Breaking news; ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು

ಧಾರವಾಡ, ಆಗಸ್ಟ್ 11; ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯಕ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು. ಹಿಂಡಲಾ ಜೈಲಿನಲ್ಲಿ ವಿನಯ್ ಕುಲಕರ್ಣಿ ಇದ್ದಾರೆ.

ಬುಧವಾರ ಸುಪ್ರೀಂಕೋರ್ಟ್ ಮಾಜಿ ಸಚಿವ, ಕಾಂಗ್ರಸ್ ನಾಯಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಜಾಮೀಜು ಮಂಜೂರು ಮಾಡಲಾಗಿದೆ.

 Yogesh Gowda Murder Case: Supreme Court grants conditional bail to Vinay Kulkarni

ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆದ್ದರಿಂದ ಅವರು ಜಾಮೀನು ಪಡೆಯಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಜಾಮೀನು ನೀಡಬಾರದು ಎಂದು ಸಿಬಿಐ ಆಕ್ಷೇಪಣೆಯನ್ನು ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಂದು ಜಾಮೀನು ನೀಡಿದೆ.

2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧಿಸಲಾಗಿತ್ತು. ಸದ್ಯ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಜಾಮೀನು ನೀಡಿದರೂ ಅವರು ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ.

ಸುಪ್ರೀಂಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದ ಸಿಬಿಐ, ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಕೊಲೆಯಾದ ಯೋಗೇಶ್ ಗೌಡ ಪತ್ನಿಗೆ ಈಗಾಗಲೇ ಅವರು ಬೆದರಿಕೆ ಹಾಕಿದ್ದಾರೆ ಎಂದು ವಾದ ಮಂಡನೆ ಮಾಡಿತ್ತು.

ಬಿಜೆಪಿ ನಾಯಕ ಯೋಗೇಶ್ ಗೌಡರನ್ನು ಜಿಮ್‌ನಲ್ಲಿ ಜೂನ್ 15, 2016ರಂದು ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಯೋಗೇಶ್ ಗೌಡ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಸಿಬಿಐ ತನಿಖೆಯಾಗಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಬಿಜೆಪಿ ಸರ್ಕಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಹತ್ಯೆ ಪ್ರಕರಣದ ತನಿಖೆ ಕೈಗೊಂಡ ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು.

ಜುಲೈ ತಿಂಗಳಿನಲ್ಲಿ ನ್ಯಾಯಾಲಯದ ಅನುಮತಿ ಪಡೆದು ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಧಾರವಾಡಕ್ಕೆ ಆಗಮಿಸಿದ್ದರು. ಆರ್ಥಿಕ ವ್ಯವಹಾರದ ಹೊಣೆಗಾರಿಕೆಯನ್ನು ಪತ್ನಿ ಶಿವಲೀಲಾಗೆ ಸಾಮಾನ್ಯ ಅಧಿಕಾರ ಪತ್ರ (ಜಿಪಿಎ)ಗೆ ಸಹಿ ಮಾಡುವ ಮೂಲಕ ಹಸ್ತಾಂತರ ಮಾಡಿದ್ದರು.

ನೂರಾರು ದನಕರುಗಳು, ಡೈರಿ ಹೊಂದಿರುವ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪತ್ನಿಗೆ ಜಿಪಿಎ ನೀಡಲು ಧಾರವಾಡಕ್ಕೆ ಭೇಟಿ ನೀಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಕೋರ್ಟ್ ಅನುಮತಿ ನೀಡಿತ್ತು.

2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಧಾರವಾಡದ ನಿವಾಸದಲ್ಲಿ ವಿನಯ್ ಕುಲಕರ್ಣಿ ಬಂಧಿಸಿದ್ದರು. ವಿಚಾರಣೆ ಬಳಿಕ ಬೆಳಗಾವಿ ಹಿಂಡಲಗಾ ಜೈಲಿಗೆ ಅವರನ್ನು ಕಳಿಸಲಾಗಿತ್ತು. ಅವರು ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು.

ಸಿಬಿಐನಿಂದ ಬಂಧನವಾದ ಬಳಿಕ ವಿಚಾರಣೆ ಹೊರತುಪಡಿಸಿ 2 ಬಾರಿ ವಿನಯ್ ಕುಲಕರ್ಣಿ ಜೈಲಿನಿಂದ ಹೊರಬಂದಿದ್ದರು. ಮಾವ ಮೃತಪಟ್ಟ ಸಂದರ್ಭದಲ್ಲಿ ಪೊಲೀಸ್ ಭದ್ರತೆಯಲ್ಲಿ ಆಗಮಿಸಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. 2ನೇ ಬಾರಿ ಜಿಪಿಎ ಪತ್ರಕ್ಕೆ ಸಹಿ ಮಾಡಲು ಅವರು ಜೈಲಿನಿಂದ ಹೊರಬಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+