ಯೋಗೀಶ್ ಗೌಡ ಹತ್ಯೆ: ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು

Posted By:
Subscribe to Oneindia Kannada

ಧಾರವಾಡ, ನವೆಂಬರ್ 29 : ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ವಿನಯ ಕುಲಕರ್ಣಿ ವಿರುದ್ಧ ದೂರು ದಾಖಲಾಗಿದೆ.

ಹತ್ಯೆಯಾದ BJP ಮುಖಂಡ ಯೋಗೇಶ್ ಪರ ವಕೀಲನಿಗೆ ಸಚಿವನಿಂದ ಧಮ್ಕಿ

ಹತ್ಯೆಯಾದ ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಅವರು ವಕೀಲರೊಂದಿಗೆ ಬುಧವಾರ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದರು. ಸಚಿವರು ತಮ್ಮ ಅಧಿಕಾರ ಬಳಸಿಕೊಂಡು ಸಾಕ್ಷ್ಯ ನಾಶ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

Yogish Gowda Murder: complaint filed against minister Vinay Kulakarni

ದೂರು ಸ್ವೀಕರಿಸಿದ ಎಸ್.ಪಿ. ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಯೋಗೇಶ ಗೌಡ ಪರ ವಕೀಲ ಆನಂದ್ ಎನ್ನುವರಿಗೆ ದೂರವಾಣಿ ಮೂಲಕ ಧಮ್ಕಿ ಹಾಕಿರುವುದು ಆಡಿಯೋ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಚರ್ಚೆ ನಡೆದಿದ್ದು, ವಿನಯ್ ಕುಲಕರ್ಣಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿತು.

ಅಷ್ಟೇ ಅಲ್ಲದೇ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. 2016 ಜೂನ್ 15ರ ಮುಂಜಾನೆ ಯೋಗೇಶ್ ಗೌಡ ಕೊಲೆ ನಡೆದಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Dharwad Zilla Panchayat BJP member Yogish Gowda Murder case: Yogish Gowda brother has filed a complaint against Karnataka Mines and Geology minister Vinay Kulkarni with Dharwad SP.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