Get Updates
Get notified of breaking news, exclusive insights, and must-see stories!

ಡಿಎಪಿಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ, ರೈತರಿಗೆ ಸಲಹೆಗಳು

ಧಾರವಾಡ, ಮೇ 19: ಪೂರ್ವ ಮುಂಗಾರು ಮಳೆ ಉತ್ತಮವಾಗಿ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿದೆ. ರೈತರು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಸಿದ್ಧರಾಗುತ್ತಿದ್ದಾರೆ. ಕೃಷಿ ಚಟುವಟಿಕೆಯಲ್ಲಿ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡುವ ಕುರಿತು ಕೃಷಿ ಇಲಾಖೆ ಜಂಟಿ ನಿರ್ದೇಶಕರು ರೈತರಿಗೆ ಸಲಹೆಗಳನ್ನು ನೀಡಿದ್ದಾರೆ.

ಧಾರವಾಡದ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕೃಷಿ ಇಲಾಖೆಯು ನೀಡುವ ಸಲಹೆಗಳನ್ನು ರೈತರು ಪಾಲಿಸಿ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ರೈತರಿಗೆ ಕರೆ ಕೊಟ್ಟಿದ್ದಾರೆ.

Use Of Fertilizer Suggestions For Farmers

ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಅಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ.

ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಶ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲ್ಬಿಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ. ಮಣ್ಣಿನಿಂದ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ.

ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

ರೈತರು ಬೆಳಗಳಿಗೆ ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಶ್ ಲಭ್ಯವಿರುವುದಿಲ್ಲ.

ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತುಪೊಟ್ಯಾಶ್‌ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ:ರಂಜಕ:ಪೊಟ್ಯಾಶ್ ರಸಗೊಬ್ಬರಗಳನ್ನು 4:2:1ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ.

ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಶ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನೂ ಸಹ ಬಳಸಬಹುದು ಎಂದು ಸಲಹೆ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+