• search
  • Live TV
ದುಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ದುಬೈ ಎಕ್ಸ್‌ಪೋ'ದಲ್ಲಿ ಹೂಡಿಕೆಗೆ ಆಹ್ವಾನ ಕೊಟ್ಟ ಕರ್ನಾಟಕ ಸರ್ಕಾರ!

|
Google Oneindia Kannada News

ದುಬೈ, ಅ. 19: "ಇಡೀ ಏಷ್ಯಾ ಖಂಡದ 'ಸ್ಟಾರ್ಟ್‌ಅಪ್ ರಾಜಧಾನಿ' ಆಗಿರುವ ಕರ್ನಾಟಕವು ಮುಂಬರುವ ದಿನಗಳಲ್ಲಿ ಶೈಕ್ಷಣಿಕ, ಆರ್ಥಿಕ ಮತ್ತು ಆರೋಗ್ಯ ತಂತ್ರಜ್ಞಾನ ಕ್ಷೇತ್ರಗಳಲ್ಲೂ ಅಗ್ರಸ್ಥಾನವನ್ನು ಪಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ 'ವರ್ಡ್‌ ದುಬೈ ಎಕ್ಸ್ ಪೊ-2020'ನಲ್ಲಿ 'ಕರ್ನಾಟಕವು ಏಷ್ಯಾದ ಸ್ಟಾರ್ಟಪ್ ರಾಜಧಾನಿಯಾಗಿದ್ದು ಹೇಗೆ?' ವಿಚಾರ ಸಂಕಿರಣದಲ್ಲಿ ಸೋಮವಾರ ಮಾತನಾಡಿದ್ದಾರೆ.

ಕರ್ನಾಟಕವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ನವೋದ್ಯಮಗಳಿಂದ ಗಮನ ಸೆಳೆದಿದೆ. ಈ ವರ್ಷದ ಮೊದಲ 6 ತಿಂಗಳಲ್ಲಿ 17.2 ಶತಕೋಟಿ ಡಾಲರುಗಳಷ್ಟು ಶೋಧನಾ ಬಂಡವಾಳ (ವೆಂಚರ್ ಕ್ಯಾಪಿಟಲ್) ಹೂಡಿಕೆಯಾಗಿದೆ. ರಾಜ್ಯ ಸರಕಾರದ ಉತ್ಸಾಹ ಮತ್ತು ಉದ್ಯಮಸ್ನೇಹಿ ನೀತಿಗಳಿಂದಾಗಿ 'ಡಿಜಿಟಲ್ ಇಂಡಿಯಾ' ಕನಸು ನನಸಾಗುತ್ತಿದೆ ಎಂದರು.

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳು

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳು

"ಕೋವಿಡ್ ಬಿಕ್ಕಟ್ಟಿನ ಕಾಲದಲ್ಲಿ ನಮ್ಮ ತಂತ್ರಜ್ಞಾನವು ಅಗಾಧವಾಗಿ ನೆರವಿಗೆ ಬಂತು. 2021ರಲ್ಲಿ ರಾಜ್ಯದ 8 ಸ್ಟಾರ್ಟ್‌ಅಪ್ ಗಳು ತಲಾ 100 ಕೋಟಿ ಡಾಲರ್ ಮೌಲ್ಯದ ಕಂಪನಿಗಳಾಗಿ ಬೆಳೆದಿದ್ದು ಯೂನಿಕಾರ್ನ್ ಸ್ಥಾನಮಾನವನ್ನು ಗಳಿಸಿಕೊಂಡಿವೆ. ಇದರ ಜೊತೆಗೆ ಇವು ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿವೆ" ವಿಚಾರ ಸಂಕಿರಣದಲ್ಲಿ ಡಾ. ಅಶ್ವಥ್ ನಾರಾಯಣ ಹೇಳಿದರು.

