ಆ.29ರಂದು ಕರ್ನಾಟಕ ಬಂದ್‌ಗೆ ವಾಟಾಳ್ ಕರೆ

ಹುಬ್ಬಳ್ಳಿ, ಜೂ.27 : ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಆಗಸ್ಟ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ವಾಟಾಳ್ ನಾಗರಾಜ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಸದಸ್ಯರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲರ್ಪಣೆ ಮಾಡಿದ ಬಳಿಕ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಬಂದ್ ಕುರಿತು ಮಾಹಿತಿ ನೀಡಿದರು. ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗುತ್ತದೆ ಎಂದರು. [ಏ.18ರ ಕರ್ನಾಟಕ ಬಂದ್ ಮುಖ್ಯಾಂಶಗಳು]

vatal nagaraj

ಗೋವಾ ರಾಜ್ಯ ಪದೇ ಪದೇ ಕನ್ನಡಿಗರನ್ನು ಶೋಷಿಸುತ್ತಿದೆ. ಕಳಸಾ ಬಂಡೂರಿ ನಾಲಾ ಯೋಜನೆಗೆ ಅಡ್ಡಿ ಪಡಿಸುತ್ತಿದೆ. ಆದ್ದರಿಂದ, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.

ಕಳಸಾ ಬಂಡೂರಿ ನಾಲಾ ಯೋಜನೆ ಕುರಿತು ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ ವಾಟಾಳ್ ನಾಗರಾಜ್, ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು.

ಡಾ.ರಾಜ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ ಮುಂತಾದವರು ಆ.29ರ ಶನಿವಾರದ ಕರ್ನಾಟಕ ಬಂದ್‌ಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

ಅಂದಹಾಗೆ ಮೇಕೆದಾಟು ಬಳಿ ಕರ್ನಾಟಕ ಅಣೆಕಟ್ಟು ನಿರ್ಮಾಣ ಮಾಡಲು ವಿರೋಧ ವ್ಯಕ್ತಪಡಿಸಿದ ತಮಿಳುನಾಡು ಸರ್ಕಾರದ ಕ್ರಮವನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು 2015ರ ಏ.18ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+