ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್‌ಗೆ ಸಂಕಷ್ಟ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

2016, ಜೂನ್ 15 ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸಪ್ತಾಪುರದ ಉದಯ್ ಜಿಮ್ ಬಳಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಜಿಮ್ ನಲ್ಲಿ ಯೋಗೇಶ ಗೌಡ ಪೇಪರ್ ಓದುತ್ತಾ ಕುಳಿತುಕೊಂಡ ಸಂದರ್ಭದಲ್ಲಿ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದರು.

ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣ ಸಿಬಿಐ ತನಿಖೆಗೆಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ

ಓಡಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಬಲಗೈಗೆ ಮಚ್ಚಿನಿಂದ ಕೊಚ್ಚಿದ್ದರು. ನಂತರ ಬೆನ್ನತ್ತಿದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ, ಭೀಕರವಾಗಿ ಕೊಲೆಗೈದಿದ್ದರು.

ಯಾರ್ಯಾರ ವಿರುದ್ಧ ಎಫ್‌ಐಆರ್ ದಾಖಲು

ಯಾರ್ಯಾರ ವಿರುದ್ಧ ಎಫ್‌ಐಆರ್ ದಾಖಲು

ಈ ಪ್ರಕರಣ ಧಾರವಾಡದಲ್ಲಿ ಸಂಚಲನ ಸೃಷ್ಟಿ ಮಾಡಿದ್ದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಂ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ್ ಕಾಟಗಿ, ಮಹಾಬಲೇಶ್ವರ ಹೊನಗಲ್ ವಿರುದ್ಧ ಸಿಬಿಐ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಧಾರವಾಡ : ಯೋಗೇಶ ಗೌಡ ಕೊಲೆ, ಐವರ ಬಂಧನಧಾರವಾಡ : ಯೋಗೇಶ ಗೌಡ ಕೊಲೆ, ಐವರ ಬಂಧನ

ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ

ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ

ಈ ಎಲ್ಲಾ ಆರೋಪಿಗಳನ್ನು ಧಾರವಾಡ ಪೊಲೀಸರುಬಂಧಿಸಿದ್ದು, ಸದ್ಯ ಜೈಲಿನಲ್ಲಿದ್ದಾರೆ. ಬಂಧಿತ ಆರೋಪಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಂಬಲಿಗರು. ಹೀಗಾಗಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಪ್ರಕರಣದ ಹಿನ್ನೆಲೆ

ಪ್ರಕರಣದ ಹಿನ್ನೆಲೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಸಪ್ತಾಪುರದ ಉದಯ್ ಜಿಮ್ ಬಳಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರು ತಳುಕುಹಾಕಿಕೊಂಡಿತ್ತು. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ವೇಳೆ ಪ್ರಚಾರದ ವೇಳೆ ವಿಚಾರ ಪ್ರಸ್ತಾಪಿಸಿದ್ದ ಬಿಜೆಪಿ ನಾಯಕರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಿಬಿಐ ತನಿಖೆಗೆ ಒಪ್ಪಿಸುವುದಾಗಿ ಹೇಳಿದ್ದರು. ಹಾಗೆಯೇ ಇದೀಗ ತನಿಖೆ ಚುರುಕಾಗಿದೆ.

ಪರಿಷತ್ತಿನಲ್ಲಿ ಕಾವೇರಿದ ಚರ್ಚೆ : ಹತ್ಯೆಯಾದ ಯೋಗೇಶ್ ಗೌಡ ಯಾರು?ಪರಿಷತ್ತಿನಲ್ಲಿ ಕಾವೇರಿದ ಚರ್ಚೆ : ಹತ್ಯೆಯಾದ ಯೋಗೇಶ್ ಗೌಡ ಯಾರು?

ಸರ್ಕಾರ ಸೆ.8ರಂದು ಸಿಬಿಐಗೆ ವಹಿಸಿತ್ತು

ಸರ್ಕಾರ ಸೆ.8ರಂದು ಸಿಬಿಐಗೆ ವಹಿಸಿತ್ತು

ಹತ್ಯೆಯ ಹಿಂದೆ ರಾಜಕಾರಣಿಯೊಬ್ಬರ ಹೆಸರು ಕೇಳಿ ಬಂದ ಕಾರಣಕ್ಕಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಾಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೆ. 8 ರಂದು ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.

English summary
The Central Bureau of Investigation has filed an FIR against six persons and unknown others in connection with the murder of BJP worker Yogesh Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X