ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯೋಗೇಶ್ ಗೌಡ ಹತ್ಯೆ : ಸಿಬಿಐ ತನಿಖೆಗೆ ಶೆಟ್ಟರ್ ಆಗ್ರಹ

By ಧಾರವಾಡ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ನವೆಂಬರ್ 27 : 'ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಸಚಿವ ವಿನಯ್ ಕುಲಕರ್ಣಿ ರಾಜೀನಾಮೆ ನೀಡಬೇಕು' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದರು.

ಧಾರವಾಡ : ಯೋಗೇಶ ಗೌಡ ಕೊಲೆ, ಐವರ ಬಂಧನಧಾರವಾಡ : ಯೋಗೇಶ ಗೌಡ ಕೊಲೆ, ಐವರ ಬಂಧನ

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶೆಟ್ಟರ್, 'ರಾಜಿ ಸಂಧಾನ ಮಾಡಿಲ್ಲವೆಂದು ಸಚಿವ ವಿನಯ್ ಕುಲಕರ್ಣಿ ಹೇಳುತ್ತಾರೆ. ಹಾಗಾದರೆ ಡಿವೈಎಸ್‌ಪಿ ಸುಲ್ಪಿ ಗುರುನಾಥಗೌಡರೊಂದಿಗೆ ಬೇರೆ ಏನು ಚರ್ಚೆ ಮಾಡಿದ್ದಾರೆ? ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಕಾವೇರಿದ ಚರ್ಚೆ : ಹತ್ಯೆಯಾದ ಯೋಗೇಶ್ ಗೌಡ ಯಾರು?ಕಾವೇರಿದ ಚರ್ಚೆ : ಹತ್ಯೆಯಾದ ಯೋಗೇಶ್ ಗೌಡ ಯಾರು?

'ಡಿವೈಎಸ್‌ಪಿ ತುಳಜಪ್ಪ ಸುಲ್ಪಿ ಗುರುನಾಥಗೌಡರ ಜೊತೆ ಮಾತುಕತೆ ಮಾಡಿರುವುದು ನಿಜ ಎಂದು ಸಚಿವ ವಿನಯ್ ಕುಲಕರ್ಣಿ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು' ಎಂದರು.

Yogesh Gowda murder : Jagadish Shettar demand for CBI probe

'ಈ ಪ್ರಕರಣ ನಡೆದ ದಿನದಿಂದ ಡಿವೈಎಸ್‌ಪಿ ತುಳಜಪ್ಪ ಸುಲ್ಪಿ ಕಣ್ಮರೆಯಾಗಿದ್ದಾರೆ, ಕೊಲೆ ಪ್ರಕರಣದಲ್ಲಿ ಅವರು ರಾಜಿ ಮಾಡಲು ಹೋಗುತ್ತಾರೆ ಎಂದರೆ ಅವತ್ತು ಅವರು ಡ್ಯೂಟಿ ಮೇಲೆ ಇರೋವುದರ ಕುರಿತು ಸ್ಪಷ್ಟೀಕರಣ ನೀಡಬೇಕು' ಎಂದು ಶೆಟ್ಟರ್ ಒತ್ತಾಯಿಸಿದರು.

ಧಾರವಾಡದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯನ ಹತ್ಯೆಧಾರವಾಡದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯನ ಹತ್ಯೆ

'ಡಿವೈಎಸ್‌ಪಿ ತುಳಜಪ್ಪ ಸುಲ್ಪಿ ಮೇಲೆ ಐಜಿಯವರು ಕಾನೂನು ಕ್ರಮ ಕೈಗೊಳ್ಳಬೇಕು. ಗೃಹ ಸಚಿವರು ಅಧಿಕಾರಿಯನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು' ಎಂದು ಶೆಟ್ಟರ್ ಒತ್ತಾಯಿಸಿದರು.

English summary
Opposition leader Jagadish Shettar demanded for CBI probe on Dharwad zilla panchayat BJP member Yogesh Gowda murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X