಪಡಿಸಿದ ಜಾನಪದ ನೃತ್ಯದಲ್ಲಿ 'ಬೆಂಕಿ ಕುಂಡ'ವನ್ನು ತಲೆ ಮೇಲೆ ಹೊತ್ತು ನೃತ್ಯ ಮಾಡಿದರು. ಈ ಮೂಲಕ ಶಿಕ್ಷಕರ ಜೊತೆಗೆ ಸಂಭ್ರಮದ ಕ್ಷಣಗಳಲ್ಲಿ ಹೆಜ್ಜೆ ಹಾಕಿ ಜೊತೆಯಾದರು.
ಸಚಿವ ಸಂತೋಷ ಲಾಡ್ ಅವರು, ಶುಕ್ರವಾರ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮತ್ತು ವಿಶಿಷ್ಟವಾದ ಜೋಗುತಿ ಜಾನಪದ ನೃತ್ಯಕ್ಕೆ ಕಲಾವಿದ ಶಿಕ್ಷಕ, ಶಿಕ್ಷಿಯರ ಜೊತೆಗೆ ಬೆಂಕಿ ಕುಂಡವನ್ನು ತಲೆ ಮೇಲೆ ಹೊತ್ತು ನೃತ್ಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಶಿಕ್ಷಕ ಕಲಾವಿದರ ಸಿರಿಗಂಧ ಜಾನಪದ ಕಲಾಬಳಗದ ಪ್ರಕಾಶ ಕಂಬಳಿ ಮತ್ತು ಜಯಲಕ್ಷ್ಮಿ ಎಚ್. ಅವರು ತಮ್ಮ ಸಹ ಕಲಾ ಶಿಕ್ಷಕರೊಂದಿಗೆ ಜಾನಪದ ನೃತ್ಯ ಪ್ರದರ್ಶಿಸಿ, ಪ್ರೇಕ್ಷಕರ ಮನಸೆಳೆದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
ಕರ್ನಾಟಕ ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದೆ. ಅಂದು ಎಲ್ಲರೂ ಸೇರಿ ಸಂಭ್ರಮಿಸೋಣ. ಪ್ರತಿ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

31 ಜಿಲ್ಲೆಗಳಲ್ಲಿ ಮಾನವ ಸರಪಳಿ
ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವ ಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಸೂಚಿಸಿದರು.
ಜಿಲ್ಲೆಯ 51 ಕಿ.ಮೀ ಮಾರ್ಗದಲ್ಲಿ ಮಾನವಸರಪಳಿ ನಿರ್ಮಿಸಲಾಗುತ್ತಿದೆ. ಪ್ರತಿ ಕಿ.ಮೀರ್ ನೇಮಿಸುವ ನೊಡಲ್ ಅಧಿಕಾರಿ ಯೋಜಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ವಿವರಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications