ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಸಂಕಷ್ಟ

|
Google Oneindia Kannada News

ಧಾರವಾಡ, ಏಪ್ರಿಲ್ 09 : ಲೋಕಸಭಾ ಚುನಾವಣೆ ಹೊತ್ತಿನಲ್ಲಿಯೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸಂಕಷ್ಟ ಎದುರಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದು, ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಮತ್ತೆ ಸುದ್ದಿಯಾಗಿದೆ. ವಿನಯ್ ಕುಲಕರ್ಣಿ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ಜೆಎಂಎಫ್‌ಸಿ ಕೋರ್ಟ್ ಪೊಲೀಸರಿಗೆ ಆದೇಶ ನೀಡಿದೆ.

ಯೋಗೀಶ್ ಗೌಡ ಹತ್ಯೆ: ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರುಯೋಗೀಶ್ ಗೌಡ ಹತ್ಯೆ: ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು

ವಿನಯ್ ಕುಲಕರ್ಣಿ, ಪೊಲೀಸ್ ಅಧಿಕಾರಿಗಳಾದ ತುಳಜಪ್ಪ ಸುಲ್ಫಿ ಮತ್ತು ಚಂದ್ರಶೇಖರ್ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ಜೆಎಂಎಫ್‌ಸಿ ನ್ಯಾಯಾಲಯ ಪೊಲೀಸರಿಗೆ ಆದೇಶ ನೀಡಿದೆ. ಇದರಿಂದಾಗಿ ವಿನಯ್ ಕುಲಕರ್ಣಿ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ.

Yogesh Gowda murder case : Court orders police to file FIR against Vinay Kulkarni

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಒತ್ತಡ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ವಿನಯ್ ಕುಲಕರ್ಣಿ ಅವರ ಮೇಲೆ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಧಾರವಾಡ : ಯೋಗೇಶ ಗೌಡ ಕೊಲೆ, ಐವರ ಬಂಧನಧಾರವಾಡ : ಯೋಗೇಶ ಗೌಡ ಕೊಲೆ, ಐವರ ಬಂಧನ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಎಲ್ಲಾ 6 ಆರೋಪಿಗಳು ಸಚಿವ ವಿನಯ್ ಕುಲಕರ್ಣಿ ಅವರ ಬೆಂಬಲಿಗರಾಗಿದ್ದಾರೆ. ಹತ್ಯೆಯಾದ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಅವರು ಸಹ ಹತ್ಯೆಯಲ್ಲಿ ವಿನಯ್ ಕುಲಕರ್ಣಿ ಅವರ ಪಾತ್ರವಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ವಿನಯ್ ಕುಲಕರ್ಣಿ ಅವರು 2019ರ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್‌-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲತಾಂಶ ಪ್ರಕಟವಾಗಲಿದೆ.

English summary
Dharawad JMFC (Courts of Judicial Magistrate of First Class) ordered the police to file FIR against former minister Vinay Kulkarni in Yogesh Gowda murder case. Vinay Kulkarni Congress and JD(S) candidate in Dharwad for Lok sabha elections 2019. BJP ZP member Yogesh Gowda murdered in 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X