ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌!

|
Google Oneindia Kannada News

ಬೆಂಗಳೂರು, ಜ. 21: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡದ ಹೈಕೋರ್ಟ್ ವಜಾ ಮಾಡಿದೆ.

ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯ ವಿಚಾರಣೆ ನಿನ್ನೆ(ಜ.20)ಯಿಂದ ನಡೆದಿತ್ತು. ವಿನಯ ಕುಲಕರ್ಣಿ ಪರವಾಗಿ ನ್ಯಾಯವಾದಿ ಶಶಿಕಿರಣ ಶೆಟ್ಟಿ ಅವರು ವಾದ ಮಂಡಿಸಿದ್ದರು. ಇಂದು ಹೈಕೋರ್ಟ್ ನ್ಯಾಯಾಧೀಶ ಕೆ.ಎನ್. ನಟರಾಜ ವಾದವನ್ನು ಆಲಿಸಿದ ಬಳಿಕ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿದ್ದಾರೆ.

ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ನವೆಂಬರ್ 5 ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನ ಸಿಬಿಐ ಬಂಧಿಸಿದೆ. ಅದಾದ ನಂತರ ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಅರ್ಜಿ ವಜಾ ಆದ ಬಳಿಕ ಹೈಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

Yogesh Gowda Murder Case : Karnataka High Court Rejects Bail to Vinay Kulkarni

Recommended Video

Bangalore: Lockdown ವೇಳೆಯಲ್ಲಿ ದಾಖಲಾಯ್ತು ಲಕ್ಷಗಟ್ಟಲೆ ಕೇಸ್, ಕೋಟಿ ಕೋಟಿ ಕಲೆಕ್ಷನ್..! | Oneindia Kannada

ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸುವ ಅನಿವಾರ್ಯತೆ ಎದುರಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟಿ ರಾಗಿಣಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಸಿಕ್ಕಿದೆ.

English summary
Dharwad Zilla Panchayat Member Yogesh Gowda Murder Case; Karnataka High Court Rejects Bail to Former Minister Vinay Kulkarni. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X