ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿ 11ರಂದು ದುಬೈನಲ್ಲಿ ರಾಹುಲ್ ಗಾಂಧಿ ಭಾಷಣ

|
Google Oneindia Kannada News

ದುಬೈ, ಜನವರಿ 08 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದುಬೈ ಪ್ರವಾಸಕ್ಕೆ ಸಕಲ ಸಿದ್ಧತೆ ನಡೆದಿದೆ. ಜನವರಿ 11ರಂದು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಜನವರಿ 11 ಮತ್ತು 12ರಂದು ರಾಹುಲ್ ಗಾಂಧಿ ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ. ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಜನವರಿ 11ರಂದು ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಸುಮಾರು 40 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಹೊಸ ಇತಿಹಾಸ ಸೃಷ್ಟಿಸಿದ ಕಾಂಗ್ರೆಸ್, ತೃತೀಯಲಿಂಗಿಗೆ ಪ್ರಮುಖ ಸ್ಥಾನಹೊಸ ಇತಿಹಾಸ ಸೃಷ್ಟಿಸಿದ ಕಾಂಗ್ರೆಸ್, ತೃತೀಯಲಿಂಗಿಗೆ ಪ್ರಮುಖ ಸ್ಥಾನ

ರಾಹುಲ್ ಗಾಂಧಿ ಅವರು ಮೊದಲ ದಿನ ಭಾರತೀಯ ಕಾರ್ಮಿಕರ ಜೀವನ ಕ್ರಮವನ್ನು ವೀಕ್ಷಿಸಲಿದ್ದಾರೆ. ಬಳಿಕ ಅವರ ಜೊತೆ ಕಾರ್ಮಿಕರ ಕ್ಯಾಂಪ್‌ನಲ್ಲಿ ಸಂವಾದ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಅನಿವಾಸಿ ಭಾರತೀಯ ಉದ್ಯಮಿಗಳ ಜೊತೆಯೂ ಮಾತುಕತೆ ನಡೆಸಲಿದ್ದಾರೆ.

ಗೂಗಲ್ ಟ್ರೆಂಡ್ಸ್: ನರೇಂದ್ರ ಮೋದಿಯನ್ನು ಹಿಂದಿಕ್ಕಿದ ರಾಹುಲ್ ಗಾಂಧಿಗೂಗಲ್ ಟ್ರೆಂಡ್ಸ್: ನರೇಂದ್ರ ಮೋದಿಯನ್ನು ಹಿಂದಿಕ್ಕಿದ ರಾಹುಲ್ ಗಾಂಧಿ

Rahul Gandhi UAE visit

ಜನವರಿ 12ರಂದು ಅಬುಧಾಬಿಯ ಶೇಕ್ ಝಾಹಿದ್ ಮಸೀದಿಗೆ ಭೇಟಿ ನೀಡಲಿದ್ದಾರೆ. ಅಬುಧಾಬಿಯಲ್ಲಿ ಅನಿವಾಸಿ ಭಾರತೀಯ ಉದ್ಯಮಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋಲ್ಲ: ರಾಹುಲ್ ಗೆ ಪ್ರಿಯಾ ಪತ್ರಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋಲ್ಲ: ರಾಹುಲ್ ಗೆ ಪ್ರಿಯಾ ಪತ್ರ

'ಕಳೆದ ಒಂದು ವರ್ಷದಿಂದ ಅನಿವಾಸಿ ಭಾರತೀಯರು ರಾಹುಲ್ ಗಾಂಧಿ ಅವರ ದುಬೈ ಭೇಟಿಗೆ ಒತ್ತಾಯಿಸುತ್ತಿದ್ದರು. ಆದರೆ, ಬಿಡುವಿಲ್ಲದ ಕಾರ್ಯಕ್ರಮದಿಂದ ಸಾಧ್ಯವಾಗಿರಲಿಲ್ಲ. ಈ ಸಮಯ ಕೂಡಿ ಬಂದಿದೆ' ಎಂದು ಕಾರ್ಯಕ್ರಮದ ಸಂಯೋಜಕಿ ಡಾ.ಆರತಿಕೃಷ್ಣ ಹೇಳಿದ್ದಾರೆ.

ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದೆ. ಆನ್‌ಲೈನ್‌ ಮೂಲಕ ನೋಂದಣಿ ಕಡ್ಡಾಯ ಎಂಬ ನಿಯಮವೂ ಇಲ್ಲ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಉಚಿತ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ.

English summary
AICC president Rahul Gandhi will visit the UAE on January 11 and 12, 2019. Rahul Gandhi will address Indian community in Dubai International Cricket Stadium on January 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X