ಎಂ.ಎಂ.ಕಲಬುರ್ಗಿ ಹತ್ಯೆಯಾಗಿ 2ವರ್ಷ, ಹಂತಕರು ಯಾರು?

Posted By: Gururaj
Subscribe to Oneindia Kannada

ಧಾರವಾಡ, ಆಗಸ್ಟ್ 30 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯಾಗಿ ಎರಡು ವರ್ಷ ಕಳೆದಿದೆ. ಪ್ರಕರಣದ ತನಿಖೆ ಎತ್ತ ಸಾಗಿದೆ?, ಆರೋಪಿಗಳು ಎಲ್ಲಿದ್ದಾರೆ? ಮುಂತಾದ ಯಾವ ಮಾಹಿತಿಗಳು ಇದುವರೆಗೂ ಲಭ್ಯವಾಗಿಲ್ಲ.

ಎಂಎಂ ಕಲಬುರ್ಗಿ ಕೊಂದವರನ್ನು ಬಂಧಿಸಿಲ್ಲ : ಸಿಐಡಿ ಸ್ಪಷ್ಟನೆ

2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಹತ್ಯೆ ನಡೆದಿತ್ತು. ಬೆಳಗ್ಗೆ 8.40ರ ಸುಮಾರಿಗೆ ಮನೆಗೆ ಆಗಮಿಸಿದ್ದ ಅಪರಿಚಿತರು ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದರು.

Two year since he was shot dead, MM Kalburagi murder remains mystery

ಕಲಬುರ್ಗಿ ಅವರ ಹತ್ಯೆಯ ತನಿಖೆಯನ್ನು ಮೊದಲು ಸ್ಥಳೀಯ ಪೊಲೀಸರು ಆರಂಭಿಸಿದರು. ನಂತರ ಸರ್ಕಾರ ತನಿಖೆಯನ್ನು ಸಿಐಡಿಗೆ ಒಪ್ಪಿಸಿತು. ಮಹಾರಾಷ್ಟ್ರದ ಡಾ.ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಹತ್ಯೆಗೂ ಕಲಬುರ್ಗಿ ಅವರ ಹತ್ಯೆಗೂ ಸಾಮ್ಯತೆ ಇದೆ ಎಂದು ಹೇಳಲಾಯಿತು.

ಎಂ ಎಂ ಕಲಬುರ್ಗಿ ಹತ್ಯೆ: ಕ್ಷಿಪ್ರ ತನಿಖೆಗೆ ಸಿದ್ದರಾಮಯ್ಯ ಸೂಚನೆ

ಗೃಹ ಸಚಿವರು, ಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳ ಜೊತೆ ಹಲವು ಸಭೆಗಳನ್ನು ನಡೆಸಿದರು. ವೇಗವಾಗಿ ತನಿಖೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಆದರೆ, ಇದುವರೆಗೂ ಯಾವ ಆರೋಪಿಯ ಬಂಧನವೂ ಆಗಿಲ್ಲ.

ಧಾರವಾಡ ಮತ್ತು ಗದಗದಲ್ಲಿ ಇಂದು ವಿವಿಧ ಸಂಘಟನೆಗಳ ಸದಸ್ಯರು, ಸಾಹಿತಿಯಗಳು ಕಲಬುರ್ಗಿ ಅವರ ಹತ್ಯೆಯ ತನಿಖೆಯ ಬಗ್ಗೆ ಮಾಹಿತಿ ನೀಡುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Exactly a two year ago on August 30, 2015, rationalist and Kannada scholar MM Kalburgi was shot dead at his house in Kalyan Nagar in Dharwad. murder remains mystery till no arrest.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