Doddaballapur Elections : ಬಂಡಾಯದ ನೆಲದಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಸೆಡ್ಡು ಹೊಡೆಯಲಿದ್ಯಾ ಬಿಜೆಪಿ?
ದೊಡ್ಡಬಳ್ಳಾಪುರ, ಮಾರ್ಚ್, 26: ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮತ್ತೊಂದೆ ಚುನಾವಣೆ ಹತ್ತಿರವಾಗುತ್ತಿಂದತೆ ರಾಜಕಾರಣಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗಾದರೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸ್ಥಿತಿ ಗತಿ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
ಇದೀಗ ಕ್ಷೇತ್ರದ ರಾಜಕೀಯದಲ್ಲಿ ಹಲವಾರು ಬದಲಾವಣೆಗಳು ಆಗುತ್ತಲೇ ಇವೆ. ಆದ್ದರಿಂದ ವಿಧಾನಸಭೆ ಅಖಾಡದಲ್ಲಿ ಸಾಂಪ್ರದಾಯಿಕ ಎದುರಾಳಿ ಎಂದು ಗುರುತಿಸಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಸ್ಥಾನಗಳು ಈ ಬಾರಿಯ ಚುನಾವಣೆಯಲ್ಲಿ ಬದಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ಚುನಾವಣೆಗೂ ಕೂಡ ಕಾಂಗ್ರೆಸ್, ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ದೊಡ್ಡಬಳ್ಳಾಪುರ ಕ್ಷೇತ್ರ ಪರಿಚಯ
ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ದೊಡ್ಡಬಳ್ಳಾಪುರ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದೆ. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯ.ಟಿ. ವೆಂಕಟರಮಣಯ್ಯ ಜಯ ಗಳಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಜನತಾ ದಳ (ಜಾತ್ಯತೀತ)ದ ಮುನೇಗೌಡ 9,945 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಹಾಗಾದರೆ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಾತ್ಯಾತೀತ ಪಕ್ಷಗಳಿಗೇ ಬೆಂಬಲ ಯಾಕೆ?
ಮತದಾರ ಪ್ರಭುಗಳು ಮೊದಲಿನಿಂದಲೂ ಜಾತ್ಯಾತೀತ ಪಕ್ಷಗಳನ್ನೇ ಬೆಂಬಲಿಸುತ್ತಾ ಬಂದಿದ್ದಾರೆ ಎನ್ನುವುದು ಕ್ಷೇತ್ರದ ವಿಶೇಷತೆಯಾಗಿದೆ. ಆದ್ದರಿಂದ ಆರ್.ಎಲ್. ಜಾಲಪ್ಪನವರ ಕುಟುಂಬವು ಸುಮಾರು 35 ವರ್ಷಗಳ ಕಾಲ ಕ್ಷೇತ್ರದಲ್ಲಿ ಶಾಸಕರಾಗಿ ಹಿಡಿತ ಸಾಧಿಸಿದೆ ಎನ್ನಲಾಗಿದೆ. ಇನ್ನು ಜಾಲಪ್ಪನವರ ಪುತ್ರ ಜೆ.ನರಸಿಂಹಸ್ವಾಮಿಯವರು ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆ ಆಗಿದ್ದು, ನಂತರ ಧರ್ಮ ಆಧಾರಿತ ಪಕ್ಷದ ಶಾಸಕರಾಗಿ ಆಯ್ಕೆ ಆದರು. ಆದರೆ ಕೇವಲ ಐದೇ ವರ್ಷದಲ್ಲಿ ಈ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡಿತ್ತು.

ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಟಿ.ವೆಂಕಟರಮಣಯ್ಯನವರು ಇದೀಗ ಹ್ಯಾಟ್ರಿಕ್ ಗೆಲುವಿನೆಡೆಗೆ ಚಿತ್ತವನ್ನು ನೆಟ್ಟಿದ್ದಾರೆ. ಕೊನೆಗೂ ಕ್ಷೇತ್ರದಿಂದ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ. ಇದೀಗ ಕಾಂಗ್ರೆಸ್ ನಾಯಕರು ಪಕ್ಷದಲ್ಲಿನ ಭಿನ್ನಮತ ಶಮನ ಮಾಡಲು ಮುಂದಾಗಿದ್ದು, ಆದರೂ ಕ್ಷೇತ್ರದಲ್ಲಿ ಬೂದಿಮುಚ್ಚಿದ ಕೆಂಡದಂತೆ ಭಿನ್ನಮತ ಮುಂದುವರೆದಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಸೋಲು, ಗೆಲುವಿನ ಲೆಕ್ಕಾಚಾರ ಹೇಗಿದೆ?
