ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊನೆಗೂ ಧಾರವಾಡಕ್ಕೆ ಅಭ್ಯರ್ಥಿ ಘೋಷಣೆ ಮಾಡಿದ ಕಾಂಗ್ರೆಸ್!

|
Google Oneindia Kannada News

ಧಾರವಾಡ, ಏಪ್ರಿಲ್ 03 : ಕೊನೆಗೂ ಎಐಸಿಸಿ 2019ರ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬುಧವಾರ ಎಐಸಿಸಿ ಧಾರವಾಡ, ದಾವಣಗೆರೆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿನಯ್ ಕುಲಕರ್ಣಿ ಅವರು ಟಿಕೆಟ್ ಪಡೆದಿದ್ದಾರೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನವಾಗಿದೆ.

ಧಾರವಾಡ ಕ್ಷೇತ್ರದ ಪರಿಚಯ ಓದಿ

ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ವಿಳಂಬವಾದ ಕಾರಣ ಅಸಮಾಧಾನಗೊಂಡಿದ್ದ ವಿನಯ್ ಕುಲಕರ್ಣಿ ಅವರು, 'ಬುಧವಾರ ಬೆಳಗ್ಗೆ 10.45ಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುತ್ತೇನೆ' ಎಂದು ಘೋಷಣೆ ಮಾಡಿದ್ದರು.

ಕಾಂಗ್ರೆಸ್ ಟಿಕೆಟ್ ಗೊಂದಲ : ವಿನಯ್ ಕುಲಕರ್ಣಿ ಅಸಮಾಧಾನಕಾಂಗ್ರೆಸ್ ಟಿಕೆಟ್ ಗೊಂದಲ : ವಿನಯ್ ಕುಲಕರ್ಣಿ ಅಸಮಾಧಾನ

ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಧಾರವಾಡ ಕ್ಷೇತ್ರದ ಹಾಲಿ ಸಂಸದರು. ಈ ಬಾರಿಯ ಚುನಾವಣೆಗೂ ಅವರೇ ಅಭ್ಯರ್ಥಿ. 2014ರ ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದ ಜೋಶಿ ಮತ್ತು ವಿನಯ್ ಕುಲಕರ್ಣಿ ಮತ್ತೊಮ್ಮೆ ಎದುರಾಳಿಗಳು. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ವಿನಯ್ ಕುಲಕರ್ಣಿ ಅವರು ಈಗ ಸಂಸತ್‌ನತ್ತ ಮುಖ ಮಾಡಿದ್ದಾರೆ.

ಧಾರವಾಡಲ್ಲಿ 16,88,067 ಮತದಾರರು, ಏ.23ರಂದು ಮತದಾನಧಾರವಾಡಲ್ಲಿ 16,88,067 ಮತದಾರರು, ಏ.23ರಂದು ಮತದಾನ

ಪ್ರಬಲ ಆಕಾಂಕ್ಷಿಯಾಗಿದ್ದರು

ಪ್ರಬಲ ಆಕಾಂಕ್ಷಿಯಾಗಿದ್ದರು

ಮಾಜಿ ಸಚಿ ವಿನಯ್ ಕುಲಕರ್ಣಿ ಅವರು ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಅಭ್ಯರ್ಥಿ ಘೋಷಣೆ ಮಾಡುವುದು ವಿಳಂಬ ಮಾಡಿತು. ಇದರಿಂದ ಅವರು ಅಸಮಾಧಾನಗೊಂಡಿದ್ದರು. 'ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದು ಅಸಾಧ್ಯವೇನಲ್ಲ, ಹಿಂದೆ ನಾನು ಪಕ್ಷೇತರನಾಗಿ ಗೆದ್ದು ಬಂದಿದ್ದೇನೆ' ಎಂದು ಹೇಳಿದ್ದರು.

ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲ

ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲ

ಧಾರವಾಡ ಕ್ಷೇತ್ರಕ್ಕೆ ಶಾಕಿರ್ ಸನದಿ ಕಾಂಗ್ರೆಸ್ ಅಭ್ಯರ್ಥಿ ಎಂಬ ಸುದ್ದಿಗಳು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು. ಕರ್ನಾಟಕ ಕಾಂಗ್ರೆಸ್ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿತ್ತು. ಈ ಸುದ್ದಿ ಬಳಿಕ ಅಭ್ಯರ್ಥಿ ಯಾರು ಎಂಬ ಗೊಂದಲ ಉಂಟಾಗಿತ್ತು. ಈಗ ವಿನಯ್ ಕುಲಕರ್ಣಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಕ್ಷೇತ್ರ ಬಿಜೆಪಿ ಭದ್ರಕೋಟೆ

ಕ್ಷೇತ್ರ ಬಿಜೆಪಿ ಭದ್ರಕೋಟೆ

ಧಾರವಾಡ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. 1991ರ ಹುಬ್ಬಳ್ಳಿ ಈದ್ಗಾ ಮೈದಾನ ವಿವಾದದ ನಂತರದ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಈ ಬಾರಿ ಕಾಂಗ್ರೆಸ್‌ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಪ್ರಹ್ಲಾದ್ ಜೋಶಿ.

ಜೋಶಿ, ಕುಲಕರ್ಣಿ ಮುಖಾಮುಖಿ

ಜೋಶಿ, ಕುಲಕರ್ಣಿ ಮುಖಾಮುಖಿ

2014ರ ಲೋಕಸಭಾ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಮತ್ತು ವಿನಯ್ ಕುಲಕರ್ಣಿ ಮುಖಾಮುಖಿಯಾಗಿದ್ದರು. ಈ ಬಾರಿ ಪುನಃ ಅವರು ಎದುರಾಳಿಗಳು. ಕಳೆದ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ 5,45,395 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ವಿನಯ್ ಕುಲಕರ್ಣಿ ಅವರು 4,31,738 ಮತ ಪಡೆದಿದ್ದರು.

English summary
Congress released a list of 20 candidates for Lok Sabha Elections 2019. Former minister Vinay Kulkarni party candidate for Dharwad seat. Election will be held on April 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X