ಧಾರವಾಡದಲ್ಲಿ ಟೆಂಪೋ-ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರ ಸಾವು
ಧಾರವಾಡ, ಜನವರಿ.14: ಟೆಂಪೋ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲಿಯೇ ನಾಲ್ವರು ಪ್ರಾಣ ಬಿಟ್ಟಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.
ಈರಮ್ಮ ಎಂಬುವವರ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲೆ ಗಂಗಾವತಿ ಮೂಲದ ರುದ್ರಪ್ಪ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಟೆಂಪೋ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು, ಮೃತರನ್ನು ಕೊಪ್ಪಳ ಭಾಗ್ಯನಗರದ ನಿವಾಸಿಗಳಾದ ರುದ್ರಪ್ಪ (65), ಮಂಜುನಾಥ್(40), ಈರಮ್ಮ(62) ಹಾಗೂ ಎರಡು ವರ್ಷದ ಪುಟ್ಟ ಕಂದ ಶಿವರಾಜ್ ಎಂದು ಗುರುತಿಸಲಾಗಿದೆ.

ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ:
ಕಾರು ಹಾಗೂ ಟೆಂಪೋ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಮತಾ ಹಾಗೂ ಸಾನ್ವಿ ಎಂಬ ಗಾಯಾಳುಗಳನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.












Click it and Unblock the Notifications