ಇನ್ನು ಬಿ.ಮುನೀಗೌಡ ಅವರು 2013ರಲ್ಲಿ ಪಕ್ಷೇತರರಾಗಿ ಮತ್ತು 2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಈ ವೇಳೆ ಅವರು ಕಾಂಗ್ರೆಸ್ ಪಕ್ಷದ ಟಿ. ವೆಂಕಟರಮಣಯ್ಯನವರ ವಿರುದ್ಧ ಎರಡು ಬಾರಿಯೂ ಸೋಲುಂಡಿದ್ದರು. ಇದೀಗ 2023ರ ವಿಧಾನಸಭೆ ಚುನಾವಣೆಯಲ್ಲಿ ಅನುಕಂಪದ ಆಧಾರದ ಮೇಲೆ ಗೆಲುವು ಸಾಧಿಸಲಿದ್ದಾರೆನ್ನುವ ನಂಬಿಕೆಯಿಂದ ಮೊದಲ ಪಟ್ಟಿಯಲ್ಲೇ ಬಿ.ಮುನೇಗೌಡರನ್ನು ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಅಭ್ಯರ್ಥಿ ಘೋಷಣೆಗೂ ಮುಂಚೆಯೇ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರವೇ ಇತ್ತು. ಆದರೆ ಇದೀಗ ಅಭ್ಯರ್ಥಿಯನ್ನು ಘೋಷಿಸಿದ ಮೇಲೆ ಪ್ರಚಾರವೇ ಇಲ್ಲದಂತಾಗಿದೆ. ಪಕ್ಷದ ಹಿರಿಯ ನಾಯಕರು ಭಿನ್ನಮತದಿಂದ ಇದ್ದವರನ್ನು ಒಂದೇ ವೇದಿಕೆಯಡಿ ಸೇರಿಸಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ಇದು ಮತದಾರರಲ್ಲಿ ಗೊಂದಲ ಮೂಡಿಸಿದಂತಾಗಿದೆ.
ಇನ್ನು ಮಹಾಮಾರಿ ಕೊರೊನಾ ಸಮಯದಲ್ಲಿ ಜನರಿಗೆ ಆಹಾರ ಕಿಟ್‌ಗಳನ್ನು ಹಂಚಿಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಟಿಕೆಟ್ ಆಕಾಂಕ್ಷಿ ದೀರಜ್ ಮುನಿರಾಜು ಪಕ್ಷ ಸಂಘಟನೆಯನ್ನ ಗ್ರಾಮೀಣ ಪ್ರದೇಶದವರೆಗೂ ವಿಸ್ತರಿಸಿದ್ದಾರೆ. ಆದರೂ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಸಮುದಾಯದ ಯಾರಿಗಾದರೂ ಒಬ್ಬರಿಗೆ ಟಿಕೆಟ್ ಕೊಡಬೇಕೆಂದು ಸಮುದಾಯದ ಮುಖಂಡರು ಬಿಜೆಪಿ ವರುಷ್ಠರಿಗೆ ಆಗ್ರಹಿಸಿದ್ದಾರೆ. ಈ ನಡುವೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆಗಿದ್ದ ಸಿ.ಎಸ್.ಕರೀಗೌಡರ ಹೆಸರೂ ಬಿಜೆಪಿ ವಲಯದಲ್ಲಿ ಜೋರಾಗಿ ಪ್ರತಿಧ್ವನಿಸುತ್ತಿದೆ.
Doddaballapur Karnataka Elections
| ವರ್ಷ | ವಿಜೇತರು | ಮತಗಳು | ಸೋತವರು | ಮತಗಳು |
| 2018 | ಟಿ.ವೆಂಕಟರಮಣಯ್ಯ (ಕಾಂಗ್ರೆಸ್) | 73,225 | ಬಿ.ಮುನೇಗೌಡ (ಜೆಡಿಎಸ್) | 63,280 |
| 2013 | ಟಿ.ವೆಂಕಟರಮಣಯ್ಯ (ಕಾಂಗ್ರೆಸ್) | 38,877 | ಬಿ. ಮುನೇಗೌಡ (ಪಕ್ಷೇತರ) | 37,430 |
| 2008 | ಜೆ.ನರಸಿಂಹ ಸ್ವಾಮಿ (ಕಾಂಗ್ರೆಸ್) | 51,724 | ಸಿ. ಚನ್ನಿಗಪ್ಪ (ಜೆಡಿಎಸ್) | 47,970 |
ಒಟ್ಟಿನಲ್ಲಿ ಬಿಜೆಪಿ ನಾಯಕರು ಒಕ್ಕಲಿಗರ ಮತಗಳನ್ನು ಕಬಳಿಸಲು ಕ್ಷೇತ್ರದಲ್ಲಿ ಯಾರನ್ನು ಸ್ಪರ್ಧೆಗಿಳಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications