ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್‍ಯೇತರ ಖಾಯಿಲೆಗಳಿಗೆ ಖಾಸಗಿ ವೈದ್ಯರು ಚಿಕಿತ್ಸೆ ನೀಡದಿದ್ದರೆ ನೋಂದಣಿ ರದ್ದು

|
Google Oneindia Kannada News

ಧಾರವಾಡ, ಮೇ 8: ಕೋವಿಡ್-19 ಕೊರೊನಾ ವೈರಸ್ ಚಿಕಿತ್ಸೆ ಹಾಗೂ ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಿರುವ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಕೋವಿಡ್‍ಯೇತರವಾದ ಉಳಿದ ಖಾಯಿಲೆಗಳಿಗೆ ಚಿಕಿತ್ಸೆ ನೀಡಿ ನೆರವಿಗೆ ಬರಬೇಕು. ಸಹಕಾರ ನೀಡದಿದ್ದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

Recommended Video

ಜಮೀರ್ ಅಹಮ್ಮದ್ ಅವರನ್ನು ಹಾಡಿ ಹೊಗಳಿದ ಸಿದ್ದರಾಮಯ್ಯ | Siddaramaiah | Oneindia Kannada

ಅವರು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಚಟುವಟಿಕೆಗಳ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೊನಾ ಬೇಗ ಹೋಗಲ್ಲ, ತಾಳ್ಮೆ ಕಳೆದುಕೊಳ್ಳಬೇಡಿ ಎಂದ ಶ್ರೀರಾಮುಲುಕೊರೊನಾ ಬೇಗ ಹೋಗಲ್ಲ, ತಾಳ್ಮೆ ಕಳೆದುಕೊಳ್ಳಬೇಡಿ ಎಂದ ಶ್ರೀರಾಮುಲು

ಖಾಸಗಿ ವೈದ್ಯರು ಮೊದಲಿನಂತೆ ತಮ್ಮ ಆಸ್ಪತ್ರೆಗಳನ್ನು ತೆರೆದು ಜನರ ಸಾಮಾನ್ಯ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಸರಕಾರಿ ಆಸ್ಪತ್ರೆ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಿ, ಕೋವಿಡ್ ಪ್ರಕರಣಗಳಿಗೆ ಆದ್ಯತೆ ನೀಡಲು ಅನುಕೂಲವಾಗುತ್ತದೆ. ಈಗಾಗಲೇ ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾಡಳಿತ ಈ ಕುರಿತು ವೈದ್ಯರಿಗೆ ಸಭೆ ಜರುಗಿಸಿ ಮನವಿ ಮಾಡಿದ್ದರೂ ಕೂಡಾ ಎಲ್ಲ ಖಾಸಗಿ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ, ಜನರಿಗೆ ಸೇವೆ ನೀಡುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಶೀಘ್ರದಲ್ಲಿ ಸಭೆ ನಡೆಸಿ ಸೇವೆ ನೀಡದ ಖಾಸಗಿ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಸಮುದಾಯದಲ್ಲಿ ಹರಡುವ ಸಾಧ್ಯತೆ

ಸಮುದಾಯದಲ್ಲಿ ಹರಡುವ ಸಾಧ್ಯತೆ

ಲಾಕ್‍ಡೌನ್ ಸಡಿಲಿಕೆಯಿಂದ ಜನರಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಇರುವುದು ಮತ್ತು ಅನಗತ್ಯ ಓಡಾಟ ಕಂಡು ಬರುತ್ತಿದೆ. ಇದರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೆ ವ್ಯಾಪಿಸಿದರೆ ಅದು ಸಮುದಾಯದಲ್ಲಿ ಹರಡುವ ಸಾಧ್ಯತೆ ಇರುತ್ತದೆ ಆದ್ದರಿಂದ ಹಾಟ್‍ಸ್ಪಾಟ್ ಕಂಟೈನ್‍ಮೆಂಟ್ ವಲಯ, ಬಫರ್ ವಲಯಗಳಲ್ಲಿ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಸಚಿವರು ಹೇಳಿದರು.