ಹೂಡಿಕೆದಾರರಿಗೆ ಕರ್ನಾಟಕದ ಭರವಸೆ

ಹೂಡಿಕೆದಾರರಿಗೆ ಕರ್ನಾಟಕದ ಭರವಸೆ

ಕರ್ನಾಟಕ ರಾಜ್ಯ ಸರಕಾರವು "ಎಲಿವೇಟ್' ನೀತಿಯ ಮೂಲಕ ಹೊಸ ಬಗೆಯ ನವೋದ್ಯಮಗಳಿಗೆ ಸಂಪೂರ್ಣ ಉತ್ತೇಜನ ನೀಡುತ್ತಿದೆ. ನಗರಾಭಿವೃದ್ಧಿ, ಆರೋಗ್ಯ ಸೇವೆ, ಆಹಾರ ಭದ್ರತೆ, ಸ್ವಚ್ಛ ಪರಿಸರ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ನವೋದ್ಯಮಗಳನ್ನು ಬೆಳೆಸಲು 'ಗ್ರ್ಯಾಂಡ್ ಚಾಲೆಂಜಸ್ ಕರ್ನಾಟಕ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೂಡಿಕೆದಾರರಿಗೆ ಡಾ. ಅಶ್ವಥ್ ನಾರಾಯಣ ಭರವಸೆ ನೀಡಿದರು.

ಹೂಡಿಕೆ ಸ್ನೇಹಿ ರಾಜ್ಯವಾಗಿ ಕರ್ನಾಟಕ

ಹೂಡಿಕೆ ಸ್ನೇಹಿ ರಾಜ್ಯವಾಗಿ ಕರ್ನಾಟಕ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿನಲ್ಲಿ ಪರಿಶಿಷ್ಟ ಜಾತಿ ಮತ್ತು ಜನಾಂಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಉದ್ಯಮಿಗಳ ಆಯ್ದ 75 ನವೋದ್ಯಮಗಳಿಗೆ ಮೂಲನಿಧಿಯಿಂದ ಹಿಡಿದು ಸಂಪೂರ್ಣ ಬೆಂಬಲ ಕೊಡಲಾಗುತ್ತಿದೆ. ಕರ್ನಾಟಕದಲ್ಲಿ ಹೊಸ ಉದ್ಯಮಿಗಳಿಗೆ ಭವಿಷ್ಯವಿದೆ. ಹೂಡಿಕೆ ಸ್ನೇಹಿ ರಾಜ್ಯವಾಗಿ ಕರ್ನಾಟಕ ಬೆಳೆಯುತ್ತಿದೆ. ಅದಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಕೊಡುತ್ತಿದೆ ಎಂದು ಡಾ. ಅಶ್ವಥ್ ನಾರಾಯಣ ವಿಚಾರ ಸಂಕಿರಣದಲ್ಲಿ ಹೂಡಿಕೆದಾರರಿಗೆ ವಿವರಿಸಿದರು.

ಆಧುನಿಕ ತಂತ್ರಜ್ಞಾನಗಳಿಗೆ ಪ್ರೋತ್ಸಾಹ!

ಆಧುನಿಕ ತಂತ್ರಜ್ಞಾನಗಳಿಗೆ ಪ್ರೋತ್ಸಾಹ!

ಭವಿಷ್ಯದ ನಿರ್ಣಾಯಕ ತಂತ್ರಜ್ಞಾನಗಳಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ರೋಬೋಟಿಕ್ಸ್, ಡೇಟಾ ಸೈನ್ಸ್, ಸೈಬರ್ ಸೆಕ್ಯುರಿಟಿ ಮುಂತಾದವುಗಳಿಗೆ ಪ್ರೋತ್ಸಾಹ ನೀಡಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದೆಲ್ಲೆಡೆ ಉತ್ಕೃಷ್ಟತಾ ಕೇಂದ್ರಗಳು, ಅಗತ್ಯ ಸೌಲಭ್ಯಗಳು ಮತ್ತು ಪರಿಪೋಷಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.


"ವರ್ಡ್‌ ದುಬೈ ಎಕ್ಸ್ ಪೊ-2020'ನಲ್ಲಿ "ಕರ್ನಾಟಕವು ಏಷ್ಯಾದ ಸ್ಟಾರ್ಟಪ್ ರಾಜಧಾನಿಯಾಗಿದ್ದು ಹೇಗೆ?' ವಿಚಾರ ಸಂಕಿರನದಲ್ಲಿ ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ ಪ್ರಕಾಶ, ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ನಿರ್ದೇಶಕಿ‌ ಮೀನಾ ನಾಗರಾಜ ಭಾಗವಹಿಸಿದ್ದರು.

English summary
Digi tech ecosystem in Karnataka offers plenty to innovate: Dr.C.N. Ashwatha Narayana. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X