ಕೊರತೆ ಉಂಟಾಗದಂತೆ ಮುಂಜಾಗೃತೆ

ಕೊರತೆ ಉಂಟಾಗದಂತೆ ಮುಂಜಾಗೃತೆ

ಆರೋಗ್ಯ ಇಲಾಖೆಯು ರಕ್ತ ಸಂಗ್ರಹಕ್ಕೆ ಹೆಚ್ಚು ಹೆಚ್ಚು ಪ್ರಾಮುಖ್ಯತೆ ನೀಡಬೇಕು. ರಕ್ತ ಸಂಗ್ರಹದ ಶಿಬಿರಗಳನ್ನು ಆಯೋಜಿಸುವ ಮೂಲಕ ಹೆಚ್ಚು ರಕ್ತ ಸಂಗ್ರಹ ಮಾಡಿ ಕೊರತೆ ಉಂಟಾಗದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಿದರು. ಆಶಾ ಕಾರ್ಯಕರ್ತೆಯಾರು, ನರ್ಸ್‍ಗಳು, ವೈದ್ಯರಿಗೆ ಆರೋಗ್ಯ ಸುರಕ್ಷತಾ ಕಿಟ್‍ಗಳನ್ನು ವಿತರಿಸಬೇಕು. ದಾನಿಗಳಿಂದಲೂ ಸಹ ಮಾಸ್ಕ್, ಸ್ಯಾನಿಟೈಸರ್ ಸಂಗ್ರಹಿಸಿ, ಅಗತ್ಯವಿರುವ ಸಿಬ್ಬಂದಿಗಳಿಗೆ ವಿತರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರು ಸೂಚಿಸಿದರು.

8 ಸಾವಿರ ಕೋವಿಡ್-19 ಟೆಸ್ಟ್ ವರದಿ ಬರುತ್ತಿವೆ

8 ಸಾವಿರ ಕೋವಿಡ್-19 ಟೆಸ್ಟ್ ವರದಿ ಬರುತ್ತಿವೆ

ಪ್ರಸಕ್ತ ಪ್ರತಿದಿನ 7 ರಿಂದ 8 ಸಾವಿರ ಕೋವಿಡ್-19 ಟೆಸ್ಟ್‍ಗಳ ವರದಿ ಬರುತ್ತಿವೆ. ಬರುವ ವಾರದಿಂದ ಈ ಸಂಖ್ಯೆಯನ್ನು 10 ಸಾವಿರಕ್ಕೆ ಹೆಚ್ಚಿಸಲು ಕ್ರಮಕೈಗೊಳ್ಳಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಕೋವಿಡ್ ಪ್ರಯೋಗಾಲಯ ಆರಂಭಿಸಲು ಸರಕಾರ ಆದೇಶಿಸಿದೆ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಹೈಫ್ಲೋ ಆಕ್ಸಿಜನ್ ಯೂನಿಟ್ ಮತ್ತು ಕೇಂದ್ರೀಕೃತ ಆಮ್ಲಜನಕ ಪೂರೈಕೆ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾ ಆಸ್ಪತ್ರೆಗೆ ಭೇಟಿ

ಜಿಲ್ಲಾ ಆಸ್ಪತ್ರೆಗೆ ಭೇಟಿ

ಸಚಿವ ಬಿ. ಶ್ರೀರಾಮುಲು ಅವರು ಸಭೆಯ ನಂತರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಕೋವಿಡ್-19 ಫೀವರ್ ಕ್ಲಿನಿಕ್‍ಗೆ ಭೇಟಿ ನೀಡಿ ವೈದ್ಯರು, ನರ್ಸ್‍ಗಳು ಹಾಗೂ ಆರೋಗ್ಯ ಸಿಬ್ಬಂದಿಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ಶಿವಕುಮಾರ ಮಾನಕರ್ ಮತ್ತಿತರರು ಇದ್ದರು.

English summary
Will Suspend Who Not Treating For Non Covid 19 Patients Doctors License says health minister b sriramulu at dharwad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X